ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಪಂ ಸಭಾಭವನದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಆಡಳಿತಾಧಿಕಾರಿಗಳೊಂದಿಗೆ ಕುಡಿಯುವ ನೀರು ಸರಬರಾಜು ಕುರಿತು ವಿಡಿಯೋ ಸಂವಾದ ಸಭೆ ನಡೆಸಿ ಮಾತನಾಡಿದ ಅವರು, ಯಾವ ಯಾವ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದೆ ಎಂದು ತಿಳಿದುಕೊಂಡು ಪರಿಹಾರ ಕಂಡುಕೊಳ್ಳಬೇಕು. ಸಾರ್ವಜನಿಕರಿಂದ ದೂರುಗಳು ಬರದಂತೆ ನೋಡಿಕೊಳ್ಳಬೇಕು. ಒಂದು ವೇಳೆ ದೂರು ಬಂದರೂ ಸಹ 24 ಗಂಟೆಯೊಳಗೆ ಸಮಸ್ಯೆ ಬಗೆಹರಿಸುವ ಕೆಲಸವಾಗಬೇಕು. ಪಂಚಾಯಿತಿ ಬೋರವೆಲ್ ಬಳಕೆಗೆ ಯೋಗ್ಯವಲ್ಲ ಎಂದು ಕಂಡುಬಂದಲ್ಲಿ ಖಾಸಗಿ ಬೋರವೆಲ್ ಗುರುತಿಸಿಕೊಂಡು ಅವುಗಳ ಮಾಲೀಕರೊಂದಿಗೆ ಕರಾರು ಪತ್ರ ಮಾಡಿಕೊಂಡು ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಖಾಸಗಿ ಬೋರವೆಲ್ ಸಿಗದಿದ್ದ ಪಕ್ಷದಲ್ಲಿ ಟ್ಯಾಂಕರ್‌ಗಳನ್ನು ಬಳಸಿ ನೀರು ಪೊರೈಸುವ ಕೆಲಸ ಮಾಡಬೇಕು. ಒವರ್ ಹೆಡ್ ಟ್ಯಾಂಕ್ ಗಳು ದುರಸ್ತಿ ವ್ಯವಸ್ಥೆಯಲ್ಲಿದ್ದರೆ ದುರಸ್ತಿ ಮಾಡಿಸಿಕೊಡಲಾಗುವುದು. ಹೊಸ ಬೋರವೆಲ್‌ಗಳಿಗೆ ಅವಕಾಶವಿಲ್ಲ. ಕೇವಲ ಬೇಸಿಗೆ ಸಮಸ್ಯೆಗಾಗಿ ಹೊಸ ಕೊಳವೆ ಬಾವಿ ಕೊರೆಯಿಸುವ ಕಾರ್ಯ ಸೂಕ್ತವಲ್ಲ ಎಂದು ಹೇಳಿದರು.
ಗ್ರಾಮಗಳಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಸುಸ್ಥಿಯಲ್ಲಿದ್ದು, ಜನಬಳಕೆಗೆ ಸದಾಕಾಲ ದೊರೆಯುವಂತೆ ಅಗತ್ಯ ಕ್ರಮವಹಿಸಿ, ಗ್ರಾಮಗಳಲ್ಲಿನ ಎಲ್ಲ ಜಲಮೂಲಗಳ ಸುತ್ತಲಿನ ಪ್ರದೇಶದಲ್ಲಿ ಇರಬಹುದಾದ ತಾಜ್ಯ ಹಾಗೂ ಚರಂಡಿ ನೀರನ್ನು ಸರಿಯಾಗಿ ವಿಲೆವಾರಿ ಮಾಡಿ ಕುಡಿಯುವ ನೀರು ಕಲುಷಿತಗೊಳ್ಳದಂತೆ ತಡೆಗಟ್ಟಬೇಕು, ಬಹುಗ್ರಾಮ ನೀರು ಸರಬರಾಜು ಮಾಡುವ ಒವರ್ ಹೆಡ್ ಟ್ಯಾಂಕ್ ಗಳನ್ನು ಕಾಲ ಕಾಲಕ್ಕೆ ಸ್ವಚ್ಛಗೊಳಿಸಿ, ಯಾವುದೇ ರೀತಿಯ ರೋಗಾಣು ಬ್ಯಾಕ್ಟೀರಿಯಾ ಅಥವಾ ಫಂಗಸ್ ಸೇರದಂತೆ ಬೆಳೆಯದಂತೆ ನಿಯಮಿತವಾಗಿ ಎಲ್ಲ ಬಗೆಯ ಜಲಸಂಗ್ರಹಾರಗಳನ್ನು ಸ್ವಚ್ಛಗೊಳಿಸಿ, ವೈಜ್ಞಾನಿಕ ರೀತಿಯಲ್ಲಿ ಕ್ಲೋರಿನೇಷನ್ ಮಾಡಿ ಸ್ವಚ್ಛಗೊಳಿಸಬೇಕು ಎಂದು ಸೂಚಿಸಿದರು.ಚಾಲ್ತಿಯಲ್ಲಿರುವ ಕೊಳವೆ ಬಾವಿಗಳನ್ನು ಪರಿಶೀಲಿಸಿ, ಪ್ರಯೋಗಾಲಯದಲ್ಲಿ ನೀರಿನ ಗುಣಮಟ್ಟ ಪರೀಕ್ಷೆಗೆ ಒಳಪಡಿಸಿ ನೀರಿನ ಶುದ್ಧತೆ ಖಾತ್ರಿ ಪಡಿಸಿಕೊಳ್ಳಿ. ಒಟ್ಟಾರೆ ಗ್ರಾಮಸ್ಥರಿಗೆ ಅವರ ಆರೋಗ್ಯಕ್ಕೆ ಯಾವುದೇ ತೊಂದರೆಯಾಗದಂತೆ ಕಲುಷಿತ ನೀರಿನ ಸೇವನೆಯಿಂದ ವಾಂತಿಭೇದಿ ಪ್ರಕರಣಗಳು, ಸಾವುನೋವು ಘಟಿಸದಂತೆ ಎಲ್ಲ ಅವಶ್ಯಕ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.