ನೀರಿನ ಸಮಸ್ಯೆ ಆಗದಂತೆ ಕ್ರಮವಹಿಸಿ: ಶಿಂಧೆ

KannadaprabhaNewsNetwork |  
Published : Mar 23, 2025, 01:31 AM IST
ಜಿಪಂ ಕಚೇರಿ ಸಭಾಭವನದಲ್ಲಿ ಜಲ ಜೀವನ ಮಿಷನ್‌ ಯೋಜನೆಯ ಕುರಿತು ಜಿಪಂ ಸಿಇಒ ರಾಹುಲ ಶಿಂಧೆ ಸಭೆ ನಡೆಸಿದರು | Kannada Prabha

ಸಾರಾಂಶ

ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮವಹಿಸಬೇಕು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮವಹಿಸಬೇಕು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಜಲ ಜೀವನ ಮಿಷನ್ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಲ ಜೀವನ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕಾರ್ಯಪಾಲಕ ಅಭಿಯಂತರರು ಬೆಳಗಾವಿ/ಚಿಕ್ಕೋಡಿಯವರಿಗೆ ಸೂಚನೆ ನೀಡಿದರು.

ಎಲ್ಲ ತಾಲೂಕಿನ ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದಾಂತಹ ಗ್ರಾಮಗಳನ್ನು ಜಂಟಿಯಾಗಿ ಗುರುತಿಸಿ, ಪರಿಹಾರವನ್ನು ಕಂಡುಕೊಳ್ಳಲು ಹಾಗೂ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ನಿಗಾವಹಿಸುವಂತೆ ನಿರ್ದೇಶನ ನೀಡಿದರು.

ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಬಹುಗ್ರಾಮ ಯೋಜನೆಯ ಕುಡಿಯುವ ನೀರಿನ ಮೂಲಗಳು ಭತ್ತಿಹೊದಲ್ಲಿ ಸಮೀಪವಿರುವ ಖಾಸಗಿ ಬೋರವೆಲ್‌ಗಳನ್ನು ಹೈಯರ್ ತೆಗೆದುಕೊಂಡು ಕುಡಿಯುವ ನೀರಿನ ಸಮರ್ಪಕ ನಿರ್ವಹಣೆ ಮಾಡಲು ಸಭೆಗೆ ತಿಳಿಸಿದರು.

ಗ್ರಾಮ ಪಂಚಾಯತಿಗಳಲ್ಲಿ ನೀರು ಮತ್ತು ನೈರ್ಮಲ್ಯ ಸಮಿತಿಯನ್ನು ಯಾವ ರೀತಿ ಮಾಡಬೇಕು ಮತ್ತು ಸಭೆಯ ನಡಾವಳಿಗಳನ್ನು ಸಲ್ಲಿಸಲು ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶ ರವಿ ಬಂಗಾರೆಪ್ಪನವರ, ಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡಗುಂಟಿ, ಉಪಕಾರ್ಯದರ್ಶಿ(ಆಡಳಿತ) ಬಸವರಾಜ್ ಹೆಗ್ಗನಾಯಕ, ಕಾರ್ಯಪಾಲಕ ಅಭಿಯಂತರ ಶಶಿಕಾಂತ ನಾಯಿಕ ಬೆಳಗಾವಿ ವಿಭಾಗ, ಕಾರ್ಯಪಾಲಕ ಅಭಿಯಂತರ ಪಾಂಡುರಂಗರಾವ್ ಚಿಕ್ಕೋಡಿ ವಿಭಾಗ ಎಲ್ಲ ತಾಲೂಕಿನ ಸಹಾಯಕ ಕಾರ್ಯಪಾಲಕ ಅಭಿಯಂತರರು, ಜಿಲ್ಲೆಯ ಎಲ್ಲ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಎಲ್ಲ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಜಿಲ್ಲಾ ಯೋಜನಾ ವ್ಯವಸ್ಥಾಪಕರು ಜಿಲ್ಲೆಯ ಎಲ್ಲಾ ಇಂಜಿನಿಯರ್‌ ಮತ್ತು ನೀರು ಪರೀಕ್ಷಾ ಪ್ರಯೋಗಾಲಯದ ಸಿಬ್ಬಂದಿ ವಿಡಿಯೋ ಸಂವಾದದಲ್ಲಿ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ