ಚನ್ನಪಟ್ಟಣ: ವಿದ್ಯಾರ್ಥಿಗಳು ರಾಷ್ಟ್ರದ ಭವಿಷ್ಯವಾಗಿದ್ದು, ಪ್ರತಿಭಾವಂತರೇ ದೇಶದ ನಿಜವಾದ ಸಂಪತ್ತು ಎಂದು ಶುಭೋದಯ ಸಾಂಸ್ಕೃತಿಕ ಬಳಗದ ಅಧ್ಯಕ್ಷ ಎಂ.ಶಿವಮಾದು ಹೇಳಿದರು.
ಬಳಗದ ಪ್ರಧಾನ ಕಾರ್ಯದರ್ಶಿ ರಾಂಪುರ ಮಲ್ಲೇಶ್ ಮಾತನಾಡಿ, ಪ್ರತಿಯೊಂದು ಮಕ್ಕಳಲ್ಲೂ ಒಂದೊಂದು ಪ್ರತಿಭೆ ಇರುತ್ತದೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಪೋಷಕರು ಹಾಗೂ ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ತಿರುವಿನ ಘಟ್ಟ ಎಂದರು.
ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ತಾಲೂಕಿಗೆ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅಭಿನಂದಿಸಲಾಯಿತು.ಶುಭೋದಯ ಸಾಂಸ್ಕೃತಿಕ ಬಳಗದ ಗೌರವಾಧ್ಯಕ್ಷ ಎಪಿಎಂಸಿ ಸಿದ್ದಪ್ಪ, ಉದ್ಯಮಿ ಮಹೇಶ್ವರ್, ರಾಂಪುರ ಮಲವೇಗೌಡ, ಪೂರ್ಣಿಮಾಕಾರಂತ್, ಸಮಾಜ ಸೇವಕ ಆರ್.ಕೆ.ರಾಮಕೃಷ್ಣೇಗೌಡ, ಬಳಗದ ಉಪಾಧ್ಯಕ್ಷ ಪುಟ್ಟಲಿಂಗಯ್ಯ, ಪದಾಧಿಕಾರಿ ಸೋಗಲ ರಾಮು, ಮಾಜಿ ಅಧ್ಯಕ್ಷ ಎಚ್.ಕೆ.ರಾಮಚಂದ್ರು, ಉಪಾಧ್ಯಕ್ಷ ಬಿ.ಪುಟ್ಟಲಿಂಗಯ್ಯ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಖಜಾಂಚಿ ಸಿ.ಎಸ್. ಶ್ರೀಕಂಠಯ್ಯ, ಸಂಘಟನಾ ಕಾರ್ಯದರ್ಶಿ ಶಿಕ್ಷಣ ಸಂಯೋಜಕ ಯೋಗೇಶ್ ಚಕ್ಕೆರೆ, ನಿವೃತ್ತ ಶಿಕ್ಷಕ ರಾಮಣ್ಣ ಇತರರಿದ್ದರು.
ಪೊಟೋ೨೨ಸಿಪಿಟಿ೨: ಪಟ್ಟಣದ ಮಹೇಶ್ವರ ಕನ್ವೆನ್ಷನ್ ಹಾಲ್‌ನಲ್ಲಿ ಶುಭೋದಯ ಸಾಂಸ್ಕೃತಿಕ ಬಳಗದ ಹಮ್ಮಿಕೊಂಡಿದ್ದ ಪ್ರತಿಭಾಪುರಸ್ಕಾರ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.