- ರಾಜ್ಯ ಸರ್ಕಾರ ವಿರುದ್ಧ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ಶಾಸಕ ರೇಣುಕಾಚಾರ್ಯ ಆರೋಪ । ತಹಸೀಲ್ದಾರ್ ಮುಖೇನ ರಾಜ್ಯಪಾಲರಿಗೆ ಮನವಿ - - - ಕನ್ನಡಪ್ರಭ ವಾರ್ತೆ ಹೊನ್ನಾಳಿ
ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಮಂಗಳವಾರ ಬೆಳಗ್ಗೆ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕು ಬಿಜೆಪಿ ವತಿಯಿಂದ ಮಾಜಿ ಸಚಿವ ರೇಣುಕಾಚಾರ್ಯ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಭಾಗ್ಯಲಕ್ಷ್ಮೀ ಯೋಜನೆ, ವಿದ್ಯಾನಿಧಿಯಂತಹ ಅತ್ಯುತ್ತಮ ಯೋಜನೆಗಳನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿದ ಅವರು, ಪಕ್ಷದ ಬೇಡಿಕೆಗಳನ್ನು ರಾಜ್ಯ ಸರ್ಕಾರ ಜನತೆ ಹಿತದೃಷ್ಠಿಯಿಂದ ಈಡೇರಿಸಬೇಕು ಎಂದು ಅಗ್ರಹಿಸಿದರು.
ಸಿಎಂ ಕುರ್ಚಿಗಾಗಿ ಕಾಂಗ್ರೆಸ್‌ನಲ್ಲೇ ಕಿತ್ತಾಟ:ರಾಜ್ಯದಲ್ಲಿ ಕಾಂಗ್ರೆಸ್ ಅಡಳಿತ ಸಂಪೂರ್ಣ ವೈಫಲ್ಯ ಕಂಡಿದೆ. ರಾಜ್ಯ ಸರ್ಕಾರ ವಾಲ್ಮೀಕಿ ನಿಗಮ ಮತ್ತು ಮೂಡಾ ನಿವೇಶನ ಹಗರಣಗಳಲ್ಲಿ ಸಿಲುಕಿದೆ. ಮುಖ್ಯಮಂತ್ರಿ ಸೀಟಿಗಾಗಿ ಅವರ ಪಕ್ಷದ ಅನೇಕ ನಾಯಕರು ನಾ ಮುಂದು, ತಾ ಮುಂದು ಎಂದು ಟವಲ್ ಹಾಕುವುದರಲ್ಲಿಯೇ ನಿರತರಾಗಿದ್ದಾರೆ. ರಾಜ್ಯದ ಜನತೆ ಹಿತವನ್ನುಸಂಪೂರ್ಣ ಮರೆತಿದ್ದಾರೆ. ಬಿಜೆಪಿಯವರು ಸರ್ಕಾರವನ್ನು ಬೀಳಿಸುವುದಿಲ್ಲ. ಆದರೆ, ಕಾಂಗ್ರೆಸ್‌ನ ಹಲವಾರು ಮುಖಂಡರೇ ಸಿ.ಎಂ. ಕುರ್ಚಿ ವ್ಯಾಮೋಹದಿಂದ ಸರ್ಕಾರವನ್ನು ಬೀಳಿಸುತ್ತಾರೆ ಎಂದರು.
ಈಗಾಗಲೇ ಎಂ.ಪಿ. ರೇಣುಕಾಚಾರ್ಯ ಮೂಲೆ ಗುಂಪಾಗಿದ್ದಾರೆ ಎಂದು ಕಾಂಗ್ರೆಸ್ ಕೆಲ ನಾಯಕರು ಹೇಳುತ್ತಿದ್ದಾರೆ. ಆದರೆ, ಇದು ಅವರ ಹಗಲು ಕನಸು. ಸದಾ ಜನರ ಮಧ್ಯ ಇದ್ದು, ಕೊನೆ ಉಸಿರಿರುವ ತನಕ ಜನತೆಗಾಗಿ ಹೋರಾಟ ಮಾಡುವವನು ನಾನು. ಯಾರೂ ಕೂಡ ನನ್ನನ್ನು ಮೂಲೆಯಲ್ಲಿ ಕೂರಿಸಲು ಸಾಧ್ಯವಿಲ್ಲ ಎಂದು ರೇಣುಕಾಚಾರ್ಯ ಹೇಳಿದರು.
ಬಿಜೆಪಿ ಜಿಲ್ಲಾ ಅಧ್ಯಕ್ಷ ರಾಜಶೇಖರ ನಾಗಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಸದಸ್ಯತ್ವ ಅಭಿಯಾನದ ಉಸ್ತುವಾರಿಗಳಾದ ಕಡ್ಲೇಬಾಳು, ಧನಂಜಯ, ಮತ್ತೊಬ್ಬ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್, ತಾಲೂಕು ಬಿಜಿಪಿ ಮಂಡಲ ಅಧ್ಯಕ್ಷ ಜೆ.ಕೆ. ಸುರೇಶ್, ಹಾಗೂ ಬಿಜೆಪಿ ಹಿಂದುಳಿದ ರಾಜ್ಯ ಉಪಾಧ್ಯಕ್ಷ ಕೆ.ಪಿ. ಕುಬೇರಪ್ಪ ಮಾತನಾಡಿದರು.
ಪ್ರತಿಭಟನೆಯಲ್ಲಿ ದಿಡಗೂರು ಪಾಲಾಕ್ಷಪ್ಪ, ಹಿರೇಮಠದ ರಾಜು, ನೆಲಹೊನ್ನೆ ಮಂಜು, ಕೆ.ರಂಗಪ್ಪ, ಸುರೇಂದ್ರ ನಾಯ್ಕ, ಸಿ.ಆರ್. ಶಿವಾನಂದ, ಮಹೇಶ್ ಹುಡೇದ್, ನ್ಯಾಮತಿ ರವಿಕುಮಾರ್, ಬೆನಕನಹಳ್ಳಿ ಮಹೇಂದ್ರ ಗೌಡ, ಪೇಟೆ ಪ್ರಶಾಂತ್, ಹಲವಾರು ಮುಖಂಡರು, ಕಾರ್ಯಕರ್ತರು ಇದ್ದರು.
ಬಾಕ್ಸ್
- ಸಾವಿರಾರು ಕೋಟಿ ರೈತರ ಹಾಲಿನ ಪ್ರೋತ್ಸಾಹಧನ ಕೂಡಲೇ ಬಿಡುಗಡೆ ಮಾಡಬೇಕು
- ಕೃಷಿ ಇಲಾಖೆ ನೀಡುವ ಕೃಷಿ ಪರಿಕರಗಳ ದರವನ್ನು ಕಡಿಮೆ ಮಾಡಬೇಕು
- ಏರಿಕೆಯಾದ ಹಾಲಿನ ದರವನ್ನು ಸಂಪೂರ್ಣವಾಗಿ ರೈತರಿಗೆ ತಲುಪಿಸಿಬೇಕು- ನೋಂದಣೆ ಮತ್ತು ಮುದ್ರಾಂಕ ಇಲಾಖೆಯಿಂದ ಹೆಚ್ಚಿಸಿರುವ ಇ-ಸ್ಟಾಂಪ್ ಮುದ್ರಾಂಕ ಶುಲ್ಕವನ್ನು ಕಡಿಮೆ ಮಾಡಬೇಕು
- ವಿದ್ಯುತ್ ದರ ಹಾಗೂ ಮಾಸಿಕ ನಿಗದಿತ ಶುಲ್ಕ ಕಡಿತಗೊಳಿಸಬೇಕು- ತುಂತುರು ನೀರಾವರಿ ಸಿಂಚನ ಯೋಜನೆಯಡಿ ರೈತರಿಗೆ ರಾಜ್ಯ ಸರ್ಕಾರದ ಪಾಲಿನ ಹಣವನ್ನು ಬಿಡುಗಡೆ ಮಾಡಬೇಕು
- ಆಶ್ರಯ, ಅಂಬೇಡ್ಕರ್ ಇಂದಿರಾ ಅವಾಜ್ ಮನೆಗಳಿಗೆ ಸಹಾಯಧನ, ನ್ಯಾಯಬೆಲೆ ಅಂಗಡಿಗಳ ಮೂಲಕ ಬಡವರಿಗೆ ಕನಿಷ್ಠ 10 ಕೆಜಿ ಅಕ್ಕಿ ವಿತರಿಸಬೇಕು- ಉದ್ಯೋಗ ಖಾತ್ರಿ ಯೋಜನೆ ತ್ವರಿತವಾಗಿ ಅನುಷ್ಠಾನಗೊಳಿಸಬೇಕು
- - - -17ಎಚ್.ಎಲ್.ಐ1:ಮಂಗಳವಾರ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರ ನೇತೃತ್ವದಲ್ಲಿ ನ್ಯಾಮತಿ ಮತ್ತು ಹೊನ್ನಾಳಿ ಅವಳಿ ತಾಲೂಕುಗಳ ಬಿಜೆಪಿ ಮುಖಂಡರು, ಕಾರ್ಯಕರ್ತರು ರಾಜ್ಯ ಸರ್ಕಾದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿ ರಾಜ್ಯ ಪಾಲರಿಗೆ ಹೊನ್ನಾಳಿ ತಹಶೀಲ್ದಾರ್ ಪಟ್ಟರಾಜ ಗೌಡ ಅವರ ಮೂಲಕ ಮನವಿ ಸಲ್ಲಿಸಿದರು. -17ಎಚ್.ಎಲ್.ಐ1ಎಃ:
ಅವಳಿ ತಾಲೂಕು ಬಿಜೆಪಿ ಮುಖಂಡರು, ಕಾರ್ಯಕರ್ತರು ಪಟ್ಟಣದ ಟಿ.ಬಿ.ವೃತ್ತದಿಂದ ತಾಲೂಕು ಕಚೇರಿಯವರಿಗೆ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು.