ಅಕ್ರಮ ಮದ್ಯ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಬಸವಂತಪ್ಪ

KannadaprabhaNewsNetwork |  
Published : Nov 03, 2026, 02:45 AM IST
ಫೋಟೋವಿವರ- (2ಚ್‌ಪಿಟಿ4)ಹೊಸಪೇಟೆ ನಗರದ ವೈಕುಂಠಧಾಮ ಅತಿಥಿಗೃಹದಲ್ಲಿ ಸೋಮವಾರ ಅಬಕಾರಿ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಸಭೆ ನಡೆಸಿದರು | Kannada Prabha

ಸಾರಾಂಶ

ಮುಂಜಾನೆ ಹಾಗೂ ತಡರಾತ್ರಿ ಅಕ್ರಮವಾಗಿ ಮದ್ಯ ಸರಬರಾಜು ಮತ್ತು ಮಾರಾಟ ನಡೆಯುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಇದಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕು ಎಂದು ಕೆ.ಎಸ್. ಬಸವಂತಪ್ಪ ಅವರು ನಿರ್ದೇಶನ ನೀಡಿದರು.

ಹೊಸಪೇಟೆ: ಬರಗಾಲದ ಹಿನ್ನೆಲೆಯಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚುತ್ತಿರುವ ದೂರುಗಳು ಕೇಳಿಬರುತ್ತಿದ್ದು, ಅಕ್ರಮ ಮದ್ಯ ಮಾರಾಟ ತಡೆಗೆ ಅಬಕಾರಿ ಇಲಾಖೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ವೈಕುಂಠಧಾಮ ಅತಿಥಿಗೃಹದಲ್ಲಿ ಸೋಮವಾರ ಅಬಕಾರಿ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ಬರಗಾಲದಿಂದ ರೈತರು ಹಾಗೂ ಬಡ ಕುಟುಂಬಗಳು ಆರ್ಥಿಕತೆಯಲ್ಲಿ ಸಂಕಷ್ಟಕ್ಕೆ ಸಿಲುಕಿವೆ. ಇಂತಹ ಸಂದರ್ಭದಲ್ಲಿ ಅಕ್ರಮ ಮದ್ಯ ಮಾರಾಟದಿಂದ ಕುಟುಂಬಗಳ ಆರ್ಥಿಕ ಮತ್ತು ಸಾಮಾಜಿಕ ಸಮಸ್ಯೆಗಳು ಮತ್ತಷ್ಟು ಹೆಚ್ಚುತ್ತಿವೆ. ಮುಂಜಾನೆ ಹಾಗೂ ತಡರಾತ್ರಿ ಅಕ್ರಮವಾಗಿ ಮದ್ಯ ಸರಬರಾಜು ಮತ್ತು ಮಾರಾಟ ನಡೆಯುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಇದಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕು ಎಂದು ನಿರ್ದೇಶನ ನೀಡಿದರು.ಸ್ಥಳೀಯ ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅಕ್ರಮ ಮದ್ಯ ಮಾರಾಟದ ಕುರಿತು ಮಾಹಿತಿ ಸಂಗ್ರಹಿಸಬೇಕು. ಮುಂದಿನ ಮೂರು​ನಾಲ್ಕು ತಿಂಗಳು ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.

ಮುಂದಿನ ದಿನಗಳಲ್ಲಿ ತಾವೇ ಗ್ರಾಮಗಳಿಗೆ ಭೇಟಿ ನೀಡಿ ಆಕಸ್ಮಿಕ ಪರಿಶೀಲನೆ ನಡೆಸುವುದಾಗಿ ತಿಳಿಸಿದ ಸಚಿವರು, ಕರ್ತವ್ಯದಲ್ಲಿ ನಿರ್ಲಕ್ಷ್ಯ ಅಥವಾ ಲೋಪ ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು.

ಸಾರ್ವಜನಿಕರಿಗೆ ತೊಂದರೆಯಾಗದಂತೆ ಅಕ್ರಮ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಯಂತ್ರಿಸುವುದರ ಜತೆಗೆ, ಬರಗಾಲದ ಸಂದರ್ಭದಲ್ಲಿ ಜನರ ಮೂಲಭೂತ ಅಗತ್ಯಗಳಿಗೆ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಪೊಲೀಸ್‌ ಇಲಾಖೆಯ ಡಿವೈಎಸ್‌ಪಿ ಪಿ. ಮುರುಳೀಧರ್, ಅಬಕಾರಿ ಇಲಾಖೆಯ ಡಿವೈಎಸ್ ಸಿ ಭಾರತಿ ವಿದ್ಯಾಧರ, ರೇಂಜ್ ಇನ್ಸ್‌ಪೆಕ್ಟರ್ ಷಹಜಹಾನ್‌ ಗಜಲ್, ಡಿಸ್ಟ್ರಿಕ್ಟ್ ಸ್ಕ್ವಾಡ್ ನಾಜೀಯಾ ಬೇಗಂ, ಸಬ್ ಡಿವಿಜನ್ ಸ್ಕ್ವಾಡ್ ಇನ್‌ಸ್ಪೆಕ್ಟರ್ ಶಂಕರ್ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭುಗಿಲೆದ್ದ ಸರ್ಕಾರ ವರ್ಸಸ್‌ ಕುಮಾರಸ್ವಾಮಿ ಸ್ಟಿಂಗ್‌ ಫೈಟ್‌ - ಈಗ ಎಚ್‌ಡಿಕೆ ಚಾರ್ಜ್‌ಶೀಟ್‌
ಅರಬ್ಬಿ ಸಮುದ್ರದಲ್ಲಿ ಚಂಡಮಾರುತ - ಇನ್ನೂ 3 ದಿನ ರಾಜ್ಯದೆಲ್ಲೆಡೆ ಮಳೆ