ಕನ್ನಡಪ್ರಭ ವಾರ್ತೆ ಮೈಸೂರು
ಬುಧವಾರ ಟಿ.ನರಸೀಪುರ ತಾಲೂಕು ಸೋಮನಾಥಪುರ ಗ್ರಾಪಂ ಸಭಾಂಗಣದಲ್ಲಿ ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಹಲವು ವಿಷಯಗಳ ಕುರಿತು ಚರ್ಚಿಸಿ ಅವರು ಮಾತನಾಡಿದರು.
ಬಾಕಿ ಇರುವ ಜಲ ಜೀವನ್ ಮಿಷನ್ ಕಾಮಗಾರಿ ತ್ವರಿತವಾಗಿ ಮುಂದಿನ ಒಂದು ತಿಂಗಳೊಳಗೆ ಪೂರ್ಣಗೊಳಿಸಲು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಂಜಿನಿಯರ್ ಅವರಿಗೆ ತಿಳಿಸಿದರು.ನರೇಗಾ ಯೋಜನೆಯಡಿ ಬೂದು ನೀರು ನಿರ್ವಹಣಾ ಕಾಮಗಾರಿಯನ್ನು ಅತೀ ಶೀಘ್ರದಲ್ಲೇ ಪ್ರಾರಂಭಿಸಬೇಕು ಎಂದು ತಿಳಿಸುತ್ತಾ ಈ ಕಾಮಗಾರಿಗಳಿಂದ ಸಾರ್ವಜನಿಕರಿಗೆ ಆಗುವ ಅನುಕೂಲಗಳ ಬಗ್ಗೆ ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರಿಗೆ ಮಾಹಿತಿ ನೀಡಿದರು.
ನರೇಗಾ ಯೋಜನೆಯಡಿ ಸಮುದಾಯ ಕಾಮಗಾರಿಗೆ ಹೆಚ್ಚಿನ ಒತ್ತು ನೀಡುವ ಮೂಲಕ ಹೆಚ್ಚಿನ ಜನರಿಗೆ ಉದ್ಯೋಗ ಕಲ್ಪಿಸಿಕೊಡುವಂತೆ ಹಾಗೂ ಕಾಮಗಾರಿಗಳಲ್ಲಿ ಮಹಿಳೆಯರು ಹೆಚ್ಚಾಗಿ ಭಾಗವಹಿಸುವಂತೆ ಅರಿವು ಮೂಡಿಸಬೇಕು ಎಂಸಿದರು.
ಸಂಜೀವಿನಿ ಸಂಘದವರಿಂದ ತಯಾರಾದ ಸಾಂಬಾರು ಪುಡಿ ಮತ್ತು ಉಪ್ಪಿನಕಾಯಿ ಮಾರಾಟ ಮಾಡಲು ಅನುಕೂಲವಾಗುವಂತೆ ಅಂಗಡಿ ವ್ಯವಸ್ಥೆ ಮಾಡಿಕೊಡುವಂತೆ ಪಿ.ಡಿ.ಒ ಅವರಿಗೆ ಸೂಚಿಸಿದರು. ಮಹಿಳಾ ಸಂಘದವರು ನಡೆಸುತ್ತಿರುವ ಬಳೆ ಅಂಗಡಿ, ಸೀರೆ ಅಂಗಡಿ, ಗೊಂಬೆ ಅಂಗಡಿ, ಸಿಗಡಿ ಮತ್ತು ಕರಿಮೀನು ಮಾರಾಟ ಮಾಡಲು ಅನುಕೂಲವಾಗುವಂತೆ ಪಿಡಿಒ ಅವರಿಗೆ ಮಾಹಿತಿ ನೀಡಲು ಸೂಚಿಸಿದರು.
ಗ್ರಂಥಾಲಯಕ್ಕೆ ಭೇಟಿ ನೀಡಿ ಪುಸ್ತಕಗಳು ಹಾಗೂ ರಿಜಿಸ್ಟರ್ ಗಳನ್ನು ಪರಿಶೀಲಿಸಿ ಕಟ್ಟಡವನ್ನು ದುರಸ್ತಿಗೊಳಿಸಲು ಕ್ರಮ ವಹಿಸಬೇಕೆಂದು ತಿಳಿಸಿದರು.ಬೇಸಿಗೆ ಪ್ರಾರಂಭವಾಗಿರುವುದರಿಂದ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದರು.