- ಕರ್ತಿಕೆರೆ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಪ್ರತಿಭಾ ಕಾರಂಜಿ ಮಕ್ಕಳಿಗೆ ಮನೋಲ್ಲಾಸದ ಜೊತೆಗೆ ಶಿಕ್ಷಣದಲ್ಲಿ ಆಸಕ್ತಿ ಮೂಡಿಸಿ ವಿದ್ಯಾರ್ಥಿಗಳ ಜ್ಞಾನ ವಿಕಸನಕ್ಕೆ ಸಹಕಾರಿಯಾಗುತ್ತದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.ಕುರುವಂಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಪಂ, ತಾಪಂ, ಕರ್ತಿಕೆರೆ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿ ಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ. ಸಮೂಹ ಸಂಪನ್ಮೂಲ ಕೇಂದ್ರದ ಆಶ್ರಯದಲ್ಲಿ ಸೋಮವಾರ ನಡೆದ ಕರ್ತಿಕೆರೆ ಕ್ಲಸ್ಟರ್ ಮಟ್ಟದ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಉದ್ಘಾಟಿಸಿ ಮಾತನಾಡಿದರು. ಸರ್ಕಾರಿ ಶಾಲೆ ಮಕ್ಕಳಿಗೆ ಶಿಕ್ಷಕರು ರಾಮಾಯಣ, ಮಹಾಭಾರತ, ಭಗವದ್ಗೀತೆ, ಬುದ್ಧ, ಬಸವಣ್ಣ ನವರ ವಚನ, ಅಂಬೇಡ್ಕರ್ ರವರ ಸಂವಿಧಾನ, ಕನಕದಾಸರ ಕೀರ್ತನೆ ಮತ್ತು ಅವರ ಜೀವನ ಚರಿತ್ರೆ ಪರಿಚಯಿಸಿದಾಗ ವಿದ್ಯಾರ್ಥಿಗಳು ಸಹ ಮಾರ್ಗ ದರ್ಶನ ಪಡೆದು ಸಮಾಜದ ಸತ್ಪ್ರಜೆಗಳಾಗುತ್ತಾರೆ ಎಂದರು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಒಂದೊಂದು ಪ್ರತಿಭೆಗಳಿದ್ದು ಅಂತಹ ಪ್ರತಿಭೆ ಹೊರತರುವ ಉದ್ದೇಶದಿಂದ ಪ್ರತಿಭಾ ಕಾರಂಜಿ ಆಯೋಜಿಸಲಾಗಿದೆ. ಶಿಕ್ಷಣದಲ್ಲಿ ಮಾತ್ರ ವಲ್ಲದೆ ಪಠ್ಯೇತರ ಚಟುವ ಟಿಕೆಗಳಲ್ಲಿ ಹಲವಾರು ಪ್ರತಿಭೆಗಳಿದ್ದು ಅಂತಹ ಪ್ರತಿಭೆ ಹುಡುಕಿ ವಲಯ, ಕ್ಲಸ್ಟರ್, ತಾಲೂಕು ಮತ್ತು ಜಿಲ್ಲಾ ಮಟ್ಟಕ್ಕೆ ಆಯ್ಕೆ ಮಾಡಿ ನಂತರ ರಾಜ್ಯಮಟ್ಟದಲ್ಲೂ ಗುರುತಿಸಿಕೊಳ್ಳುವ ಅವಕಾಶ ರಾಜ್ಯ ಸರ್ಕಾರ ಮಾಡುತ್ತಿದೆ ಎಂದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ, ಜಿಪಂ ಮಾಜಿ ಸದಸ್ಯ ವೆಂಕಟೇಶ್, ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷೆ ಕುಸುಮ, ಎಂಡಿಎಂ ನಿರ್ದೇಶಕ ನೀಲಕಂಠಪ್ಪ. ಬಿಆರ್‌ಸಿ ನಾಗರಾಜ್, ಗ್ರಾ.ಪಂ ಸದಸ್ಯರಾದ ಮೋಹನ್, ಆಶಾ ಗುರುಸ್ವಾಮಿ, ಪುಟ್ಟಸ್ವಾಮಿಶೆಟ್ರು, ಜಿಲ್ಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಯ್ಯ, ತಾಲೂಕು ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀನಿವಾಸ್, ಸಿ.ಆರ್.ಪಿ ಉಮೇಶ್ ಉಪಸ್ಥಿತರಿದ್ದರು.
24 ಕೆಸಿಕೆಎಂ 1ಕುರುವಂಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆದ ಕರ್ತಿಕೆರೆ ಕ್ಲಸ್ಟರ್ ಮಟ್ಟದ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿಯನ್ನು ಶಾಸಕ ಎಚ್.ಡಿ. ತಮ್ಮಯ್ಯ ಉದ್ಘಾಟಿಸಿದರು.