ಕನ್ನಡಪ್ರಭವಾರ್ತೆ ತುರುವೇಕೆರೆ
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕುಡಿಯುವ ನೀರಿನ ಕುರಿತ ಸಭೆಯಲ್ಲಿ ತಾಲೂಕಿನ ಎಲ್ಲಾ ಪಿಡಿಒಗಳೊಂದಿಗೆ ಮಾತನಾಡಿದ ಅವರು ಬೇರೆ ತಾಲೂಕುಗಳಿಗೆ ಹೋಲಿಸಿದರೆ ನಮ್ಮ ತಾಲೂಕು ಸುಭಿಕ್ಷವಾಗಿದೆ. ಬೆರಳೆಣಿಕೆಯಷ್ಟು ಗ್ರಾಮಗಳಲ್ಲಿ ಮಾತ್ರ ನೀರಿಗೆ ತೊಂದರೆಯಾಗಿದೆ. ಕೂಡಲೇ ಹೊಸದಾಗಿ ಬೋರ್ ವೆಲ್ ಗಳನ್ನು ಕೊರೆಸುವ ಮೂಲಕ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕೆಂದು ಶಾಸಕರು ಸೂಚಿಸಿದರು.
ಪಟ್ಟಣದಲ್ಲಿ ಐದು ದಿನಗಳಿಗೊಮ್ಮೆ ನೀರು ಸರಬರಾಜು ಮಾಡಲಾಗುತ್ತಿದೆ. ಇದಕ್ಕೆ ವಿದ್ಯುತ್ ಇಲಾಖೆಯ ನಿರ್ಲಕ್ಷ್ಯವೇ ಕಾರಣ. ಮಲ್ಲಾಘಟ್ಟ ಕೆರೆಯಲ್ಲಿ ಸಾಕಷ್ಟು ನೀರಿದ್ದರೂ ಸಹ ಪಟ್ಟಣಕ್ಕೆ ಸರಿಯಾಗಿ ನೀರು ಸರಬರಾಗುತ್ತಿಲ್ಲ ಎಂಬ ದೂರಿದೆ. ಪಟ್ಟಣದಿಂದ ಮಲ್ಲಾಘಟ್ಟದ ನೀರಿನ ಘಟಕಕ್ಕೆ ನಿರಂತರ ವಿದ್ಯುತ್ ಸರಬರಾಜು ಮಾಡಬೇಕೆಂಬ ಸೂಚನೆ ಇದ್ದರೂ ಸಹ ಪದೇ ಪದೇ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಮಾಡಲಾಗುತ್ತಿದೆ. ಕೂಡಲೇ ವಿದ್ಯುತ್ ಸಂಪರ್ಕಕ್ಕೆ ಅಡೆತಡೆಯಿರುವ ಸಮಸ್ಯೆಯನ್ನು ಬಗೆಹರಿಸಬೇಕೆಂದು ಬೆಸ್ಕಾಂ ಎಇಇ ಗೆ ಶಾಸಕ ಎಂ.ಟಿ.ಕೃಷ್ಣಪ್ಪನವರು ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ತಹಸೀಲ್ದಾರ್ ಕುಂಇ ಅಹಮದ್, ಇಓ ಅನಂತರಾಜು ಇದ್ದರು.