ಪಾಂಡವಪುರ: ಮಕ್ಕಳಲ್ಲಿರುವ ಪ್ರತಿಭೆ ಹೊರತರಲು ಭೌತ ವಿಜ್ಞಾನಿ ಸಿ.ವಿ.ರಾಮನ್ ರ ವಿಶಿಷ್ಟ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಬಿಜಿಎಸ್ ಹೇಮಗಿರಿ ಶಾಖಾಮಠದ ಕಾರ್‍ಯದರ್ಶಿ ಡಾ.ಜೆ.ಎನ್.ರಾಮಕೃಷ್ಣೇಗೌಡ ಹೇಳಿದರು.
ಶಾಲೆಯಲ್ಲಿ ಎಲ್‌ಕೆಜಿಯಿಂದ ಪಿಯುಸಿಯವರೆಗೂ ಮಕ್ಕಳು ವಿಜ್ಞಾನದ ವಿವಿಧ ಮಾದರಿಗಳನ್ನು ಪ್ರದರ್ಶಿಸಿದ್ದಾರೆ. ಮಕ್ಕಳ ಈ ಪ್ರತಿಭೆಯಿಂದ ದೇಶಕ್ಕೆ ಅನುಕೂಲವಾಗುವ ಹೊಸ ಹೊಸ ಆವಿಷ್ಕಾರಗಳು ಮೂಡಿಬರಲಿವೆ ಎನ್ನುವ ವಿಶ್ವಾಸ ಮೂಡುತ್ತದೆ ಎಂದು ತಿಳಿಸಿದರು.
ಶಾಲೆ ಹಾಗೂ ಮನೆಗಳಲ್ಲಿ ಶಿಕ್ಷಕರು, ಪೋಷಕರು ಮಕ್ಕಳಿಗೆ ವಿಜ್ಞಾನದ ಅವಿಷ್ಕಾರಗಳ ಬಗ್ಗೆ ಹೆಚ್ಚಿನ ಆಸಕ್ತಿ ಬೆಳೆಯುವಂತೆ ಕ್ರಮ ವಹಿಸಬೇಕು ಎಂದು ಸಲಹೆ ನೀಡಿದರು.ಶಾಲೆಯ ಎಲ್‌ಕೆಜಿಯಿಂದ ಪಿಯುಸಿವರೆಗಿನ ವಿದ್ಯಾರ್ಥಿಗಳು ವಿವಿಧ ಬಗೆಯ ವಿಜ್ಞಾನದ ಮಾದರಿಗಳನ್ನು ಪ್ರದರ್ಶಿಸುವ ಮೂಲಕ ಗಮನ ಸೆಳೆದರು. ಸಮಾರಂಭದಲ್ಲಿ ಮುಖ್ಯಶಿಕ್ಷಕ ರಘು, ಗೃಹ ನಿರ್ಮಾಣ ಮಂಡಳಿ ನಿರ್ದೇಶಕ ಬಿ.ಎಸ್.ಜಯರಾಮು, ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಿ.ಆರ್.ರಮೇಶ್, ಎಸ್.ರಾಜು, ಕುಮಾರಸ್ವಾಮಿ, ನಾಗಸುಂದರ್, ಚನ್ನಮಾದೇಗೌಡ, ವಿಶ್ವನಾಥ್, ರವಿಕುಮಾರ್ ಸೇರಿ ಶಿಕ್ಷಕರು, ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.