ಅಪರಾಧ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಿ

KannadaprabhaNewsNetwork |  
Published : Nov 24, 2026, 03:00 AM IST
ಸಭೆ | Kannada Prabha

ಸಾರಾಂಶ

ಸಾರ್ವಜನಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ಜೊತೆಗೆ ಪೊಲೀಸ್ ಕರ್ತವ್ಯ ನಿರ್ವಹಣೆಯಲ್ಲಿ ಯಾವುದೇ ನಿರ್ಲಕ್ಷ್ಯಕ್ಕೆ ಅವಕಾಶ ನೀಡಬಾರದು ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಜಯಕುಮಾರ ಸಿಂಗ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಉತ್ತರ ವಲಯ ವ್ಯಾಪ್ತಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಜತೆಗೆ ಅಪರಾಧ ಚಟುವಟಿಕೆಗಳ ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ಜೊತೆಗೆ ಪೊಲೀಸ್ ಕರ್ತವ್ಯ ನಿರ್ವಹಣೆಯಲ್ಲಿ ಯಾವುದೇ ನಿರ್ಲಕ್ಷ್ಯಕ್ಕೆ ಅವಕಾಶ ನೀಡಬಾರದು ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಜಯಕುಮಾರ ಸಿಂಗ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸೋಮವಾರ ನಗರಕ್ಕೆ ಭೇಟಿ ನೀಡಿದ್ದ ಅವರು ಉತ್ತರ ವಲಯದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಪರಿಶೀಲನೆ ಸಭೆ ನಡೆಸಿದರು.

ಸಭೆಯಲ್ಲಿ ಉತ್ತರ ವಲಯದ ಜಿಲ್ಲೆಗಳಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ಸ್ಥಿತಿಗತಿ, ಅಪರಾಧ ಪ್ರಕರಣಗಳ ಸಂಖ್ಯೆ, ಗಂಭೀರ ಅಪರಾಧಗಳ ತನಿಖೆಯ ಪ್ರಗತಿ ಹಾಗೂ ಭದ್ರತಾ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಲಾಯಿತು. ಅಪರಾಧ ತಡೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಬಲಪಡಿಸುವುದು, ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸುವುದು, ಪ್ರಕರಣಗಳ ತ್ವರಿತ ತನಿಖೆ ಹಾಗೂ ಪೊಲೀಸ್ ಸಿಬ್ಬಂದಿಯ ಕಾರ್ಯಕ್ಷಮತೆ ಹೆಚ್ಚಿಸುವ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.ಎಲ್ಲ ಜಿಲ್ಲೆಗಳಲ್ಲಿ ಪೊಲೀಸ್ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಿ, ಅಪರಾಧ ನಿಯಂತ್ರಣ ಕಾರ್ಯದಲ್ಲಿ ಅಧಿಕಾರಿಗಳ ನಡುವೆ ಸಮನ್ವಯ ಸಾಧಿಸಬೇಕು. ಸಾರ್ವಜನಿಕರಿಗೆ ಸ್ಪಂದನಾಶೀಲ ಪೊಲೀಸ್ ಸೇವೆ ಒದಗಿಸುವ ಮೂಲಕ ಇಲಾಖೆಯ ಮೇಲಿನ ವಿಶ್ವಾಸ ಹೆಚ್ಚಿಸಬೇಕು. ಭದ್ರತಾ ವ್ಯವಸ್ಥೆಯನ್ನು ಸದಾ ಸನ್ನದ್ಧವಾಗಿಟ್ಟುಕೊಂಡು ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ವಿಜಯಕುಮಾರ ಸಿಂಗ್ ಸೂಚಿಸಿದರು.

ಉತ್ತರ ವಲಯದ ಐಜಿಪಿ ಸಂದೀಪ್ ಪಾಟೀಲ್, ಬೆಳಗಾವಿ ನಗರ ಪೊಲೀಸ್ ಆಯುಕ್ತ ಪ್ರಕಾಶ ನಿಕಮ್, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಭೂಷಣ್ ಬೊರಸೆ, ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸೇರಿ ಗದಗ, ಬಾಗಲಕೋಟೆ, ಹಾವೇರಿ, ವಿಜಯಪುರ ಮತ್ತು ಧಾರವಾಡ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.ಉತ್ತರ ವಲಯ ವ್ಯಾಪ್ತಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಜತೆಗೆ ಅಪರಾಧ ಚಟುವಟಿಕೆಗಳ ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ಜೊತೆಗೆ ಪೊಲೀಸ್ ಕರ್ತವ್ಯ ನಿರ್ವಹಣೆಯಲ್ಲಿ ಯಾವುದೇ ನಿರ್ಲಕ್ಷ್ಯಕ್ಕೆ ಅವಕಾಶ ನೀಡಬಾರದು ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಜಯಕುಮಾರ ಸಿಂಗ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉನ್ನತ ಶಿಕ್ಷಣದಿಂದಲೇ ಮಹಿಳೆಯರ ಸಬಲೀಕರಣ ಸಾಧ್ಯ
ರಾಜ್ಯಪಾಲದ ಮಧ್ಯಪ್ರವೇಶಕ್ಕೆ ಆಗ್ರಹ