ವಿದ್ಯಾರ್ಥಿಗಳ ಉತ್ತೇಜನಕ್ಕೆ ಪ್ರತಿಭಾ ಪುರಸ್ಕಾರ: ಮಾಜಿ ಶಾಸಕ ಎಸ್.ಎಂ.ನಾಗರಾಜ್

KannadaprabhaNewsNetwork |  
Published : Jun 27, 2025, 12:48 AM IST
ಜೂನ್ 29 ರಂದು ಅಜ್ಜಂಪುರದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ | Kannada Prabha

ಸಾರಾಂಶ

ತರೀಕೆರೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡಲು ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ನೊಳಂಬ ಲಿಂಗಾಯತ ಸಂಘ ಮಾಜಿ ಅಧ್ಯಕ್ಷ, ಮಾಜಿ ಶಾಸಕ ಎಸ್.ಎಂ.ನಾಗರಾಜ್ ಹೇಳಿದ್ದಾರೆ.

- 29 ರಂದು ಅಜ್ಜಂಪುರದಲ್ಲಿ ಸಮಾರಂಭ

ಕನ್ನಡಪ್ರಭ ವಾರ್ತೆ, ತರೀಕೆರೆ

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡಲು ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ನೊಳಂಬ ಲಿಂಗಾಯತ ಸಂಘ ಮಾಜಿ ಅಧ್ಯಕ್ಷ, ಮಾಜಿ ಶಾಸಕ ಎಸ್.ಎಂ.ನಾಗರಾಜ್ ಹೇಳಿದ್ದಾರೆ.

ಗುರುವಾರ ಶ್ರೀ ಗುರು ಸಿದ್ದರಾಮೇಶ್ವರ ವ್ಯವಸಾಯ ಪತ್ತಿನ ಸಹಕಾರ ಸಂಘದ ಅವರಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರತಿಭಾ ಪುರಸ್ಕಾರದ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದರು. ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಈ ಬಾರಿ ವಿದ್ಯಾರ್ಥಿಗಳು ಶೇ.99.5 ರಷ್ಟು ಅತ್ಯಧಿಕ ಅಂಕ ಗಳಿಸಿರುವುದು ಸಂತೋಷ ತಂದಿದೆ. ನೊಳಂಬ ಲಿಂಗಾಯತ ಸಂಘ ಬೆಂಗಳೂರು ಮತ್ತು ಶ್ರೀ ಗುರು ಸಿದ್ದರಾಮೇಶ್ವರ ಸಮುದಾಯ ಭವನ ಉಪ ಸಮಿತಿ ಅಜ್ಜಂಪುರ, ದಾನಿ ಗಳಾದ ದಿ. ಗೌರಮ್ಮ, ದಿ. ಜಿ.ಎಸ್.ಸಿದ್ದರಾಮಪ್ಪ (ಚೆನ್ನಬಸಪ್ಪ) ಜಿ.ಜಿ.ಹಳ್ಳಿ ಇವರ ಸ್ಮರಣಾರ್ಥ ಜಿಲ್ಲೆಯ ಅತಿ ಹೆಚ್ಚು ಅಂಕ ಪಡೆದ ಎಸ್ಎಸ್ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಜೂ. 29 ರಂದು ಬೆಳಿಗ್ಗೆ 10.30ಕ್ಕೆ ಅಜ್ಜಂಪುರ ಶ್ರೀ ಗುರು ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಸತತವಾಗಿ ಕಳೆದ 12 ವರ್ಷಗಳಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯುತ್ತಿದ್ದು, ಈ ಕಾರ್ಯಕ್ರಮದಲ್ಲಿ 150ಕ್ಕೂ ಹೆಚ್ಚು ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಕಡೂರು ಶ್ರೀಮಠ ಯಳನಡು, ಅರಸೀಕೆರೆ ಮಹಾ ಸಂಸ್ಥಾನ ಪೂಜ್ಯಶ್ರೀ ಶ್ರೀ ಜ್ಞಾನಪ್ರಭು ಸಿದ್ದರಾಮದೇಶೀಕೇಂದ್ರ ಮಹಾಸ್ವಾಮಿ ಕಾರ್ಯಕ್ರಮದ ನೇತೃತ್ವ ವಹಿಸಲಿದ್ದು, ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಸಮಾರಂಭ ಉದ್ಘಾಟಿಸಲಿದ್ದಾರೆ. ಮಾಜಿ ಶಾಸಕ ಎಸ್.ಎಂ.ನಾಗರಾಜ್ ಅವರು ಪ್ರಾಸ್ತಾವಿಕ ನುಡಿ ನುಡಿಯಲಿದ್ದಾರೆ ಎಂದು ತಿಳಿಸಿದ್ದಾರೆ. ಬೆಂಗಳೂರು ನೊಳಂಬ ಲಿಂಗಾಯತ ಸಂಘ ಅಧ್ಯಕ್ಷ ಬಿ.ಕೆ.ಚಂದ್ರಶೇಖರ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ತುಮಕೂರು ರಾಜ್ಯ ಬಿಜೆಪಿ ವಕ್ತಾರ, ಎಚ್.ಎನ್.ಸಿ ಲೈವ್ ಯುಟೂಬ್ ಚಾನಲ್ ವ್ಯವಸ್ಥಾಪಕ ಎಚ್.ಎನ್.ಚಂದ್ರಶೇಖರ್ ಉಪನ್ಯಾಸ ನೀಡಲಿದ್ದು, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ನಡೆಯಲಿದೆ ಎಂದು ತಿಳಿಸಿದ್ದಾರೆ.

ಶ್ರೀ ಗುರು ಸಿದ್ದರಾಮೇಶ್ವರ ಸಮುದಾಯ ಭವನದ ಜಗದೀಶ್ ಮತ್ತು ಮಹೇಶ್ವರಪ್ಪ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

26ಕೆಟಿಆರ್.ಕೆ.5ಃ

ತರೀಕೆರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಬೆಂಗಳೂರು ನೊಳಂಬ ಲಿಂಗಾಯತ ಸಂಘ ಮಾಜಿ ಅಧ್ಯಕ್ಷ, ಮಾಜಿ ಶಾಸಕ ಎಸ್.ಎಂ.ನಾಗರಾಜ್ ಅಹ್ವಾನ ಪತ್ರಿಕೆ ಬಿಡುಗಡೆ ಮಾಡಿದರು. ಶ್ರೀ ಗುರು ಸಿದ್ದರಾಮೇಶ್ವರ ಸಮುದಾಯ ಭವನದ ಜಗದೀಶ್ ಮತ್ತು ಮಹೇಶ್ವರಪ್ಪ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನರೇಗಾ ಮರುಜಾರಿವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ
ಡ್ರಗ್ಸ್‌ ವಿರುದ್ಧ ಸಿಎಂ ತವರಿಂದಲೇ ಹೋರಾಟ : ವಿಜಯೇಂದ್ರ