ಕನ್ನಡಪ್ರಭ ವಾರ್ತೆ ಹನೂರು
ಹನೂರು ತಾಲೂಕಿನ ಶ್ರೀ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದಲ್ಲಿ ಅಂತಿಮ ಪರಿಶೀಲನೆ ನಡೆಸಿ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿದರು. ನಂತರ ಹನೂರು ಪಟ್ಟಣದ ಲೋಕೋಪಯೋಗಿ ಅತಿಥಿ ಗೃಹದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮಕ್ಕಳಿಗೆ ಪ್ರತಿ ವರ್ಷವೂ ಒಂದೊಂದು ಜಿಲ್ಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ. ಈ ಬಾರಿ ಚಾಮರಾಜನಗರ ಜಿಲ್ಲೆಯ ಶ್ರೀ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದಲ್ಲಿ ಆಯೋಜನೆ ಮಾಡಲಾಗಿದೆ. ಕಳೆದ ಒಂದು ತಿಂಗಳಿನಿಂದ ನಿರಂತರವಾಗಿ ಸಿದ್ಧತೆ ನಡೆಸಲಾಗಿದೆ. ಈಗಾಗಲೇ ಜಿಲ್ಲೆಯ ಐದು ತಾಲೂಕು ಘಟಕಗಳಿಗೂ ಪ್ರಚಾರ, ವಸತಿ, ದರ್ಶನ, ಸ್ವಾಗತ ಸಮಿತಿಗಳನ್ನು ರಚನೆ ಮಾಡಿ ಜವಾಬ್ದಾರಿ ನೀಡಲಾಗಿದೆ.
ಕಳೆದ ತಿಂಗಳು ಶ್ರೀ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದಲ್ಲಿ ಐತಿಹಾಸಿಕ ಸಚಿವ ಸಂಪುಟ ಸಭೆ ಯಶಸ್ವಿಯಾಗಿದ್ದು ಇದು ಇತಿಹಾಸ ಪುಟದಲ್ಲಿ ಸೇರ್ಪಡೆಯಾಗಿದೆ. ಅದೇ ರೀತಿ ಶ್ರೀ ಕ್ಷೇತ್ರದಲ್ಲಿ ನಡೆಯುವ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಸಲು ಪ್ರತಿಯೊಬ್ಬರು ಯಾವುದೇ ಲೋಪ ದೋಷಗಳು ಆಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ರಾಜ್ಯದ ವಿವಿಧ ಜಿಲ್ಲೆಗಳಿಂದ ಬರುವ ಅತಿಥಿ ಗಣ್ಯರನ್ನು ಆತ್ಮೀಯವಾಗಿ ಬರಮಾಡಿಕೊಂಡು ವಿಶೇಷ ಆತಿಥ್ಯ ನೀಡಬೇಕು. ಯಾರೂಬ್ಬರ ಮನಸ್ಸಿಗೆ ನೋವು ಉಂಟಾಗದಂತೆ ಸಹಕರಿಸಬೇಕು ಎಂದರು.ಪರಿಶೀಲನೆ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಾಗಮಲೆ ಭವನ ಅತಿಥಿಗೃಹದ ಹೊರಾಂಗಣದಲ್ಲಿ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದ್ದು ಅಂತಿಮವಾಗಿ ಸ್ಥಳ ಪರಿಶೀಲನೆ ಮಾಡಿ ಕಾರ್ಯಕ್ರಮ ಆಯೋಜನೆ ಮಾಡಲು ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸೂಕ್ತ ಸಲಹೆ, ಮಾರ್ಗದರ್ಶನ ನೀಡಿದರು.
ಮಲೆಮಹದೇಶ್ವರ ಬೆಟ್ಟದದಲ್ಲಿ ನಡೆಯಲಿರುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸಂಬಂಧ ಸಿದ್ಧಪಡಿಸಿರುವ ಆಹ್ವಾನ ಪತ್ರಿಕೆಯನ್ನು ಶ್ರೀ ಮಲೆಮಾದೇಶ್ವರ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಸಿ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮಕ್ಕೆ ಬರುವ ಅತಿಥಿ ಗಣ್ಯರನ್ನು ಗೊರುಕನ ನೃತ್ಯ, ಟಿಬೇಟಿಯನ್, ಸಾಂಸ್ಕೃತಿಕ ನೃತ್ಯವಾದ್ಯ ಮೇಳಗಳ ಮೂಲಕ ಮೆರವಣಿಗೆಯಲ್ಲಿ ಕರೆತರಲು ತೀರ್ಮಾನಿಸಲಾಯಿತು.