ಹೂವಿನಹಡಗಲಿ: ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳ ಅನ್ವೇಷಣೆಗೆ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ ಎಂದು ಶಾಸಕ ಕೃಷ್ಣನಾಯ್ಕ ಹೇಳಿದರು.
ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾಗಿ ಮಕ್ಕಳ ವ್ಯಕ್ತಿತ್ವ ವಿಕಾಸಕ್ಕೆ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದ್ದು, ಶಿಕ್ಷಕರು ಮಕ್ಕಳ ಸೃಜನಶೀಲತೆ ಗುಣ ಗುರುತಿಸಿ ಸೂಕ್ತ ಮಾರ್ಗದರ್ಶನ ನೀಡಿರಿ ಎಂದು ತಿಳಿಸಿದರು.
ಸರ್ಕಾರಿ ಪ್ರಾಥಮಿಕ ಪ್ರೌಢಶಾಲೆಗಳ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳು ಬಡವರ ಮಧ್ಯಮ ವರ್ಗದ ಕುಟುಂಬದವರು. ಅವರ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಕೆಲಸ ನಿರಂತರವಾಗಿ ಆಗಬೇಕು ಎಂದು ಶಿಕ್ಷಕರಿಗೆ ಕಿವಿಮಾತು ಹೇಳಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ವಿ ಪೂಜಾರ ಮಾತನಾಡಿ, ಮಕ್ಕಳ ಪ್ರತಿಭೆ ಅರಳಲು ಇಲಾಖೆ ಪ್ರತಿ ವರ್ಷ ಕಾರ್ಯಕ್ರಮ ಯೋಜಿಸುತ್ತಿದೆ. ಶಿಕ್ಷಕರು ನ್ಯಾಯಬದ್ಧ ತೀರ್ಪು ನೀಡಿರಿ ಎಂದು ತಿಳಿಸಿದರು.
ಕ್ಷೇತ್ರ ಸಮನ್ವಯಾಧಿಕಾರಿ ಎ.ಕೋಟೆಪ್ಪ, ಯುವ ಮುಖಂಡರಾದ ಪುನೀತ್ ದೊಡ್ಡಮನಿ, ಜಗದೀಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಬಿ. ಜಗದೀಶ್, ಕಾರ್ಯದರ್ಶಿ ವಿ.ಎಚ್. ಯೇಸು, ಜಿಲ್ಲಾ ಉಪಾಧ್ಯಕ್ಷೆ ಸಿದ್ದಮ್ಮ ಎ.ಎಸ್., ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಶಿವಲಿಂಗಪ್ಪ, ರಾಜ್ಯ ಸಹ ಕಾರ್ಯದರ್ಶಿ ಗಡ್ಡಿ ಶಿವಕುಮಾರ್, ಸರ್ಕಾರಿ ನೌಕರರ ಸಂಘದ ನಿರ್ದೇಶಕರಾದ ಕೆ.ಮಾದೇಶ್ವರ, ಕೆ.ಜಗದೀಶ್, ಪ್ರಾಚಾರ್ಯ ಕೋರಿ ಹಾಲೇಶ್, ಉಪ ಪ್ರಾಂಶುಪಾಲೆ ಕವಿತಾ ಜಿ., ವಿವಿಧ ಶಿಕ್ಷಕರ ಸಂಘಗಳ ಎಂ.ಶೇಕ್ ಅಹಮದ್, ಎಂ.ಶಿವಪ್ಪ, ಯಂಕಾನಾಯ್ಕ, ಪದಾಧಿಕಾರಿಗಳು ಉಪಸ್ಥಿತರಿದ್ದರು.ಸರ್ಕಾರಿ ಶಾಲೆ, ಅನುದಾನಿತ ಅನುದಾನ ರಹಿತ ಪ್ರಾಥಮಿಕ ಪ್ರೌಢಶಾಲಾ ಶಾಲಾ ಮಕ್ಕಳು, ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಶಿಕ್ಷಣ ಸಂಯೋಜಕರಾದ ಹಣ್ಣಿ ನರೇಶ, ಸಚಿನ್ ಆರಾಧ್ಯ, ಹೊನ್ನಪ್ಪ ನಿರ್ವಹಿಸಿದರು. ಜಿಪಿಜಿ ಪ್ರೌಢಶಾಲೆಯ ವಿದ್ಯಾರ್ಥಿನಿಯರು ನಾಡಗೀತೆ ಹಾಡಿದರು.