ಕನ್ನಡಪ್ರಭ ವಾರ್ತೆ ಸುರಪುರ
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇರಳದ ನುರಿತ ಮತ್ತು ಅನುಭವಿ ಶಿಕ್ಷಕರಿಂದ ಮಕ್ಕಳಿಗೆ 21ನೇ ಶತಮಾನದ ಕೌಶಲ್ಯಗಳ ರೀತಿ ಶಿಕ್ಷಣ ಒದಗಿಸಲಾಗುತ್ತದೆ. ಸ್ಮಾರ್ಟ್ ಕ್ಲಾಸ್, ಕಂಪ್ಯೂಟರ್ ಶಿಕ್ಷಣ ಮಕ್ಕಳ ವೈಯಕ್ತಿಕ ಪ್ರತಿಭೆ ಬೆಳೆಸುವುದು ನಮ್ಮ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ ಎಂದರು.
ಮೇ 12ರಂದು ಶಿಕ್ಷಣ ತಜ್ಞ ಗುರುರಾಜ ಕರಜಗಿ ಉಪನ್ಯಾಸ ನೀಡುವರು. ಹೊಸದುರ್ಗ ಭಗೀರಥ ಪೀಠಾಧಿಪತಿ ಡಾ. ಪುರುಷೋತ್ತಮಾನಂದಪುರಿ ಸ್ವಾಮೀಜಿ, ತಿಂಥಣಿ ಕನಕ ಗುರು ಪೀಠಾಧಿಪತಿ ಸಿದ್ಧರಾಮಾನಂದಪುರಿ ಸ್ವಾಮೀಜಿ, ಗೋಲಪಲ್ಲಿ ವಾಲ್ಮೀಕಿ ಆಶ್ರಮದ ವರದಾನೇಶ್ವರ ಸ್ವಾಮೀಜಿ, ವೀರಘಟ್ಟದ ಅಡವಿಲಿಂಗ ಮಹಾರಾಜ, ಲಕ್ಷ್ಮಿಪುರ ಶ್ರೀಗಿರಿ ಮಠದ ಡಾ. ಚನ್ನಮಲ್ಲಿಕಾರ್ಜುನ ಶಿವಾಚಾರ್ಯರು, ಅಗತೀರ್ಥ ರೇವಣಸಿದ್ದೇಶ್ವರ ಶಾಂತಮಯ ಸ್ವಾಮೀಜಿ ಸಾನಿಧ್ಯ ವಹಿಸುವರು ಎಂದು ತಿಳಿಸಿದರು.ಅಂಬಿಕಾ ಡಾ. ಮುಕುಂದ ಯನಗುಂಟಿ ಅಧ್ಯಕ್ಷತೆ ವಹಿಸುವರು. ಉಪನಿರ್ದೇಶಕ ಮಂಜುನಾಥ, ಬಿಇಒ ಯಲ್ಲಪ್ಪ ಕಾಡ್ಲೂರ ಭಾಗವಹಿಸಲಿದ್ದಾರೆ ಎಂದರು.