ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ವೇದಿಕೆ

KannadaprabhaNewsNetwork |  
Published : Sep 13, 2024, 01:38 AM IST
ಸಸಸ | Kannada Prabha

ಸಾರಾಂಶ

ಎಲ್ಲ ಮಕ್ಕಳಲ್ಲಿಯೂ ಪ್ರತಿಭೆ ಇರುತ್ತದೆ. ಅವಕಾಶ ಸಿಕ್ಕಾಗ ವೇದಿಕೆಯಲ್ಲಿ ಪ್ರತಿಭೆಗಳನ್ನು ಹೊರಹಾಕಲು ಪ್ರತಿಭಾಕಾರಂಜಿ ಕಾರ್ಯಕ್ರಮ ಸೂಕ್ತ ವೇದಿಕೆಯಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಚ್.ಹಳಗೇರಿ ಹೇಳಿದರು.

ಕನ್ನಡಪ್ರಭ ವಾರ್ತೆ ಬಾದಾಮಿ

ಎಲ್ಲ ಮಕ್ಕಳಲ್ಲಿಯೂ ಪ್ರತಿಭೆ ಇರುತ್ತದೆ. ಅವಕಾಶ ಸಿಕ್ಕಾಗ ವೇದಿಕೆಯಲ್ಲಿ ಪ್ರತಿಭೆಗಳನ್ನು ಹೊರಹಾಕಲು ಪ್ರತಿಭಾಕಾರಂಜಿ ಕಾರ್ಯಕ್ರಮ ಸೂಕ್ತ ವೇದಿಕೆಯಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಚ್.ಹಳಗೇರಿ ಹೇಳಿದರು.

ಅವರು ಗುರುವಾರ ನಗರದ ಸೃಜನ ಶಾಲೆಯಲ್ಲಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಬಾದಾಮಿ ಸಮೂಹ ಸಂಪನ್ಮೂಲ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬಾದಾಮಿ ಕ್ಲಸ್ಟರ್‌ ಮಟ್ಟದ ಪ್ರತಿಭಾಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕ್ಷೇತ್ರ ಸಮ್ವಯಾಧಿಕಾರಿ ಎಂ.ಬಿ.ದೊಡ್ಡಪ್ಪನ್ನವರ ಮಾತನಾಡಿ, ಯಾವ ಮಗು ಮೇಲಲ್ಲ. ಯಾವ ಮಗೂ ಕೀಳಲ್ಲ. ಎಲ್ಲರೂ ಸಮಾನರು. ಎಲ್ಲರಿಗೂ ಅವಕಾಶ ಸಿಕ್ಕಾಗ ಕಲೆ ಪ್ರದರ್ಶನವಾಗುತ್ತದೆ ಎಂದರು.

ವೇದಿಕೆಯ ಮೇಲೆ ಶಿಕ್ಷಣ ಸಂಯೋಜಕ ವೈ.ಬಿ.ಚಲವಾದಿ, ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಶಿವಪ್ರಕಾಶ ಇಟಗಿ, ಎಂ.ಕೆ.ಬಡಿಗೇರ, ವಿನಾಯಕ ವೈಕುಂಟೆ, ಮುಖ್ಯಶಿಕ್ಷಕ ಬಿ.ಎಸ್.ಕರಡಿ ಸೇರಿದಂತೆ ಕ್ಲಸ್ಟರ್ ವ್ಯಾಪ್ತಿಯ ಮುಖ್ಯಶಿಕ್ಷಕರು, ಸಹಶಿಕ್ಷಕರು, ಶಾಲಾ ಮಕ್ಕಳು ಹಾಜರಿದ್ದರು. ಇದೇ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಚ್.ಹಳಗೇರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿ ಎಂ.ಬಿ.ದೊಡ್ಡಪ್ಪನ್ನವರ ಇವರನ್ನು ಸೃಜನ ಶಾಲೆಯ ಕಾರ್ಯದರ್ಶಿ ಚಂದ್ರು ಕುಂಬಾರ ಸನ್ಮಾನಿಸಿ, ಗೌರವಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ
‘ಆತ್ಮನಿರ್ಭರ ಭಾರತ’ಕ್ಕೆ ಅಮೆಜಾನ್ ಪುಷ್ಟಿ