ಎಸ್ಸಿ, ಎಸ್ಟಿ ದೌರ್ಜನ್ಯಕ್ಕೆ ತುರ್ತು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

KannadaprabhaNewsNetwork |  
Published : Sep 27, 2024, 01:19 AM IST
ಜಿಲ್ಲಾಧಿಕಾರಿಮೊಹಮ್ಮದ ರೋಷನ ಅಧ್ಯಕ್ಷತೆಯಲ್ಲಿ ಎಸ್‌ಸಿ ಎಸ್‌ಟಿ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆ ನಡೆಯಿತು | Kannada Prabha

ಸಾರಾಂಶ

ಅನುಸೂಚಿತ ಜಾತಿ, ಪಂಗಡಗಳ ಜನರ ಮೇಲಿನ ದೌರ್ಜನ್ಯ ಕುರಿತು ದೂರುಗಳು ದಾಖಲಾದಲ್ಲಿ ಸಂಬಂಧಿಸಿದ ದೂರುಗಳ ಕುರಿತು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಅನುಸೂಚಿತ ಜಾತಿ, ಪಂಗಡಗಳ ಜನರ ಮೇಲಿನ ದೌರ್ಜನ್ಯ ಕುರಿತು ದೂರುಗಳು ದಾಖಲಾದಲ್ಲಿ ಸಂಬಂಧಿಸಿದ ದೂರುಗಳ ಕುರಿತು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ನಡೆದ ಎಸ್ಸಿ, ಎಸ್ಟಿ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾಮಟ್ಟದ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ (ದೌರ್ಜನ್ಯ ತಡೆ) ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಗೆ ಎಲ್ಲ ಜಿಲ್ಲಾಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು. ಒಂದು ವೇಳೆ ಹಾಜರಾಗದಿದ್ದಲ್ಲಿ ಅಂತಹ ಅಧಿಕಾರಿಗಳು ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ದೂರುಗಳಿಗೆ ತ್ವರಿತವಾಗಿ ಸ್ಪಂದಿಸಿ: ಕಚೇರಿಗೆ ಆಗಮಿಸುವ ಸಾರ್ವಜನಿಕರೊಂದಿಗೆ ಅಧಿಕಾರಿ ಸಿಬ್ಬಂದಿ ಸೌಜನ್ಯಯುತವಾಗಿ ವರ್ತಿಸಬೇಕು. ಕೆ.ಎಸ್.ಎಸ್.ಐ.ಡಿ.ಸಿ. ವತಿಯಿಂದ ಪರಿಶಿಷ್ಟ ಜಾತಿ, ಪಂಗಡದ ಫಲಾನುಭವಿಗಳು ನಿವೇಶನ ಪಡೆದವರ ವಿವರ ಒದಗಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಪ.ಜಾತಿ, ಪಂಗಡದವರು ವಿವಿಧ ಯೋಜನೆಗಳ ಸಾಲ ಸೌಲಭ್ಯಗಳನ್ನು ಕೋರಿ ಸಲ್ಲಿಸಿರುವ ಅರ್ಜಿಗಳನ್ನು ತಕ್ಷಣವೇ ವಿಲೇವಾರಿ ಮಾಡಬೇಕು. ಯೋಜನೆಗಳ ಅನುಷ್ಠಾನ ಬಹಳ ಮುಖ್ಯವಾಗಿದ್ದು, ಎಸ್ಸಿ- ಎಸ್ಟಿ ಸಮುದಾಯಗಳ ಅಭಿವೃದ್ಧಿಗೆ ಪೂರಕವಾಗಿ ಬ್ಯಾಂಕ್ ಅಧಿಕಾರಿಗಳು ಅರ್ಜಿಗಳ ಪರಿಶೀಲನೆ ನಡೆಸಿ ಯೋಜನೆಗಳ ಅನುಷ್ಠಾನಕ್ಕೆ ಕ್ರಮ ವಹಿಸಬೇಕು. ಸಭೆಗಳಿಗೆ ಹಾಜರಾಗದ ಲೀಡ್ ಬ್ಯಾಂಕ್ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಮಾತನಾಡಿ, ತುರ್ತು ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ಕೂಡಲೇ ಚಿಕಿತ್ಸೆ ನೀಡಬೇಕು. ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮೀಸಲಾತಿ ನೀಡಲಾಗುತ್ತಿದೆ. ಪ್ರಾಂಶುಪಾಲರ ಹುದ್ದೆಯ ಪ್ರಭಾರ ವಹಿಸಿಕೊಡುವ ಪ್ರಕರಣದಲ್ಲಿ ಕಿರುಕಳ ನೀಡಿದ್ದರ ಕುರಿತಂತೆ ವರದಿ ಸಲ್ಲಿಸಲು ಸೂಚಿಸಿದರು.

ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಮಾತನಾಡಿ, ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಹಾಗೂ ವ್ಯಸನಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಅಂತಹ ಸ್ಥಳಗಳನ್ನು ಗುರುತಿಸಿ, ಪರಿಶೀಲನೆ ನಡೆಸಲಾಗುವುದು. ಒಂದು ವೇಳೆ ಮಾದಕ ವಸ್ತುಗಳು ಮಾರಾಟದ ಪ್ರಕರಣಗಳು ಕಂಡುಬಂದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು. ಜಿಲ್ಲೆಯ ಸಾರ್ವಜನಿಕರು ಮಾಹಿತಿ ನೀಡುವ ಮೂಲಕ ಇಲಾಖೆಗೆ ಸಹಕಾರ ನೀಡುವಂತೆ ಕೋರಿದರು.

ಸ್ಮಶಾನ ಭೂಮಿ ಮಂಜೂರು ಮಾಡಲು ಮನವಿ:

ಜಿಲ್ಲೆಯಲ್ಲಿ ಹಲವು ಭಾಗಗಳಲ್ಲಿ ಸ್ಮಶಾನ ಭೂಮಿ ಬೇಡಿಕೆ ಇದೆ. ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸ್ಮಶಾನಭೂಮಿ ಮಂಜೂರು ಮಾಡಿ ಅಭಿವೃದ್ಧಿಪಡಿಸಬೇಕು. ಎಲ್ಲ ಇಲಾಖೆಗಳ ವಿವಿಧ ಯೋಜನೆಗಳ ಎಸ್.ಸಿ-ಎಸ್.ಟಿ ಅನುದಾನ ಸಂಪೂರ್ಣ ಬಳಕೆ ಆಗಬೇಕು ಎಂದು ಮುಖಂಡ ಮಲ್ಲೇಶ ಚೌಗಲಾ ಮನವಿ ಮಾಡಿದರು.

ಜಿಲ್ಲಾ ದೌರ್ಜನ್ಯ ಸಮಿತಿಯ ನಾಮನಿರ್ದೇಶಿತ ಸದಸ್ಯರಾದ ಕರೆಪ್ಪ ಗುಡೆನ್ನವರ, ವಿಜಯ ತಳವಾರ, ಬಸಪ್ಪ ತಳವಾರ, ಬಸವರಾಜ ಪಾಯಟ್ಟಿ, ನಾಗಪ್ಪ ನರಗಟ್ಟಿ, ಮಲ್ಲೇಶ ಚೌಗಲಾ ಅವರು ದೌರ್ಜನ್ಯ ಪ್ರಕರಣಗಳ ಕುರಿತು ಸಭೆಗೆ ತಿಳಿಸಿ ಅಗತ್ಯ ಸಲಹೆ ಸೂಚನೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೋಳ್ಳಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಅಧೀಕ್ಷಕ ರವೀಂದ್ರ ಗಡಾದಿ, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಬೆಳಗಾವಿ ಉಪ ವಿಭಾಗಾಧಿಕಾರಿ ಶ್ರವಣ ನಾಯಕ, ಬೈಲಹೊಂಗಲ ಉಪ ವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ, ಪರಿಶಿಷ್ಟ ವರ್ಗದ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ, ಸಮಾಜದ ಮುಖಂಡರಾದ ಮಲ್ಲೇಶ ಚೌಗಲೆ, ಮಹಾದೇವ ತಳವಾರ, ಬಸವರಾಜ ಆಯಟ್ಟಿ, ದುರ್ಗೇಶ ಮೇತ್ರಿ, ವಿವೇಕ ಕರ್ಪೆ, ಆಕಾಶ ಬೇವಿನಕಟ್ಟಿ ಸಭೆಯಲ್ಲಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೀರ್ಘಾವಧಿ ಸಿಎಂ ಸಂಭ್ರಮಕ್ಕೆ ಗೃಹಲಕ್ಷ್ಮಿ ಹಣ ನೀಡಿದ ಮಹಿಳೆ!
4 ಜಿಲ್ಲೆಗಳಲ್ಲಿ 13 ಸಾವಿರ ಕೇಸ್‌ ಬಾಕಿ : ಸಚಿವ ತರಾಟೆ