ವಲಸೆ ಕಾರ್ಮಿಕರ ಪತ್ತೆ ಹಚ್ಚಿ, ಕಾಫಿ ತೋಟಗಳಲ್ಲಿ ಕೆಲಸ ಮಾಡುವ ಹಾಗೂ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಕಡೆಗಳಲ್ಲಿ ಮಕ್ಕಳಿಗೆ ತಪ್ಪದಂತೆ ಲಸಿಕೆ ನೀಡಲು ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರು. ಜೂನ್ ೨೮ ರಂದು ಬೂತ್ ಮಟ್ಟದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದೆ. ನಂತರ ನಗರ ಪ್ರದೇಶಗಳಲ್ಲಿ ಮೂರು ದಿನ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಎರಡು ದಿನ ಮನೆ ಮನೆಗೆ ಭೇಟಿ ನೀಡಿ ಲಸಿಕೆ ಹಾಕಲಾಗುವುದು ಎಂದು ತಿಳಿಸಿದರು. ಲಸಿಕೆಯನ್ನು ಸುರಕ್ಷಿತವಾಗಿಡಲು ಕೋಲ್ಡ್ ಚೈನ್ ಲಿಂಕ್ ಇರಬೇಕಾಗಿರುವುದರಿಂದ ನಿರಂತರವಾಗಿ ವಿದ್ಯುತ್ ಸರಬರಾಜು ಇರುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು.
ಕನ್ನಡಪ್ರಭ ವಾರ್ತೆ ಹಾಸನ
ಜಿಲ್ಲೆಯಲ್ಲಿ 5 ವರ್ಷದೊಳಗಿನ ಯಾವುದೇ ಮಗುವಿಗೂ ಪಲ್ಸ್ ಪೋಲಿಯೋ ಲಸಿಕೆ ತಪ್ಪದಂತೆ ಹಾಕಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೋ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜೂನ್ ೨೮ರಂದು ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮವನ್ನು ನಿಗದಿತ ಬೂತ್‌ಗಳಲ್ಲಿ ಹಾಗೂ ಅಂದು ಸಾರ್ವಜನಿಕರು ಪ್ರಯಾಣ ಮಾಡುವ ಸಂದರ್ಭದಲ್ಲಿ ಅನುಕೂಲವಾಗುವಂತೆ ರೈಲ್ವೆ ಹಾಗೂ ಬಸ್ ನಿಲ್ದಾಣಗಳಲ್ಲಿಯೂ ಲಸಿಕೆ ಹಾಕಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ವಲಸೆ ಕಾರ್ಮಿಕರ ಪತ್ತೆ ಹಚ್ಚಿ, ಕಾಫಿ ತೋಟಗಳಲ್ಲಿ ಕೆಲಸ ಮಾಡುವ ಹಾಗೂ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಕಡೆಗಳಲ್ಲಿ ಮಕ್ಕಳಿಗೆ ತಪ್ಪದಂತೆ ಲಸಿಕೆ ನೀಡಲು ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಜೂನ್ ೨೮ ರಂದು ಬೂತ್ ಮಟ್ಟದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದೆ. ನಂತರ ನಗರ ಪ್ರದೇಶಗಳಲ್ಲಿ ಮೂರು ದಿನ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಎರಡು ದಿನ ಮನೆ ಮನೆಗೆ ಭೇಟಿ ನೀಡಿ ಲಸಿಕೆ ಹಾಕಲಾಗುವುದು ಎಂದು ತಿಳಿಸಿದರು.
ಲಸಿಕೆಯನ್ನು ಸುರಕ್ಷಿತವಾಗಿಡಲು ಕೋಲ್ಡ್ ಚೈನ್ ಲಿಂಕ್ ಇರಬೇಕಾಗಿರುವುದರಿಂದ ನಿರಂತರವಾಗಿ ವಿದ್ಯುತ್ ಸರಬರಾಜು ಇರುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು.
ಲಸಿಕೆ ಸಂದರ್ಭದಲ್ಲಿ ಅಗತ್ಯ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ಅಧಿಕಾರಿಗೆ ಸೂಚಿಸಿದರು. ಎಲ್ಲಾ ಅಧಿಕಾರಿಗಳು ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಿ ಯಾವುದೇ ಮಗುವಿವು ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಲು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅನಿಲ್, ಆರ್ ಸಿ.ಎಚ್.ಅಧಿಕಾರಿ ಡಾ.ಶಿವಶಂಕರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.