ಪ್ರತಿಭಾ ಪುರಸ್ಕಾರದಿಂದ ಸಾಧನೆಗೆ ಉತ್ತೇಜನ: ರವಿಕುಮಾರ್

KannadaprabhaNewsNetwork |  
Published : Sep 21, 2026, 01:30 AM IST
ಪ್ರತಿಭಾ ಪುರಸ್ಕಾರ ನಡೆಯಿತು | Kannada Prabha

ಸಾರಾಂಶ

ಸಮಾಜದ ಪ್ರತಿಭಾವಂತ ಮಕ್ಕಳನ್ನು ಪ್ರೋತ್ಸಾಹಿಸಿದರೆ ಭವಿಷ್ಯದಲ್ಲಿ ಅವರಿಂದ ಇನ್ನಷ್ಟು ಉನ್ನತ ಸಾಧನೆ ನಿರೀಕ್ಷೆ ಮಾಡಲು ಸಾಧ್ಯ ಎಂದು ಪ್ರಾಂತ್ಯ ಆರ್ಯ ಈಡಿಗರ ಸಂಘದ ಅಧ್ಯಕ್ಷ ರವಿಕುಮಾರ್ ಸಿಗಂದೂರು ಹೇಳಿದರು.

ಸಾಗರ: ಸಮಾಜದ ಪ್ರತಿಭಾವಂತ ಮಕ್ಕಳನ್ನು ಪ್ರೋತ್ಸಾಹಿಸಿದರೆ ಭವಿಷ್ಯದಲ್ಲಿ ಅವರಿಂದ ಇನ್ನಷ್ಟು ಉನ್ನತ ಸಾಧನೆ ನಿರೀಕ್ಷೆ ಮಾಡಲು ಸಾಧ್ಯ ಎಂದು ಪ್ರಾಂತ್ಯ ಆರ್ಯ ಈಡಿಗರ ಸಂಘದ ಅಧ್ಯಕ್ಷ ರವಿಕುಮಾರ್ ಸಿಗಂದೂರು ಹೇಳಿದರು.

ಇಲ್ಲಿನ ಈಡಿಗರ ಸಭಾಭವನದಲ್ಲಿ ಭಾನುವಾರ ನಡೆದ ಸಾಗರ ಪ್ರಾಂತ್ಯ ಅರ್ಯ ಈಡಿಗರ ಸಂಘದ ವಾರ್ಷಿಕ ಮಹಾಸಭೆ, ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿಭಾವಂತ ಮಕ್ಕಳನ್ನು ಸನ್ಮಾನಿಸುವುದರಿಂದ ಅದು ಇನ್ನೊಬ್ಬರಿಗೆ ಉತ್ತೇಜನ ನೀಡಿದಂತಾಗುತ್ತದೆ ಎಂದರು.

ನಮ್ಮ ಸಮುದಾಯದಲ್ಲಿ ಹಿಂದೆ ಅಕ್ಷರಸ್ತರ ಸಂಖ್ಯೆ ಕಡಿಮೆ ಇತ್ತು. ಇತ್ತೀಚಿನ ವರ್ಷಗಳಲ್ಲಿ ಸ್ವಯಂ ಪ್ರಯತ್ನದಿಂದ ಸಮುದಾಯ ಬಾಂಧವರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಅವರನ್ನು ಉನ್ನತ ಸ್ಥಾನದಲ್ಲಿ ನೋಡುವ ತಮ್ಮ ಕನಸನ್ನು ನನಸು ಮಾಡಿಕೊಂಡಿದ್ದಾರೆ ಎಂದ ಅವರು, ಸಮಾಜದಲ್ಲಿ ಉನ್ನತ ಸಾಧನೆ ಮಾಡಿದ ಸಾಧಕರು ಇದ್ದಾರೆ. ಸಮುದಾಯದ ಅಭಿವೃದ್ಧಿಗೆ ಅವರು ಕೊಡುಗೆ ನೀಡುವ ಮೂಲಕ ಸಮಷ್ಟಿ ಸಮಾಜದ ಅಭಿವೃದ್ಧಿಗೂ ತಮ್ಮ ಕೊಡುಗೆ ನೀಡಿದ್ದಾರೆ, ಅವರನ್ನು ಸನ್ಮಾನಿಸಲಾಗಿದೆ. ಸಂಘವು ವಿವಿಧ ಕಾರ್ಯಕ್ರಮಗಳ ಮೂಲಕ ಸಮುದಾಯದ ಏಳಿಗೆಗೆ ಶ್ರಮಿಸುತ್ತಿದೆ ಎಂದರು.

ಸಂಘದ ಉಪಾಧ್ಯಕ್ಷ ಕಲಸೆ ಶಿವಪ್ಪ ಮಾತನಾಡಿ, ಸಮುದಾಯದ ಮಕ್ಕಳ ಶೈಕ್ಷಣಿಕ ಪ್ರತಿಭೆ ಗಮನಾರ್ಹವಾಗಿ ಬೆಳೆಯುತ್ತಿದೆ. ಈ ಬಾರಿ ಪಿಯುಸಿ ಮತ್ತು ಎಸ್ಎಸ್ಎಲ್‌ಸಿಯಲ್ಲಿ ಶೇ.೯೫ಕ್ಕಿಂತ ಹೆಚ್ಚು ಅಂಕ ಗಳಿಸಿದ ಸುಮಾರು ೧೦೦ ವಿದ್ಯಾರ್ಥಿಗಳನ್ನು ಗುರುತಿಸಲಾಗಿದ್ದು, ಅವರಲ್ಲಿ ಶೇ.೯೭ಕ್ಕಿಂತ ಹೆಚ್ಚು ಅಂಕ ಗಳಿಸಿದವರನ್ನು ಪುರಸ್ಕರಿಸಲಾಗಿದೆ. ಪ್ರತಿಭಾ ಪುರಸ್ಕಾರಕ್ಕಾಗಿ ದತ್ತಿನಿಧಿ ಸ್ಥಾಪಿಸುವ ಉದ್ದೇಶ ಹೊಂದಿದ್ದು, ಸಮಾಜದವರು ಸಹಕಾರ ನೀಡುವಂತೆ ಮನವಿ ಮಾಡಿದರು.

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ಪರಮೇಶ್ವರ ಟಿ., ಶಿವಪ್ಪ, ಟಿ.ವಿ.ಪಾಂಡುರಂಗ, ತಾರಾಮೂರ್ತಿ, ಕೆ.ಎಂ.ಕರುಣಾಕರ, ಬಿ.ಎಂ.ಮಂಜಪ್ಪ, ಕೆ.ಹೊಳೆಯಪ್ಪ, ಗಿರೀಶ್ ಕೋವಿ, ಮಹಾಬಲ ಕೌತಿ, ವೆಂಕಟೇಶ ಗಲ್ಲಿ, ಅಶೋಕ ಬೇಳೂರು, ಅದರಂತೆ ನಾರಾಯಣಪ್ಪ, ಡಾ.ರಾಜನಂದಿನಿ ಕಾಗೋಡು, ವಿಶ್ವನಾಥ ಕುಗ್ವೆ, ಡಿ.ಗಣಪತಪ್ಪ, ತುಕಾರಾಮ ಶಿರವಾಳ, ಕಿರಣ್ ದೊಡ್ಮನೆ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರ ಆರೋಗ್ಯ ವ್ಯವಸ್ಥೆ ಬಲಪಡಿಸಲಿ: ಡಾ. ಗಂಗಾಧರ್‌
ಜ್ಞಾನವನ್ನು ಸಮಾಜದ ಒಳಿತಿಗೆ ಬಳಸಿ: ಡಾ. ಉಮಾ