ತಲಕಾವೇರಿ: ಭಂಡಾರ ಮನೆಯ ಉದ್ಘಾಟನೆ

KannadaprabhaNewsNetwork |  
Published : Oct 17, 2026, 02:45 AM IST
 ಸರ್ಕಾರದ ವತಿಯಿಂದ ಒದಗಿಸಲಾದರೂ. 1 ಕೋಟಿ ಅನುದಾನದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಭಂಡಾರ ಮನೆಯನ್ನು ಶಾಸಕರು ಹಾಗೂಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯವರಾದ ಎ.ಎಸ್. ಪೊನ್ನಣ್ಣ ಅವರು ಉದ್ಘಾಟಿಸಿದರು. | Kannada Prabha

ಸಾರಾಂಶ

ತಲಕಾವೇರಿ: ಭಂಡಾರ ಮನೆಯ ಉದ್ಘಾಟನೆ

ನಾಪೋಕ್ಲು : ತಲಕಾವೇರಿಯಲ್ಲಿ 1 ಕೋಟಿ ಅನುದಾನದಲ್ಲಿ ನೂತನವಾಗಿ ತರಕಾರಿಯಲ್ಲಿ ನಿರ್ಮಾಣಗೊಂಡಿರುವ ಭಂಡಾರಮನೆಯನ್ನು ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಉದ್ಘಾಟಿಸಿದರು. ತರುವಾಯ ಅವರು ತಲಕಾವೇರಿ ತೀರ್ಥೋದ್ಭವಕ್ಕೆ ಕೈಗೊಂಡಿರುವ ಸಿದ್ಧತೆಗಳು ಮತ್ತು ಭಕ್ತಾದಿಗಳ ಅನುಕೂಲಕ್ಕಾಗಿ ಮಾಡಲಾಗಿರುವ ವ್ಯವಸ್ಥೆಗಳನ್ನು ವೀಕ್ಷಿಸಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಇಂದು ನಡೆಯಲಿರುವ ತೀರ್ಥೋದ್ಭವ ಮಹೋತ್ಸವಕ್ಕೆ ರಾಜ್ಯ ಹಾಗೂ ಹೊರರಾಜ್ಯಗಳಿಂದ

ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಲಿದ್ದು, ಯಾರಿಗೂ ಯಾವುದೇ ರೀತಿಯ ಅನಾನುಕೂಲವಾಗದಂತೆ

ಸಕಲ ಮೂಲಭೂತ ಸೌಕರ್ಯಗಳು ಮತ್ತು ಬಿಗಿ ಬಂದೋಬಸ್ತ್ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ

ಕಟ್ಟುನಿಟ್ಟಿನ ಸೂಚನೆ ನೀಡಿದರು. ಭಾಗಮಂಡಲ ತಕ್ಕರಾದ ಬಳ್ಳಡ್ಕ ಅಪ್ಪಾಜಿ, ತಲಕಾವೇರಿ ತಕ್ಕರಾದ ಕೋಡಿ ಮೋಟಯ್ಯ, ಭಾಗಮಂಡಲ ತಲಕಾವೇರಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಬಾನಂಡ ಪ್ರತ್ಯು, ಸಮಿತಿಯ ಸದಸ್ಯರು ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ , ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಷ್ಟ್ರ ನಿರ್ಮಾಣದಲ್ಲಿ ರೈತ-ಯೋಧರ ಕೊಡುಗೆ ಅಪಾರ
ರೈತರ ಕಷ್ಟ ನಿವಾರಣೆಗೆ ಮಾದರಿ ಪ್ರಯತ್ನವಾಗಲಿ