ಕನ್ನಡಪ್ರಭ ವಾರ್ತೆ, ತುಮಕೂರು
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಪಶುವೈದ್ಯ ಸೇವಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪಶುಪಾಲನೆ ಮತ್ತು ರೇಷ್ಮೆ ಇಲಾಖೆಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಕೆ.ಡಿ.ಪಿ. ಸಭೆಯಲ್ಲಿ ನಿಗದಿಪಡಿಸಿದ್ದ ಗುರಿಯನ್ನು ಕಾಲಮಿತಿಯೊಳಗೆ ಸಾಧಿಸಲು ಶ್ರಮಿಸಿದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಪ್ರಶಂಸಿಸಿದರು.
ಉಪಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ್ ಅವರ ಕನಸಿನ ಕೂಸಾದ ಈ ಯೋಜನೆಯನ್ನು ಮತ್ತಷ್ಟು ಬಲಪಡಿಸಬೇಕು ಎಂದು ಸೂಚಿಸಿದ ಅವರು, ಸಭೆಯಲ್ಲಿ ಪಶು ವೈದ್ಯಕೀಯ ಸೇವೆಗಳ ಕುರಿತು ಚರ್ಚಿಸಿದರು. ಮುಂದಿನ ದಿನಗಳಲ್ಲಿ ಪಶು ಆಸ್ಪತ್ರೆಗಳ ಮೂಲಸೌಕರ್ಯವನ್ನು ಉತ್ತಮಪಡಿಸಲು ಕ್ರಮ ವಹಿಸುವುದಾಗಿ ಭರವಸೆ ನೀಡಿದರು.ರೈತರಿಗೆ ನೆರವು:ಜಿಲ್ಲೆಯಲ್ಲಿ ಕೆಲವು ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕಾಲಕಾಲಕ್ಕೆ ಲಸಿಕೆ ಹಾಕಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಆಕಸ್ಮಿಕವಾಗಿ ಮೃತಪಟ್ಟ ಪಶುಗಳ ಮಾಲೀಕರಿಗೆ ಬಾಕಿ ಇರುವ ಪರಿಹಾರ ಧನವನ್ನು ವಿತರಿಸುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರುವುದಾಗಿ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ. ಅಶ್ವಿಜಾ ಅವರು ಜಿಲ್ಲೆಯಲ್ಲಿ ಇಲಾಖೆಯ ಕಾರ್ಯವೈಖರಿ ಹಾಗೂ ಸರ್ಕಾರದ ಯೋಜನೆಗಳ ಅನುಷ್ಠಾನದ ಬಗ್ಗೆ ಸಚಿವರ ಗಮನಕ್ಕೆ ತಂದರು.