ಕಬ್ಬಳಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

KannadaprabhaNewsNetwork |  
Published : Jun 02, 2026, 01:45 AM IST
1ಎಚ್ಎಸ್ಎನ್11 :  | Kannada Prabha

ಸಾರಾಂಶ

ಹಿರೀಸಾವೆ ಗ್ರಾಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಹೋಬಳಿ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಚುಂಚಶ್ರೀಗಳ ಕೃಪಾಶೀರ್ವಾದ ಹಾಗೂ ಹಾಸನ ಶಾಖಾ ಮಠದ ಶಂಭುನಾಥ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ ಎಂದರು. ಹಿರೀಸಾವೆ ಹೋಬಳಿ ವ್ಯಾಪ್ತಿಯ ಸರ್ಕಾರಿ ಹಾಗೂ ಖಾಸಗಿ ಪ್ರೌಢಶಾಲೆಗಳಲ್ಲಿ ೨೦೨೬-೨೭ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡ ವಿ?ಯದಲ್ಲಿ ೧೨೫ ಕ್ಕೆ ೧೨೫ ಅಂಕಗಳನ್ನು ಪಡೆದಿರುವ ಮತ್ತು ಅತಿ ಹೆಚ್ಚು ಅಂಕಗಳನ್ನು ಪಡೆದಿರುವ ತಲಾ ಒಬ್ಬರಂತೆ ವಿದ್ಯಾರ್ಥಿಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುವ ಒಟ್ಟು ೨೦ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಗುವುದು ಎಂದು ತಿಳಿಸಿದರು.

ಚನ್ನರಾಯಪಟ್ಟಣ: ಕನ್ನಡ ಸಾಹಿತ್ಯ ಪರಿಷತ್ ಹೋಬಳಿ ಘಟಕದ ವತಿಯಿಂದ ಜೂನ್ ತಿಂಗಳ ಅಂತ್ಯದೊಳಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಆಯೋಜಿಸಲಾಗುವುದು ಎಂದು ಕಸಾಪ ಅಧ್ಯಕ್ಷ ಎಚ್.ಎ. ಪ್ರಮೋದ್ ಹೇಳಿದರು.

ತಾಲೂಕಿನ ಹಿರೀಸಾವೆ ಗ್ರಾಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಹೋಬಳಿ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಚುಂಚಶ್ರೀಗಳ ಕೃಪಾಶೀರ್ವಾದ ಹಾಗೂ ಹಾಸನ ಶಾಖಾ ಮಠದ ಶಂಭುನಾಥ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ ಎಂದರು. ಹಿರೀಸಾವೆ ಹೋಬಳಿ ವ್ಯಾಪ್ತಿಯ ಸರ್ಕಾರಿ ಹಾಗೂ ಖಾಸಗಿ ಪ್ರೌಢಶಾಲೆಗಳಲ್ಲಿ ೨೦೨೬-೨೭ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡ ವಿ?ಯದಲ್ಲಿ ೧೨೫ ಕ್ಕೆ ೧೨೫ ಅಂಕಗಳನ್ನು ಪಡೆದಿರುವ ಮತ್ತು ಅತಿ ಹೆಚ್ಚು ಅಂಕಗಳನ್ನು ಪಡೆದಿರುವ ತಲಾ ಒಬ್ಬರಂತೆ ವಿದ್ಯಾರ್ಥಿಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುವ ಒಟ್ಟು ೨೦ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಗುವುದು ಎಂದು ತಿಳಿಸಿದರು.

ಸಂಘಸಂಸ್ಥೆಗಳು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದರಿಂದ ಮುಂದಿನ ಹಂತದ ಶೈಕ್ಷಣಿಕ ವ್ಯವಸ್ಥೆಯಲ್ಲಿ ಉತ್ತಮ ಫಲಿತಾಂಶ ಹಾಗೂ ಯಶಸ್ಸು ಗಳಿಸಲು ಸಹಕಾರಿಯಾಗಲಿದೆ. ಉಳ್ಳವರು ಶೈಕ್ಷಣಿಕ ವ್ಯವಸ್ಥೆಯ ಉತ್ತಮ ಕಾರ್ಯದಲ್ಲಿ ತೊಡಗಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪೂರ್ವಭಾವಿ ಸಭೆಯಲ್ಲಿ ನಿಕಟಪೂರ್ವ ಅಧ್ಯಕ್ಷ ಶಂಕರ್‌, ಉಪಾಧ್ಯಕ್ಷ ಗೋವಿಂದರಾಜ್, ಕಾರ್ಯದರ್ಶಿಗಳಾದ ಮಂಜುನಾಥ್, ಹರೀಶ್, ಪದಾಧಿಕಾರಿಗಳಾದ ತಮ್ಮಣ್ಣಗೌಡ, ಮಾದಲಗೆರೆ ನಂಜೇಗೌಡ, ಗೋವಿಂದಯ್ಯ, ಹಿಂದ್ಲಟ್ಟಿ ಬೋರೇಗೌಡ, ಪುರುಷೋತ್ತಮ್, ಕುಮಾರ್‌ ಹಾಗೂ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೃಷಿ ವೆಚ್ಚ ಕಡಿಮೆ ಮಾಡಿಕೊಳ್ಳುವ ಕುರಿತ ಜಾಗೃತಿ ಮೂಡಿಸಿ
ರಜೆ ಬಳಿಕ ಶಾಲೆಗೆ ಮರಳಿದ ಮಕ್ಕಳಿಗೆ ಗುಲಾಬಿ ಹೂ ಜೊತೆ ಸಿಹಿ ಸ್ವಾಗತ