- ಕೃಷಿ ಇಲಾಖೆಯಿಂದ ಆತ್ಮ ಯೋಜನೆ ಮಾಹಿತಿ ಕಾರ್ಯಾಗಾರ - - - ಚನ್ನಗಿರಿ: ಸರ್ಕಾರ ಜಾರಿಗೆ ತಂದಿರುವ ಅತ್ಮ ಯೋಜನೆಯಲ್ಲಿ ಕೃಷಿ ಮತ್ತು ತೋಟಗಾರಿಕೆಗೆ ಸಂಬಂಧಪಟ್ಟ ರೈತ ಮಹಿಳೆಯರು ಹಾಗೂ ಪುರುಷರು ತರಬೇತಿ ಶಿಬಿರಗಳಲ್ಲಿ ಭಾಗವಹಿಸಬೇಕು. ಕೃಷಿ ಚಟುವಟಿಕೆಗೆ ಪೂರಕವಾದ ಹೈನುಗಾರಿಕೆ, ಕುರಿ, ಕೋಳಿ, ಮೀನು ಸಾಕಾಣಿಕೆ ಮಾಡಬೇಕು. ಇದರಿಂದ ಆರ್ಥಿಕವಾಗಿ ಪ್ರಗತಿ ಸಾಧಿಸಬಹುದು. ಆಗ ದೇಶವೂ ಪ್ರಗತಿ ಹೊಂದುವುದು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಅರುಣ್ ಕುಮಾರ್ ಹೇಳಿದರು.
ಆತ್ಮ ಯೋಜನೆಯ ಉಪ ಯೋಜನಾ ನಿರ್ದೇಶಕ ಚಂದ್ರಶೇಖರ್ ಮಾತನಾಡಿ, ಕೃಷಿ ಚಟುವಟಿಕೆಗಳಿಂದಲೇ ಉತ್ತಮವಾದ ಆದಾಯವನ್ನು ಗಳಿಸುವ ರೈತರಿಗೆ ಇಲಾಖೆ ವತಿಯಿಂದ ಪ್ರಶಸ್ತಿ ಪುರಸ್ಕಾರಗಳನ್ನು ನೀಡಲಾಗುವುದು. ಆತ್ಮ ಯೋಜನೆಯಡಿ ದೊರೆಯಬಹುದಾದ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ತೋಟಗಾರಿಕಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಶ್ರೀಕಾಂತ, ಪಶು ಇಲಾಖೆಯ ಸಹಾಯಕ ನಿರ್ದೇಶಕ ಅಶೋಕ್, ರೈತ ಸಲಹಾ ಸಮಿತಿಯ ಸದಸ್ಯರು ಹಾಗೂ ರೈತ ಮುಖಂಡರುಗಳು ಹಾಜರಿದ್ದರು.- - - - -
-27ಕೆಸಿಎನ್ಜಿ1:ಸಮಾರಂಭದಲ್ಲಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಅರುಣ್ ಕುಮಾರ್ ಮಾತನಾಡಿದರು.