ಹಿರಿಯ ನಾಗರಿಕರ ಕಾಳಜಿ ಸಮಾಜದ ಜವಾಬ್ದಾರಿ: ಕೋಟ

KannadaprabhaNewsNetwork |  
Published : Oct 06, 2025, 01:01 AM IST
04ಹಿರಿಯ - ಬನ್ನಂಜೆ ನಾರಾಯಣಗುರು ಸಭಾಭವನದಲ್ಲಿ ಹಿರಿಯ ನಾಗರಿಕರ ದಿನಾಚರಣೆ ನಡೆಯಿತು  | Kannada Prabha

ಸಾರಾಂಶ

ಉಡುಪಿ ಜಿಲ್ಲಾಡಳಿತ ಆಶ್ರಯದಲ್ಲಿ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಬನ್ನಂಜೆ ಶ್ರೀನಾರಾಯಣಗುರು ಸಭಾಭವನದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ನಡೆಯಿತು.

ಉಡುಪಿ ಜಿಲ್ಲಾಡಳಿತದಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ

ಕನ್ನಡಪ್ರಭ ವಾರ್ತೆ ಉಡುಪಿ

ವಯಸ್ಸಿನಿಂದ ಮಾಗಿದ ಹಿರಿಯ ನಾಗರಿಕರು ಸಮಾಜದ ಮಾರ್ಗದರ್ಶಕರು. ಅವರನ್ನು ಗೌರವಿಸುವ ಜೊತೆಗೆ ಅವರಿಗೆ ಆತ್ಮಸ್ಥೈರ್ಯ ತುಂಬುವುದು, ವೃದ್ಧಾಪ್ಯದ ಕಾಲದಲ್ಲಿ ಅವರನ್ನು ಕಾಡುವ ಏಕಾಂಗಿತನ, ಅಭದ್ರತೆ, ಆರೋಗ್ಯ ಸಮಸ್ಯೆಗಳನ್ನು ಅರಿತು ಅವರ ಬದುಕಿಗೆ ಆಸರೆ ಮತ್ತು ಚೈತನ್ಯ ನೀಡವುದು ಸಮಾಜದ ಕರ್ತವ್ಯ ಎಂದು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.ಅವರು ಜಿಲ್ಲಾಡಳಿತ ಆಶ್ರಯದಲ್ಲಿ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಬನ್ನಂಜೆ ಶ್ರೀನಾರಾಯಣಗುರು ಸಭಾಭವನದಲ್ಲಿ ಆಯೋಜಿಸಲಾದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.ಅವಿಭಕ್ತ ಕುಟುಂಬಗಳಿದ್ದ ಕಾಲದಲ್ಲಿ ಹಿರಿಯರು ಮಕ್ಕಳು, ಮೊಮ್ಮಕ್ಕಳಿಗೆ ಮಾರ್ಗದರ್ಶನ ನೀಡುತ್ತಿದ್ದರು. ಇಂದು ಮಕ್ಕಳು, ಮೊಮ್ಮಕ್ಕಳು ಉದ್ಯೋಗಕ್ಕಾಗಿ ಮನೆಯಿಂದ ದೂರವಿದ್ದು, ಮನೆಯಲ್ಲಿರುವ ಹಿರಿಯರು ಏಕಾಂಗಿ ಜೀವನ ನಡೆಸುವ ಅಥವಾ ವೃದ್ಧಾಶ್ರಮ ಸೇರುವ ಸ್ಥಿತಿ ನಿರ್ಮಾಣವಾಗಿದೆ. ನಗರಕ್ಕಿಂತಲೂ ಗ್ರಾಮೀಣ ಪ್ರದೇಶದ ಹಿರಿಯರು ಹೆಚ್ಚು ಸಮಸ್ಯೆ ಅನುಭವಿಸುತ್ತಿದ್ದಾರೆ ಎಂದವರು ಬೇಸರಿಸಿದರು.ಆದರೆ ತಮ್ಮ ವೃತ್ತಿಯಿಂದ ನಿವೃತ್ತಿ ಪಡೆದ ಹಿರಿಯರು, ತಮ್ಮ ೯೦ನೇ ವರ್ಷದಲ್ಲಿ ಯಕ್ಷಗಾನ ಕಲಿತ ಕೋಟ ಶಿವರಾಮ ಕಾರಂತರ ಜೀವನದಿಂದ ಪ್ರೇರಣೆ ಪಡೆದು ಬದುಕನ್ನು ಅರ್ಥಪೂರ್ಣವಾಗಿ ಕಳೆದು ಸಮಾಜಕ್ಕೆ ಕೊಡುಗೆ ನೀಡಬೇಕು ಎಂದರು.ಕೋವಿಡ್ ಬಳಿಕ ಸ್ಥಗಿತವಾಗಿರುವ ಹಿರಿಯರಿಗಾಗಿಯೇ ಮೀಸಲಾಗಿದ್ದ ರೈಲ್ವೆ ಟಿಕೆಟ್ ದರದಲ್ಲಿನ ರಿಯಾಯತಿಯನ್ನು ಮರಳಿ ಜಾರಿಗೆ ತರಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನಕರ ಹೇರೂರು, ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಮಾತನಾಡಿದರು. ಖ್ಯಾತ ಮಾನಸಿಕ ರೋಗತಜ್ಞ ಡಾ. ವಿರೂಪಾಕ್ಷ ದೇವರ ಮನೆ, ವೃದ್ಧಾಪ್ಯದ ಕಾಳಜಿ ಕುರಿತು ವಿಶೇಷ ಉಪನ್ಯಾಸ ನೀಡಿದರು.ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಸುಧಾಕರ್ ಎಸ್. ನಾಯ್ಕ್, ಜಿಪಂ ಮುಖ್ಯ ಯೋಜನಾಧಿಕಾರಿ ಉದಯ್ ಕುಮಾರ್ ಶೆಟ್ಟಿ, ಉಪಕಾರ್ಯದರ್ಶಿ ಎಸ್.ಎಸ್. ಕಾದ್ರೋಳಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಶಶಿಕಲಾ ತೋನ್ಸೆ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ರತ್ನ, ರೆಡ್ ಕ್ರಾಸ್ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ, ಹಿರಿಯ ನಾಗರಿಕರ ಜಿಲ್ಲಾ ಒಕ್ಕೂಟದ ಅಧ್ಯಕ್ಷ ಎಚ್. ವಿಶ್ವನಾಥ್ ಹೆಗ್ಡೆ, ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ಡಿಜಿಎಂ ಮಹಾಮಾಯಾ ಪ್ರಸಾದ್, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಉಪಾಧ್ಯಕ್ಷೆ ಮಮತಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ. ಪ್ರಸ್ತಾವಿಸಿ ಸ್ವಾಗತಿಸಿದರು. ರೆಡ್ ಕ್ರಾಸ್ ಕಾರ್ಯದರ್ಶಿ ಗಣನಾಥ್ ಶೆಟ್ಟಿ ಎಕ್ಕಾರು ನಿರೂಪಿಸಿದರು.

PREV

Recommended Stories

ಪಿಎಸ್‌ಐ 545 ಹುದ್ದೆಗಳ ನೇಮಕ ಆದೇಶಕ್ಕೆ ಕೆಎಟಿ ತಾತ್ಕಾಲಿಕ ತಡೆ
ಕನ್ನಡಿಗ ಪಾಟೀಲ್‌ಗೆ ಅಮೆರಿಕ ಎಐ ಕಂಪನಿಯ ಉನ್ನತ ಹುದ್ದೆ