ಅರ್ಥಪೂರ್ಣವಾಗಿ ಜಯಂತಿ ಆಚರಣೆಗೆ ಕ್ರಮ ಕೈಗೊಳ್ಳಿ: ಕೆ. ರಾಘವೇಂದ್ರ ರಾವ್

KannadaprabhaNewsNetwork |  
Published : Apr 02, 2026, 02:15 AM IST
ಸಿದ್ಧತಾ ಸಭೆಯಲ್ಲಿ ತಹಸೀಲ್ದಾರ್ ಕೆ. ರಾಘವೇಂದ್ರ ರಾವ್ ಮಾತನಾಡಿದರು. | Kannada Prabha

ಸಾರಾಂಶ

ಏ. ೫ರಂದು ಡಾ. ಬಾಬು ಜಗಜೀವನರಾಂ ಜಯಂತಿಯನ್ನು ಆಚರಿಸಲಾಗುವುದು. ಏ. ೧೪ರಂದು ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಸಮುದಾಯದವರ ಸಹಕಾರದಿಂದ ಸಡಗರ ಹಾಗೂ ಸಂಭ್ರಮದಿಂದ ಆಚರಣೆ ಮಾಡಲಾಗುವುದು.

ಶಿರಹಟ್ಟಿ: ಡಾ. ಬಾಬು ಜಗಜೀವನರಾಂ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂದೇಶಗಳನ್ನು ಜೀವನ ಮೌಲ್ಯಗಳನ್ನು ಸಮಾಜಕ್ಕೆ ತಿಳಿಸಲು ಈ ಇಬ್ಬರೂ ಮಹನೀಯರ ಜಯಂತಿಯನ್ನು ಅರ್ಥಪೂರ್ಣ, ವಿಜೃಂಭಣೆಯಿಂದ ಆಚರಣೆಗೆ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ತಹಸೀಲ್ದಾರ್ ಕೆ. ರಾಘವೇಂದ್ರ ರಾವ್ ಸೂಚಿಸಿದರು.ಬುಧವಾರ ತಹಸೀಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ ಇಬ್ಬರು ನಾಯಕರ ಜನ್ಮದಿನಾಚರಣೆ ಆಚರಣೆಗೆ ಕರೆದಿದ್ದ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಸಮಾಜದ ಮುಖಂಡರೊಂದಿಗೆ ಚರ್ಚಿಸಿದರು.

ಏ. ೫ರಂದು ಡಾ. ಬಾಬು ಜಗಜೀವನರಾಂ ಜಯಂತಿಯನ್ನು ಆಚರಿಸಲಾಗುವುದು. ಏ. ೧೪ರಂದು ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಸಮುದಾಯದವರ ಸಹಕಾರದಿಂದ ಸಡಗರ ಹಾಗೂ ಸಂಭ್ರಮದಿಂದ ಆಚರಣೆ ಮಾಡಲಾಗುವುದು ಎಂದರು.ಜಯಂತಿಗಳ ಆಚರಣೆ ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ. ಎಲ್ಲ ಸಮುದಾಯದವರು ಸೇರಿ ಜಯಂತಿಗಳನ್ನು ಆಚರಿಸಬೇಕು. ಜಯಂತಿಗಳ ಆಚರಣೆಯ ಉದ್ದೇಶ ಮಹನೀಯರ ಆದರ್ಶಗಳನ್ನು ಪಾಲನೆ ಮಾಡುವುದು ಆಗಿದೆ. ಪ್ರತಿ ವರ್ಷದಂತೆ ಈ ಬಾರಿಯು ಶಿಷ್ಟಾಚಾರದ ಪ್ರಕಾರ ಕಾರ್ಯಕ್ರಮ ಅಚ್ಚುಕಟ್ಟಾಗಿ ಮಾಡಬೇಕು. ಎಲ್ಲ ಇಲಾಖೆ ಅಧಿಕಾರಿಗಳು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಹಾಜರಿರಬೇಕು. ಸಮಾಜದ ಮುಖಂಡರು ಯಶಸ್ವಿ ಕಾರ್ಯಕ್ರಮ ಆಯೋಜನೆಗೆ ಸಹಕಾರ ನೀಡಬೇಕು ಎಂದರು.ಸಾರೋಟಿನಲ್ಲಿ ಉಭಯ ನಾಯಕರ ಭಾವಚಿತ್ರ ಮೆರವಣಿಗೆ ಮಾಡಬೇಕು ಎಂದು ಮುಖಂಡರಾದ, ಜಾನು ಲಮಾಣಿ, ಮೋಹನ್ ಗುತ್ತೆಮ್ಮನವರ, ನಾಗರಾಜ ಲಕ್ಕುಂಡಿ, ಮುತ್ತು ಭಾವಿಮನಿ ಆಗ್ರಹಿಸಿದರು.ಮುಖಂಡರಾದ ಮೋಹನ್ ಗುತ್ತೆಮ್ಮನವರ, ನಾಗರಾಜ ಲಕ್ಕುಂಡಿ, ಮುತ್ತು ಭಾವಿಮನಿ, ರವಿ ಗುಡಿಮನಿ, ಜಾನು ಲಮಾಣಿ, ಬಸಣ್ಣ ನಾಯ್ಕರ, ಶಿವನಗೌಡ ಪಾಟೀಲ, ಪ್ರಕಾಶ ಬಡೆಣ್ಣವರ, ಪಿಎಸ್‌ಐ ಈರಪ್ಪ ರಿತ್ತಿ, ತಾಪಂ ಇಒ ರಾಮಪ್ಪ ದೊಡ್ಡಮನಿ, ಬಿಇಒ ಎಚ್. ನಾಣಕೀ ನಾಯಕ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಗೋಪಾಲ ಲಮಾಣಿ, ಶಿವಪ್ಪ ಹದ್ಲಿ, ಎಂ.ಎಸ್. ಸಂಕನೂರ, ಮೃತ್ಯುಂಜಯ ಗುಡ್ಡದಾನವೇರಿ, ರಾಮಪ್ಪ ಪೂಜಾರ, ಸುಭಾಸ ದೈಗೊಂಡ, ಪಪಂ ಮುಖ್ಯಾಧಿಕಾರಿ ಸವಿತಾ ತಾಂಭ್ರೆ, ಮಲ್ಲೇಶ ತಳವಾರ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ನೋಟಿಸ್ ನೀಡಲು ಸೂಚನೆ: ಒಂದು ವಾರ ಮುಂಚಿತವಾಗಿಯೇ ಎಲ್ಲ ಇಲಾಖೆ ಅಧಿಕಾರಿಗಳಿಗೆ ಪೂರ್ವಭಾವಿ ಸಭೆಗೆ ಕಡ್ಡಾಯವಾಗಿ ಹಾಜರಾಗುವಂತೆ ನೋಟಿಸ್ ನೀಡಿ, ಫೋನ್ ಕರೆ ಮಾಡಿದರೂ ಯಾರ ಅನುಮತಿಯನ್ನು ಪಡೆಯದೇ ಸಭೆಗೆ ಗೈರಾಗಿರುವ ಅಧಿಕಾರಿಗಳಿಗೆ ನೋಟಿಸ್ ನೀಡಿ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಸಮಾಜದ ಮುಖಂಡರು ಆಗ್ರಹಿಸಿದರು. ಮಹನೀಯರ ಜಯಂತಿ ಆಚರಣೆ ಮಾಡುವ ಕುರಿತ ಕರೆದ ಸಭೆಗೂ ಅಧಿಕಾರಿಗಳು ಬರದೇ ಅಗೌರವ ತೋರಿದ್ದಾರೆ. ಪ್ರತಿ ಬಾರಿಯೂ ಇದೇ ವ್ಯವಸ್ಥೆ ಕಂಡುಬರುತ್ತಿದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಡವರಿಗೆ ಸಾಮೂಹಿಕ ವಿವಾಹ ಅನುಕೂಲ: ಮುದುಕೇಶ್ವರ ಶಿವಾಚಾರ್ಯರು ಸ್ವಾಮಿಗಳು
ಲಿಂ. ಸಿದ್ಧಗಂಗಾ ಡಾ. ಶಿವಕುಮಾರ ಶ್ರೀ ಸದಾ ಸ್ಮರಣೀಯರು: ಜಗದೀಶ ಸಂಕನೂರ