ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಮೈಸೂರು ನಗರ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುತ್ತಿರುವ ತ್ಯಾಜ್ಯ ನೀರು ಕಾವೇರಿ ನದಿ ಮತ್ತು ಕಾಲುವೆಗೆ ನೇರವಾಗಿ ಬಿಡುತ್ತಿರುವುದನ್ನು ಸ್ಥಗಿತಗೊಳಿಸುವ ಸಂಬಂಧ ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ ಹಾಗೂ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಮಾತನಾಡಿದರು.
ಮೈಸೂರು ನಗರದ ಕಾರ್ಖಾನೆಗಳಿಂದ ಬರುವ ತ್ಯಾಜ್ಯ ನೀರು ಹಳ್ಳದ ಮೂಲಕ ಕಳಸ್ತವಾಡಿ ಗ್ರಾಮದ ವಿರಿಜಾ ನಾಲೆ ಮತ್ತು ಕೆಸರೆ ಗ್ರಾಮದ ದೇವರಾಯ ನಾಲೆಗೆ ಕಲುಷಿತ ನೀರು ನೇರವಾಗಿ ನಾಲೆಗಳಿಗೆ ಹರಿದು ಬರುತ್ತಿದೆ. ಇದರಿಂದ ಕುಡಿಯುವ ನೀರು ಕಲುಷಿತವಾಗುತ್ತಿದೆ ಎಂದು ಎಂದರು.ಕಲುಷಿತ ನಾಲೆಗಳ ಮೂಲಕ ಶ್ರೀರಂಗಪಟ್ಟಣ ವ್ಯಾಪ್ತಿಯ ಗಂಜಾಂ ಕುಡಿಯುವ ನೀರು ಸರಬರಾಜು ಮಾಡುವ INTAKE WELL ಬಳಿಯ ಕಾವೇರಿ ನದಿಗೆ ಸೇರಿ ಕಾವೇರಿ ನದಿಯ ಕುಡಿಯುವ ನೀರು ವಿಲೀನವಾಗುತ್ತಿದೆ. ಆದ್ದರಿಂದ ತ್ಯಾಜ್ಯ ನೀರು ಕಾವೇರಿ ನದಿಗೆ ಹಾಗೂ ನಾಲೆಗಳಿಗೆ ಹರಿದು ಕಲುಷಿತವಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.
ಸಭೆಯಲ್ಲಿ ಅಪರ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಶ್ರೀರಂಗಪಟ್ಟಣ ತಹಸೀಲ್ದಾರ್ಚೇ ತನಾ ಯಾದವ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಟಿ.ಎನ್.ನರಸಿಂಹಮೂರ್ತಿ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ರಾಘವೇಂದ್ರ, ಅಗ್ನಿ ಶಾಮಕದಳದ ಅಧಿಕಾರಿ ರಾಘವೇಂದ್ರ, ಜಲಸಂಪನ್ಮೂಲ ಇಲಾಖೆ ಅಭಿಯಂತರ ಮೇಘನಾ, ಪರಿಸರ ಇಲಾಖೆ ಅಧಿಕಾರಿ ಕೆಂಪೇಗೌಡ ಹಲವರು ಇದ್ದರು.
ಮಂಡ್ಯ: ಸರ್ಕಾರದ ಆದೇಶದಂತೆ ಶಾಲಾ-ಕಾಲೇಜಿನ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ವಾಸಸ್ಥಳದಿಂದ ವಿದ್ಯಾಸಂಸ್ಥೆಗೆ ಉಚಿತವಾಗಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ವಿದ್ಯಾಭ್ಯಾಸ ಮಾಡಲು ಪ್ರಯಾಣಿಸುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತ ಬಸ್ ಪಾಸ್ ನೀಡಲು ಆದೇಶಿಸಲಾಗಿದೆ.
ರಾಜ್ಯದಲ್ಲಿ ವಾಸವಿದ್ದು ನೆರೆ ರಾಜ್ಯ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ನೆರೆರಾಜ್ಯಗಳಲ್ಲಿ (ರಾಜ್ಯದ ಗಡಿಭಾಗದಲ್ಲಿ) ವಾಸವಿದ್ದು, ರಾಜ್ಯದೊಳಗಿನ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ವಿತರಿಸಲಾಗುತ್ತದೆ.