31ರಂದು ಹೊನ್ನಾಳಿಯಲ್ಲಿ ಪಂಚಮಸಾಲಿ ಸಮಾಜದಿಂದ ಪ್ರತಿಭಾ ಪುರಸ್ಕಾರ, ಸನ್ಮಾನ

KannadaprabhaNewsNetwork |  
Published : May 27, 2026, 02:15 AM IST
ಕ್ಯಾಪ್ಷನ23ಕೆಡಿವಿಜಿ32 ಹೊನ್ನಾಳಿಯಲ್ಲಿ ಪಂಚಮಸಾಲಿ ಸಮಾಜದಿಂದ ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಿರುವ ಕುರಿತು ದಾವಣಗೆರೆಯ ಸುದ್ದಿಗೋಷ್ಠಿಯಲ್ಲಿ ಹಾಲೇಶ ಕುಂಕೋದ್ ತಿಳಿಸಿದರು. | Kannada Prabha

ಸಾರಾಂಶ

ಜಿಲ್ಲೆಯ ಹೊನ್ನಾಳಿ ತಾಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭವನ್ನು ಮೇ 31ರಂದು ಬೆಳಗ್ಗೆ 10.30 ಗಂಟೆಗೆ ಹೊನ್ನಾಳಿ ಹಿರೇಕಲ್ಮಠದ ಪಂಚಾಚಾರ್ಯ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜದ ಪ್ರಧಾನ ಕಾರ್ಯದರ್ಶಿ ಹಾಲೇಶ ಕುಂಕೋದ್ ತಿಳಿಸಿದ್ದಾರೆ.

- ಗಡಿನಾಡು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣರಿಂದ ಉದ್ಘಾಟನೆ

- - -

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭವನ್ನು ಮೇ 31ರಂದು ಬೆಳಗ್ಗೆ 10.30 ಗಂಟೆಗೆ ಹೊನ್ನಾಳಿ ಹಿರೇಕಲ್ಮಠದ ಪಂಚಾಚಾರ್ಯ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜದ ಪ್ರಧಾನ ಕಾರ್ಯದರ್ಶಿ ಹಾಲೇಶ ಕುಂಕೋದ್ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 10.30ಕ್ಕೆ ಕಾರ್ಯಕ್ರಮವನ್ನು ಗಡಿನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ವಿ. ಬೇವಿನಮರದ ಉದ್ಘಾಟಿಸುವರು. ಸಮಾಜದ ಅಧ್ಯಕ್ಷ ಪಿ.ವೀರಣ್ಣ ಪಟ್ಟಣಶೆಟ್ಟಿ ಅಧ್ಯಕ್ಷತೆ ವಹಿಸುವರು. ಸುಧಾ ಪಿ.ಪಾಟೀಲ್, ಡಾ.ಎಚ್.ಪಿ.ರಾಜಕುಮಾರ್ ಪ್ರತಿಭಾ ಪುರಸ್ಕಾರ ನಡೆಸಿಕೊಡುವರು. ಸಮಾಜದ ಮುಖಂಡರಾದ ಎನ್.ಡಿ.ಪಂಚಾಕ್ಷರಪ್ಪ, ಹೆಚ್.ಬಿ.ಅಶೋಕ್, ಚಂದ್ರಶೇಖರ ಪೂಜಾರ್, ಕೆ.ಎನ್.ಹಾಲೇಶ, ಎಚ್.ಪಿ.ಗಿರೀಶ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದರು.

ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಗಳಿಸಿದ ಹೊನ್ನಾಳಿ ತಾಲೂಕಿನ ಸಮಾಜದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುವುದು. ಯಾವುದೇ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ ವಿದ್ಯಾರ್ಥಿಗಳಿಗೆ ಬೆಳ್ಳಿಪದಕ ನೀಡಿ ಗೌರವಿಸಲಾಗುವುದು. ವಿವಿಧ ಕ್ಷೇತ್ರಗಳ ಸಾಧಕರು ಹಾಗೂ ನಿವೃತ್ತ ನೌಕರರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಪ್ರತಿಭಾ ಪುರಸ್ಕಾರಕ್ಕೆ ಮೇ 25ರೊಳಗೆ ಅಂಕಪಟ್ಟಿಯ ಜೆರಾಕ್ಸ್ ಪ್ರತಿ ಹಾಗೂ 2 ಭಾವಚಿತ್ರಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಮೊ: 94807- 67070, 98807- 09470 ಸಂಪರ್ಕಿಸುವಂತೆ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಸಮಾಜದ ಮುಖಂಡರಾದ ಎಚ್.ಬಿ. ಅಶೋಕ, ಎಚ್.ಆರ್. ಪ್ರಭು, ಹಾಲಸ್ವಾಮಿ ಇದ್ದರು.

- - -

-23ಕೆಡಿವಿಜಿ32:

ಹೊನ್ನಾಳಿಯಲ್ಲಿ ಪಂಚಮಸಾಲಿ ಸಮಾಜದಿಂದ ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ ಕುರಿತು ದಾವಣಗೆರೆಯಲ್ಲಿ ಹಾಲೇಶ ಕುಂಕೋದ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರತ್ಯೇಕ ಹೋರಾಟ ವೇದಿಕೆಯಲ್ಲಿ ಕ್ರೆಡಿಟ್‌ ವಾರ್‌
ಷರತ್ತುಗಳೊಂದಿಗೆ ಪ್ರತ್ಯೇಕ ಪಾಲಿಕೆಗೆ ರಾಜ್ಯಪಾಲರ ಮುದ್ರೆ