ಅಕ್ರಮ ಮದ್ಯ ಮಾರಾಟದ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ-ಶಾಸಕ ಮಾನೆ

KannadaprabhaNewsNetwork |  
Published : Oct 22, 2025, 01:03 AM IST
ಫೋಟೊ: 21ಎಚ್‌ಎನ್‌ಎಲ್3 | Kannada Prabha

ಸಾರಾಂಶ

ಅಕ್ರಮ ಮದ್ಯ ಮಾರಾಟದ ದೂರುಗಳು ಬಹುವಾಗಿ ಕೇಳಿ ಬರುತ್ತಿದ್ದು, ಯಾವುದೇ ಮುಲಾಜಿಗೆ ಒಳಗಾಗದೇ ನಿರ್ದಾಕ್ಷಿಣ್ಯವಾಗಿ ಅಂತಹವರ ಮೇಲೆ ಕ್ರಮ ಕೈಗೊಳ್ಳುವಂತೆ ಶಾಸಕ ಶ್ರೀನಿವಾಸ ಮಾನೆ ಅಬಕಾರಿ ಇಲಾಖೆಯ ಅಧಿಕಾರಿಗ7ಳಿಗೆ ಸೂಚಿಸಿದರು.

ಹಾನಗಲ್ಲ: ಅಕ್ರಮ ಮದ್ಯ ಮಾರಾಟದ ದೂರುಗಳು ಬಹುವಾಗಿ ಕೇಳಿ ಬರುತ್ತಿದ್ದು, ಯಾವುದೇ ಮುಲಾಜಿಗೆ ಒಳಗಾಗದೇ ನಿರ್ದಾಕ್ಷಿಣ್ಯವಾಗಿ ಅಂತಹವರ ಮೇಲೆ ಕ್ರಮ ಕೈಗೊಳ್ಳುವಂತೆ ಶಾಸಕ ಶ್ರೀನಿವಾಸ ಮಾನೆ ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಇಲ್ಲಿನ ಅಬಕಾರಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ತಾಲೂಕಿನ 14ಕ್ಕೂ ಹೆಚ್ಚು ಗ್ರಾಮಗಳಲ್ಲಿ ಅಕ್ರಮವಾಗಿ ಹೋಟೆಲ್, ಕಿರಾಣಿ ಸೇರಿದಂತೆ ಇನ್ನಿತರ ಸಣ್ಣಪುಟ್ಟ ಅಂಗಡಿಗಳಲ್ಲಿ ಸಾರಾಯಿ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳಿವೆ. ಅಕ್ರಮ ಸಾರಾಯಿ ಮಾರಾಟವನ್ನು ಮಟ್ಟ ಹಾಕುವ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಜನತೆ ನೆಮ್ಮದಿಯಿಂದ ಜೀವನ ಸಾಗಿಸಲು ಉತ್ತಮ ವಾತಾವರಣ ನಿರ್ಮಿಸಬೇಕು. ಅಬಕಾರಿ ಇಲಾಖೆಯ ಅಧಿಕಾರಿಗಳು ನಿರಂತರವಾಗಿ ಆಕ್ರಮ ಸಾರಾಯಿ ಮಾರಾಟ ಅಡ್ಡೆಗಳ ಜಾಡು ಹಿಡಿದು ನಿರ್ದಾಕ್ಷಿಣ್ಯ ಕ್ರಮ ಜರುಗಿಸಿ ವರದಿ ಒಪ್ಪಿಸಬೇಕು. ಈ ವಿಷಯಕ್ಕೆ ಯಾರೇ ದೂರು ನೀಡಿದರೂ ಕೂಡ ವಿಳಂಬವಿಲ್ಲದೆ ಪರಿಶೀಲಿಸಿ ಕ್ರಮ ಜರುಗಿಸಿ. ಈ ಹಿಂದೆ ಹಲವು ಗ್ರಾಮಗಳಲ್ಲಿ ಪ್ರತಿಭಟನೆ, ಮನವಿ ಸಲ್ಲಿಸಿದ ಘಟನೆಗಳು ನಡೆದಿದ್ದು ಅಂತಹ ಪ್ರದೇಶದ ಪರಿಸ್ಥಿತಿಯನ್ನು ಗಮನಿಸಿ ಆಕ್ರಮ ಮಾರಾಟಕ್ಕೆ ತಡೆಯೊಡ್ಡಬೇಕು. ಎಲ್ಲಿಯೇ ಆಗಲಿ ಪರವಾನಗಿ ಇಲ್ಲದೆ ಸಾರಾಯಿ ಮಾರಾಟ ನಡೆದಿದ್ದರೆ ಅದಕ್ಕೆ ಅಧಿಕಾರಿಗಳೇ ಹೊಣೆ ಆಗುತ್ತೀರಿ. ಈ ಸೂಚನೆಗಳನ್ನು ನಿರ್ಲಕ್ಷಿಸದೇ ಗಂಭೀರವಾಗಿ ಪರಿಗಣಿಸಿ ಕಾರ್ಯಪ್ರವೃತ್ತರಾಗಿರಿ ಎಂದು ಸೂಚಿಸಿದರು. ಸಾರ್ವಜನಿಕರಿಂದ ಬರುವ ದೂರುಗಳ ಬಗ್ಗೆ ಕಾಳಜಿ ವಹಿಸಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಸಲ್ಲದು. ಶಾಲೆ, ಕಾಲೇಜುಗಳ ಮೈದಾನ ಸೇರಿದಂತೆ ಇತರ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡಿ ವಾತಾವರಣ ಹದಗೆಡಿಸುತ್ತಿರುವ ಬಗ್ಗೆ ದೂರುಗಳಿದ್ದು, ಈ ಬಗ್ಗೆ ಸಹ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಅಗತ್ಯವಿರುವಲ್ಲಿ ಇಲಾಖೆಯ ಸಿಬ್ಬಂದಿ ಮೇಲಿಂದ ಮೇಲೆ ಭೇಟಿ ನೀಡಿ, ಸಾರ್ವಜನಿಕರಿಂದ ಆಕ್ರಮ ಹಾಗೂ ಶಾಲೆ ದೇವಸ್ಥಾನದಂತಹ ಸಾರ್ವಜನಿಕ ಸ್ಥಳಗಳಲ್ಲಿ ಕುಡಿದು ವಾತಾವರಣ ಹಾಳು ಮಾಡುತ್ತಿರುವವರನ್ನು ಮುಲಾಜಿಲ್ಲದೆ ಬಂಧಿಸಿ ಕಾನೂನು ಕ್ರಮ ಜರುಗಿಸುವಂತೆ ಶಾಸಕ ಮಾನೆ ಸೂಚಿಸಿದರು. ಅಬಕಾರಿ ಪಿಎಸ್‌ಐ ಸುಧಾ ಸೇರಿದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

PREV

Recommended Stories

ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಹೊಸೂರಿಗೆ ಮೆಟ್ರೋ ವಿಸ್ತರಣೆ ಅಸಾಧ್ಯ : ರಾಜ್ಯ ಸರ್ಕಾರಕ್ಕೆ ಬಿಎಂಆರ್‌ಸಿಎಲ್‌ ವರದಿ