ಪ್ರತಿಭೆ, ಸಾಧನೆ ಸಾಧಕರ ಸ್ವತ್ತು: ಕೆ.ಟಿ.ಹನುಮಂತು

KannadaprabhaNewsNetwork | Published : Apr 22, 2025 1:46 AM

ಸಾರಾಂಶ

ಮಂಡ್ಯ ಜಿಲ್ಲೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಬೇಕು. ಗ್ರಾಮೀಣ ಪ್ರದೇಶದ ಪ್ರತಿಭಾವಂತರು ಐಎಎಸ್, ಐಪಿಎಸ್, ಐಆರ್‌ಎಸ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಗುರಿಯಾಗಿಸಿಕೊಂಡು ಸಾಧನೆ ಮಾಡಬೇಕು. ಜೊತೆಗೆ ಹೊಸ ಹೊಸ ತಂತ್ರಜ್ಞಾನ, ತಾಂತ್ರಿಕ ಕೋರ್ಸ್ ಗಳಿವೆ. ಅವುಗಳ ಬಗ್ಗೆ ಗಮನ ನೀಡಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ಪ್ರತಿಭೆ ಮತ್ತು ಸಾಧನೆ ಸಾಧಕರ ಸ್ವತ್ತೇ ಹೊರತು ಸೋಮಾರಿಗಳ ಸ್ವತ್ತಲ್ಲ ಎಂದು ಅಲಯನ್ಸ್ ಸಂಸ್ಥೆಯ ಸೌತ್ ಮಲ್ಟಿಪಲ್ ಕೌನ್ಸಿಲ್ ಅಧ್ಯಕ್ಷ ಕೆ.ಟಿ.ಹನುಮಂತು ಹೇಳಿದರು.

ನಗರದ ಸ್ಪೋರ್ಟ್ಸ್ ಸಂಸ್ಥೆ ಸಭಾಂಗಣದಲ್ಲಿ ಅಸೋಸಿಯೇಷನ್ ಆಫ್ ಅಲೆಯನ್ಸ್ ಸಂಸ್ಥೆ ಇಂಟರ್ ನ್ಯಾಷನಲ್ ಹಾಗೂ ಕೃಷಿಕ ಆಲಯನ್ಸ್ ಸಂಸ್ಥೆ ಆಯೋಜಿಸಿದ್ದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನೂತನ ತಂಡದ ಪ್ರತಿಜ್ಞಾವಿಧಿ ಸ್ವೀಕಾರ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.

ಶ್ರಮದಿಂದ ಓದಿದರೆ ಪ್ರತಿಭಾವಂತರಾಗುತ್ತಾರೆ. ಗುರಿ ತಲುಪಲು ಪರಿಶ್ರಮಪಟ್ಟರೆ ಸಾಧಕರಾಗುತ್ತಾರೆ. ಅದೇ ರೀತಿ ವಿದ್ಯಾರ್ಥಿಗಳು ಸಾಧನೆ ಮಾಡಿ ಜಿಲ್ಲೆಗೆ ಕೀರ್ತಿ ತಂದು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಫಲಿತಾಂಶ ತರುವಲ್ಲಿ ಯಶಸ್ಸು ಕಂಡಿದ್ದೀರಿ ಎಂದರು.

ಮಂಡ್ಯ ಜಿಲ್ಲೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಬೇಕು. ಗ್ರಾಮೀಣ ಪ್ರದೇಶದ ಪ್ರತಿಭಾವಂತರು ಐಎಎಸ್, ಐಪಿಎಸ್, ಐಆರ್‌ಎಸ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಗುರಿಯಾಗಿಸಿಕೊಂಡು ಸಾಧನೆ ಮಾಡಬೇಕು. ಜೊತೆಗೆ ಹೊಸ ಹೊಸ ತಂತ್ರಜ್ಞಾನ, ತಾಂತ್ರಿಕ ಕೋರ್ಸ್ ಗಳಿವೆ. ಅವುಗಳ ಬಗ್ಗೆ ಗಮನ ನೀಡಬೇಕು ಎಂದರು.

ಇದೇ ವೇಳೆ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದು ಜಿಲ್ಲೆಗೆ ಕೀರ್ತಿ ತಂದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗಣ್ಯರ ಸಮ್ಮುಖದಲ್ಲಿ ಅಭಿನಯಿಸಲಾಯಿತು.

ಸಮಾರಂಭದಲ್ಲಿ ಅಲಯನ್ಸ್ ಸಂಸ್ಥೆ ಒಂದನೇ ಉಪರಾಜ್ಯಪಾಲ ಕೆ.ಆರ್.ಶಶಿಧರ್ ಈಚೆಗೆರೆ, ಎರಡನೇ ಉಪರಾಜ್ಯಪಾಲ ಕೆ.ಎಸ್. ಚಂದ್ರಶೇಖರ್, ಜಿಲ್ಲಾ ಸಂಪುಟ ಕಾರ್ಯದರ್ಶಿ ವಿ.ಎಸ್.ನಾಗರಾಜ, ಜಿಲ್ಲಾ ಸಂಪುಟದ ಎಸ್.ಆರ್. ಮಹೇಶ್, ಪ್ರಾಂತೀಯ ಅಧ್ಯಕ್ಷ ಟಿ.ಎನ್.ರಕ್ಷಿತ್‌ರಾಜ್, ವಲಯ ಅಧ್ಯಕ್ಷ ದಯಾನಂದ್, ಕೃಷಿಕ ಅಲಯನ್ಸ್ ಸಂಸ್ಥೆ ನೂತನ ಅಧ್ಯಕ್ಷ ಎ.ಆರ್.ಕುಮಾರ್, ಕಾರ್ಯದರ್ಶಿ ಮೋಹನ್ ಕುಮಾರ್, ಖಜಾಂಚಿ ಸಿ.ಎಸ್. ಮಲ್ಲೇಶ್, ಉಪಾಧ್ಯಕ್ಷ ಎಂ.ಕುಮಾರ್, ಪ್ರತಿಭಾಂಜಲಿ ಡೇವಿಡ್, ಎಸ್.ಎನ್.ಕೃಷ್ಣಪ್ಪ, ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ನಟರಾಜು ಮತಿತರದ್ದರು.

Share this article