ಪರೀಕ್ಷೆ ವ್ಯವಸ್ಥಿತವಾಗಿ ನಡೆಸಲು ಕ್ರಮ ವಹಿಸಿ: ಡಿಸಿ ಶ್ರೀಧರ್

KannadaprabhaNewsNetwork |  
Published : Mar 11, 2026, 02:15 AM IST
ಸಭೆಯನ್ನು ಉದ್ದೇಶಿಸಿ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಮಾತನಾಡಿದರು.  | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಒಟ್ಟು 61 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಅಲ್ಲಿ ಕುಡಿಯುವ ನೀರು, ವಿದ್ಯುತ್ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳು ಇರುವಂತೆ ನೋಡಿಕೊಳ್ಳಬೇಕು.

ಗದಗ: ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ನಡೆಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಸೂಚನೆ ನೀಡಿದರು.

ಇಲ್ಲಿಯ ಜಿಪಂ ಸಭಾಂಗಣದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಕುರಿತು ಮಂಗಳವಾರ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರೀಕ್ಷೆಗಳಲ್ಲಿ ಯಾವುದೇ ಅಕ್ರಮಗಳು, ಅವ್ಯವಹಾರಗಳು ನಡೆಯದಂತೆ ನೋಡಿಕೊಳ್ಳಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಆಸನದ ವ್ಯವಸ್ಥೆ ಇರುವಂತೆ ಕ್ರಮ ಜರುಗಿಸಬೇಕು.

ಜಿಲ್ಲೆಯಲ್ಲಿ ಒಟ್ಟು 61 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಅಲ್ಲಿ ಕುಡಿಯುವ ನೀರು, ವಿದ್ಯುತ್ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳು ಇರುವಂತೆ ನೋಡಿಕೊಳ್ಳಬೇಕು. ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಪರೀಕ್ಷಾ ಅವಧಿಯಲ್ಲಿ ಯಾವುದೇ ಲೋಪದೋಷಗಳಾಗದಂತೆ ಕ್ರಮ ಜರುಗಿಸಬೇಕು ಎಂದು ಸೂಚಿಸಿದರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರುಡಿ ಮಾತನಾಡಿ, ಎಸ್‌ಎಸ್‌ಎಲ್‌ಸಿ-1 ಪರೀಕ್ಷೆ ಮಾ 18ರಿಂದ ಏ. 2ರ ವರೆಗೆ ಜಿಲ್ಲೆಯ 61 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿವೆ. ಒಟ್ಟು 17,146 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಲಭ್ಯ ಒದಗಿಸಲು ಕ್ರಮ ವಹಿಸಲಾಗಿದೆ. ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ನಡೆಸಲು ಸಕಲ ಕ್ರಮ ಕೈಗೊಳ್ಳಲಾಗಿದೆ ಎಂದರು.

ಪರೀಕ್ಷಾ ಕೇಂದ್ರಗಳ ಸುತ್ತ ಸೂಕ್ತ ಪೊಲೀಸ್‌ ಬಂದೋಬಸ್ತ್‌, ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಹೋಗಿ ಬರಲು ಅನುಕೂಲವಾಗುವಂತೆ ಸೂಕ್ತ ಸಾರಿಗೆ ವ್ಯವಸ್ಥೆ ಕುರಿತು ಚರ್ಚಿಸಲಾಯಿತು. ಡಿವೈಎಸ್‌ಪಿ ಮಹಾಂತೇಶ ಸಜ್ಜನ, ಡಯಟ್ ಪ್ರಾಚಾರ್ಯ ಜೆ.ಎಂ. ಮುಂದಿನಮನಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನಕಾಚಲಪತಿ ಜಾತ್ರೆ ಸಜ್ಜುಗೊಂಡ ಕನಕಗಿರಿ
ಕಾರ್ಖಾನೆ ಸಮಸ್ಯೆ ಪರಿಹಾರಕ್ಕೆ ಶೀಘ್ರ ಎಚ್‌ಡಿಕೆ ಭೇಟಿ