ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಿಸಲು ಕ್ರಮ ವಹಿಸಿ

KannadaprabhaNewsNetwork |  
Published : Jul 19, 2025, 02:00 AM IST
18ಕೆಆರ್ ಎಂಎನ್ 3.ಜೆಪಿಜಿನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪರವರು  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. | Kannada Prabha

ಸಾರಾಂಶ

ರಾಮನಗರ: ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಾಕಷ್ಟು ಸೌಲಭ್ಯಗಳನ್ನು ಒದಗಿಸಿಕೊಟ್ಟಿರುವ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರವೇಶಾತಿ ಮತ್ತಷ್ಟು ಹೆಚ್ಚಳವಾಗಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ರಾಮನಗರ: ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಾಕಷ್ಟು ಸೌಲಭ್ಯಗಳನ್ನು ಒದಗಿಸಿಕೊಟ್ಟಿರುವ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರವೇಶಾತಿ ಮತ್ತಷ್ಟು ಹೆಚ್ಚಳವಾಗಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ಜಿಪಂ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ದೊರಕುವ ಸೌಲಭ್ಯಗಳ ಕುರಿತು ಅವರ ಪೋಷಕರಿಗೆ ಅರಿವು ಮೂಡಿಸಬೇಕು.

ಜು.30ರವರೆಗೆ ಶಾಲಾ ಪ್ರವೇಶಕ್ಕೆ ಅವಕಾಶವಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಲು ಕ್ರಮ ವಹಿಸಬೇಕು. ಜುಲೈ ಅಂತ್ಯದೊಳಗಾಗಿ ಎಲ್ಲಾ ಮಕ್ಕಳಿಗೆ ಸಮವಸ್ತ್ರ ಹಾಗೂ ಪಠ್ಯಪುಸಕ್ತ ವಿತರಿಸಬೇಕು. ಮಕ್ಕಳಿಗೆ ಶಾಲೆಗಳಲ್ಲಿ ವಿತರಿಸುವ ಶೂ ಹಾಗೂ ಸಾಕ್ಸ್ ಗುಣಮಟ್ಟದಿಂದ ಕೂಡಿರುವಂತೆ ನೋಡಿಕೊಳ್ಳಬೇಕು. ಶಿಕ್ಷಕರು ಹಾಗೂ ಅಧಿಕಾರಿಗಳು ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಕರೆತರಲು ಮನೆಮನೆಗೆ ಭೇಟಿ ನೀಡಿ ಶಾಲೆಗೆ ಬಾ ಎಂಬ ಅಭಿಯಾನ ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು.

ಪೋಷಕರಿಗೆ ಸರ್ಕಾರಿ ಶಾಲೆಯ ಸೌಲಭ್ಯಗಳು, ಗುಣಮಟ್ಟದ ಶಿಕ್ಷಣದ ಕುರಿತು ಮನವೊಲಿಸಿ ಪ್ರವೇಶಾತಿಗೆ ಕ್ರಮ ವಹಿಸಬೇಕು. ಪ್ರವೇಶಾತಿ ಸಂಬಂಧಿ ಜಿಪಂ ಸಿಇಒ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ, ಮಕ್ಕಳ ದಾಖಲಾತಿಗೆ ಇರುವ ಸಮಸ್ಯೆಗಳನ್ನು ಚರ್ಚಿಸಿ, ಅವುಗಳನ್ನು ಬಗೆಹರಿಸಿ ಮಕ್ಕಳು ಶಾಲೆಗಳಿಗೆ ದಾಖಲಾಗಲು ಕ್ರಮವಹಿಸಬೇಕು. ಜಿಲ್ಲೆಯಲ್ಲಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡು ಉತ್ತಮ ಫಲಿತಾಂಶಕ್ಕೆ ಒತ್ತು ನೀಡಬೇಕು. ಜಿಲ್ಲೆಗೆ ಇನ್ನು ಹೆಚ್ಚಿನ ಫಲಿತಾಂಶ ಬರಲು ಡೀಸಿ, ಎಡೀಸಿ, ಜಿಪಂ ಸಿಇಒ ವಿಶೇಷ ತರಗತಿ ಏರ್ಪಡಿಸಿ ಅರಿವು ಮೂಡಿಸಬೇಕು ಎಂದು ಸೂಚಿಸಿದರು.

ಅವಶ್ಯವಿರುವ ಸರ್ಕಾರಿ ಶಾಲೆಗಳಿಗೆ "ಸ್ಮಾರ್ಟ್ ಕ್ಲಾಸ್ ರೂಂ " ಗಳನ್ನು ಕಲ್ಪಿಸಬೇಕು. ಬಿಇಒಗಳು ತಮ್ಮ ವ್ಯಾಪ್ತಿಯ ಸರ್ಕಾರಿ ಶಾಲೆಗಳಿಗೆ ಕಡ್ಡಾಯವಾಗಿ ಭೇಟಿನೀಡಿ ಅಲ್ಲಿನ ವಸ್ತುಸ್ಥಿತಿ ಅರಿತು ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳು ಸರ್ಕಾರಿ ಶಾಲೆಗಳ ಬಗ್ಗೆ ಹೆಚ್ಚು ಕಾಳಜಿವಹಿಸಿ ಶಾಲೆಗಳನ್ನು ಅಭಿವೃದ್ಧಿ ಪಡಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್, ಜಿಪಂ ಸಿಇಒ ಅನ್ಮೋಲ್ ಜೈನ್, ಪ್ರಾಥಮಿಕ ಶಿಕ್ಷಣ ಇಲಾಖೆ ನಿರ್ದೇಶಕರಾದ ಅನಿತಾ ನಜಾರೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ವಿ.ಸಿ ಬಸವರಾಜೇಗೌಡ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿದೇಶಕರಾದ ನಾಗಮ್ಮ ಮತ್ತಿತರರು ಉಪಸ್ಥಿತರಿದ್ದರು.

18ಕೆಆರ್ ಎಂಎನ್ 3.ಜೆಪಿಜಿ

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

PREV

Recommended Stories

ಕಾರ್ಮಿಕರು ಒಪ್ಪಿದ್ರೆ 10 ಗಂಟೆ ಕೆಲಸಕ್ಕೆ ಓಕೆ : ಲಾಡ್‌
‘ಸಾವಿರಾರು ಶವ ಹೂಳಲು ಧರ್ಮಸ್ಥಳ ಗ್ರಾಮದಲ್ಲಿ ಮಹಾಭಾರತ ಯುದ್ಧ ನಡೆದಿಲ್ಲ’