ನವೆಂಬರ್ ತಿಂಗಳಲ್ಲಿ ಪ್ರತಿಭಾ ಪುರಸ್ಕಾರ, ಜಿಲ್ಲಾ ಮಟ್ಟದ ಕ್ರೀಡಾಕೂಟ‌: ಹೆಚ್.ವಿ.ಶಿವಪ್ಪ

KannadaprabhaNewsNetwork |  
Published : Oct 11, 2025, 12:03 AM IST
ಸುದ್ದಿಗೋಷಿ ಸಂದರ್ಭ | Kannada Prabha

ಸಾರಾಂಶ

ಪ್ರತಿಭಾ ಪುರಸ್ಕಾರ ಮತ್ತು ಜಿಲ್ಲಾ ಮಟ್ಟದ ಕ್ರೀಡಾಕೂಟ ನವೆಂಬರ್‌ ತಿಂಗಳಲ್ಲಿ ಸೋಮವಾರಪೇಟೆಯಲ್ಲಿ ಹಮ್ಮಿಕೊಳ್ಳಲಾಗಿದೆ.

ಕನ್ನಡಪ್ರಭ ವಾರ್ತೆ ಕುಶಾಲನಗರಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕೊಡಗು ಜಿಲ್ಲಾ ಘಟಕ ಆಶ್ರಯದಲ್ಲಿ 2023-24 ಮತ್ತು 2024-25ನೇ ಸಾಲಿನ ಪ್ರತಿಭಾ ಪುರಸ್ಕಾರ ಮತ್ತು ಜಿಲ್ಲಾ ಮಟ್ಟದ ಕ್ರೀಡಾಕೂಟ‌ ನವೆಂಬರ್ ತಿಂಗಳಲ್ಲಿ ಸೋಮವಾರಪೇಟೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಘಟಕದ ಜಿಲ್ಲಾಧ್ಯಕ್ಷ ಹೆಚ್.ವಿ.ಶಿವಪ್ಪ ಅವರು ತಿಳಿಸಿದರು.ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಪರಿಕ್ಷೆಯಲ್ಲಿ ಶೇ 85 ಮತ್ತು ಅದಕ್ಕಿಂತ ಹೆಚ್ಚು ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳು ತಮ್ಮ ಕೈಬರಹದ ಅರ್ಜಿಯೊಂದಿಗೆ ಅಂಕಪಟ್ಟಿ,ಆಧಾರ್ ಕಾರ್ಡ್ ಮತ್ತು 2 ಫೋಟೊಗಳನ್ನು ಲಗತ್ತಿಸಿ ಅರ್ಜಿ ಸಲ್ಲಿಸಲು ಕೋರಿದರು. ಜಿಲ್ಲಾಮಟ್ಟದ ಕ್ರೀಡಾಕೂಟ ನ. 16 ರಂದು ಭಾನುವಾರ ಮತ್ತು ಪತ್ರಿಭಾ ಪುರಸ್ಕಾರ ಕಾರ್ಯಕ್ರಮ ನ. 23 ರಂದು ಭಾನುವಾರ ಸೋಮವಾರಪೇಟೆಯಲ್ಲಿ ಆಯೋಜಿಸಲಾಗಿದೆ. ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳು ಈ ಸದವಕಾಶ ಸದುಪಯೋಗಪಡಿಸಿಕೊಂಡು ಅ. 25 ರೊಳಗೆ ಅರ್ಜಿ ಸಲ್ಲಿಸಬೇಕಿದೆ ಎಂದು ಕೋರಿದರು. ಅಂತೆಯೇ ಜಿಲ್ಲಾಮಟ್ಟದ ಕ್ರೀಡಾಕೂಟ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸಮುದಾಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಯಾಗಿಸಲು ಕೈಜೋಡಿಸುವಂತೆ ಕೋರಿದರು.

ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಎಸ್.ಶಾಂಭಶಿವಯ್ಯ ಮಾತನಾಡಿ, 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಪುನಃ ಅರ್ಜಿ ಸಲ್ಲಿಸಬೇಕಾಗಿಲ್ಲ ಎಂದು ತಿಳಿಸಿದರು. ಅರ್ಜಿಯನ್ನು ಶಾಂಭಶಿವಯ್ಯ ಟಿ.ಎಸ್. 541, 4ನೇ ಬ್ಲಾಕ್, ಹೌಸಿಂಗ್ ಬೋರ್ಡ್ ಹಿಂಭಾಗ, ಶಿವರಾಮ ಕಾರಂತ ಬಡಾವಣೆ, ಕುಶಾಲನಗರ-571234 ಅಂಚೆ ವಿಳಾಸಕ್ಕೆ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಾಂಭಶಿವಯ್ಯ-9448336781, ಪ್ರವೀಣ್ ಕೊಡ್ಲಿಪೇಟೆ-9880255031, ಎಸ್.ಎಂ.ರಾಜೇಶ್-9483110979, ಲಿಖಿತ್ ಶನಿವಾರಸಂತೆ-9148246416, ಪಕೀರಯ್ಯ ಹಿರೇಮಠ ಮಡಿಕೇರಿ-8095346003 ಗೆ ಸಂಪರ್ಕಿಸಬಹುದು, ಅಥವಾ ಈ ಸಂಖ್ಯೆಗೆ ಅರ್ಜಿ ಸಲ್ಲಿಸಬಹುದು.ಗೋಷ್ಠಿಯಲ್ಲಿ ಜಿಲ್ಲಾ ಘಟಕದ ಕೋಶಾಧ್ಯಕ್ಷ ಹೆಚ್.ಪಿ.ಉದಯಕುಮಾರ್, ಕುಶಾಲನಗರ ತಾಲೂಕು ಘಟಕದ ಅಧ್ಯಕ್ಷ ಹೆಚ್.ಎಂ.ಮಧುಸೂದನ್, ಕಾರ್ಯದರ್ಶಿ ಎಸ್. ಧರ್ಮೇಂದ್ರ ಇದ್ದರು.

PREV

Recommended Stories

ಸಂಪುಟ ಪುನರ್‌ ರಚನೆ ಸುಳಿವು : ದಲಿತ ಸಚಿವರ ಸಭೆ!
ಶೂದ್ರ ಶ್ರೀನಿವಾಸ್‌ ಸೇರಿ ಐವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ