ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಲ್ಲಾ ಪಂಚಾಯತಿ ನೂತನ ಸಭಾಭವನದಲ್ಲಿ ಜರುಗಿದ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಿವಿಧ ವಸತಿ ನಿಲಯಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಫಲಿತಾಂಶಗಳ ವಿಮರ್ಶೆ ಮಾಡಿಕೊಂಡು ಕಡಿಮೆ ಫಲಿತಾಂಶ ಪಡೆದಿರುವ ಮಕ್ಕಳಿಗೆ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಹಾಗೂ ಚಟುವಟಿಕೆ ಕೈಗೊಂಡು ಫಲಿತಾಂಶ ಸುಧಾರಣೆಗೆ ಕ್ರಮ ವಹಿಸಬೇಕು. ಮಕ್ಕಳ ವಿಚಾರದಲ್ಲಿ ನಿರ್ಲಕ್ಷ್ಯ ಸಲ್ಲದು ಎಂದು ಸಲಹೆ ನೀಡಿದರು.
ವಸತಿ ನಿಲಯಗಳಿಗೆ ಎಲ್ಲ ರೀತಿಯ ಸೌಲಭ್ಯ ನೀಡಲಾಗುತ್ತಿದೆ. ಆದರೂ ಸಹ ಫಲಿತಾಂಶದಲ್ಲಿ ಮಾತ್ರ ಕಡಿಮೆಯಾಗುತ್ತಿದೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ನೂರಕ್ಕೆ ನೂರರಷ್ಟು ಫಲಿತಾಂಶವಾಗಬೇಕು. ಈ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಿಂದ ಹಿಡಿದು ತಾಲೂಕು ಮಟ್ಟ ಹಾಗೂ ವಸವಿ ನಿಲಯದ ಮೇಲ್ವಿಚಾರಕರು ಸಹ ತಮ್ಮ ತಮ್ಮ ಜವಾಬ್ದಾರಿ ಅರಿತು ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸಲು ತಿಳಿಸಿದ ಅವರು, ಫಲಿತಾಂಶ ಸುಧಾರಣೆ ಆಗದಿದ್ದರೆ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು.ಪ್ರತಿಯೊಂದು ವಸತಿ ಶಾಲೆಯಲ್ಲಿ ಮಕ್ಕಳ ಬಯೋಮ್ಯಾಟ್ರಿಕ್ ಹಾಜರಾತಿ ಕಡ್ಡಾಯವಾಗಿ ಮಾಡುವ ಮೂಲಕ ನಿಲಯಗಳಲ್ಲಿ ಸದ್ಯ ಇರುವ ಮೂಲಭೂತ ಸೌಲಭ್ಯಗಳನ್ನೇ ಸರಿಪಡಿಸಿಕೊಂಡು ಸರಿಯಾಗಿ ನಿರ್ವಹಣೆಯಾಗುವಂತೆ ನೋಡಿಕೊಳ್ಳಬೇಕು. ಪದೇ ಪದೆ ಸಮಸ್ಯೆಗಳನ್ನು ಹೇಳುವಂತಿಲ್ಲ. ಸ್ವಚ್ಛತೆಗೆ ಹೆಚ್ಚಿನ ಗಮನಹರಿಸಿ ಉತ್ತಮ ಶೈಕ್ಷಣಿಕ ವಾತಾವರಣ ಸೃಷ್ಟಿಸುವ ಕಾರ್ಯವಾಗಬೇಕು. ಅಂದಾಗ ಮಾತ್ರ ಮಕ್ಕಳ ಬೆಳೆವಣಿಗೆ ಕಾಣಬಹುದಾಗಿದೆ. ಮೇಲ್ವಿಚಾರಕರು ಶಾಲೆಗಳಿಗೆ ಭೇಟಿ ನೀಡಿ ಶಿಕ್ಷಕರ ಜೊತೆಗೆ ಶೈಕ್ಷಣಿಕ ಚಟುವಟಿಕೆ ಬಗ್ಗೆ ಚರ್ಚಿಸಿ ಫಲಿತಾಂಶ ಸುಧಾರಣೆ ಕ್ರಮವಹಿಸಲು ತಿಳಿಸಿದರು.
ಮೆನು ಪ್ರಕಾರ ಮಕ್ಕಳಿಗೆ ಗುಣಮಟ್ಟದ ಶುಚಿಯಾದ ಆಹಾರ ಪೂರೈಸಬೇಕು. ವಸತಿ ನಿಲಯಗಳಲ್ಲಿ ಅನಧಿಕೃತ ವ್ಯಕ್ತಿಗಳ ಪ್ರವೇಶವನ್ನು ನಿರ್ಬಂಧಿಸುವುದರ ಜೊತೆಗೆ ನಿಲಯದ ಮಕ್ಕಳನ್ನು ತಮ್ಮ ಮಕ್ಕಳಂತೆ ನೋಡಿಕೊಂಡು ಅವರ ಶೈಕ್ಷಣಿಕ ಬೆಳೆವಣಿಗೆಗೆ ಪ್ರಾಮಾಣಿಕವಾಗಿ ಕೆಲಸ ಮಾಡಲು ತಿಳಿಸಿದ ಅವರು, ತಮ್ಮ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದಲ್ಲಿ ಶಿಸ್ತುಕ್ರಮಕ್ಕೆ ಕೈಗೊಳ್ಳಲಾಗುವುದು.
- ಶಶಿಧರ ಕುರೇರ ಜಿಪಂ ಸಿಇಒ