ತನ್ನ ವೈಫಲ್ಯ ಮುಚ್ಚಿಕೊಳ್ಳಲು ಆರ್.ಎಸ್.ಎಸ್ ನಿಷೇಧದ ಬಗ್ಗೆ ಮಾತು: ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಕಿಡಿ

KannadaprabhaNewsNetwork |  
Published : Oct 17, 2025, 01:00 AM IST
ಚಿತ್ರ ೧  ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ | Kannada Prabha

ಸಾರಾಂಶ

‘ಪಾಕಿಸ್ತಾನ್ ಜಿಂದಾಬಾದ್’ ಎಂದು ಕೂಗುವವರ ಮೇಲೆ ಈವರೆಗೂ ಯಾವ ಕ್ರಮಗಳನ್ನೂ ಜರುಗಿಸಲಿಲ್ಲ, ರಾಷ್ಟ್ರದ್ರೋಹಿ ಚಟುವಟಿಕೆಗಳಲ್ಲಿ ತೊಡಗಿರುವ ಪಿಎಫ್ಐ, ಕೆಡಿಎಫ್ ಹಾಗೂ ಎಸ್ ಡಿ ಪಿ ಐ ನಂತಹ ದೇಶವಿರೋಧಿ ಸಂಘಟನೆಗಳನ್ನು ನಿಷೇಧಿಸುವ ಮಾತಿರಲಿ, ಅವರ ಚಟುವಟಿಕೆಗಳ ಮೇಲೆ ಕನಿಷ್ಠ ನಿಯಂತ್ರಣ ಸಾಧಿಸುವ ಯಾವುದೇ ನಿರ್ಧಾರವನ್ನು ಕೈಗೊಳ್ಳಲಿಲ್ಲ.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿಷಯವನ್ನು ಮುಂದಿಟ್ಟುಕೊಂಡು ಜನರ ದಿಕ್ಕು ತಪ್ಪಿಸುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಹೇಳಿದರು.

ಈ ಕುರಿತು ಕನ್ನಡಪ್ರಭದೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೇಲೆ ನಿಯಂತ್ರಣ ಹೇರಿದಷ್ಟೂ ಅದು ತನ್ನ ಸಂಘಟನೆಯ ಮಹಾ ವೃಕ್ಷವನ್ನು ವಿಸ್ತರಿಸುತ್ತಲೇ ಮುಗಿಲೆತ್ತರಕ್ಕೆ ಬೆಳೆಯುತ್ತದೆ. ರಾಷ್ಟ್ರಕಟ್ಟುವ ಕಾರ್ಯದಲ್ಲಿ ಎಂದಿನಂತೆ ಮುನ್ನಡೆಯಲಿದೆ ಎಂದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳನ್ನು ಗುರಿಯಾಗಿಸಿಕೊಂಡು ನಿರೀಕ್ಷೆಯಂತೆಯೇ ರಾಜ್ಯದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಆರ್.ಎಸ್.ಎಸ್ ಚಟುವಟಿಕೆಗಳನ್ನು ನಿಯಂತ್ರಿಸುವುದೇ ತನ್ನ ಆದ್ಯತೆ ಎಂಬಂತೆ ಖಾಸಗಿ ಸಂಘ ಸಂಸ್ಥೆಗಳು ಹಾಗೂ ಸಂಘಟನೆಗಳು ಸಾರ್ವಜನಿಕ ಸ್ಥಳಗಳಲ್ಲಿ ನಡೆಸುವ ಚಟುವಟಿಕೆಗಳನ್ನು ಆಯೋಜಿಸಲು ಅನುಮತಿ ಕಡ್ಡಾಯಗೊಳಿಸುವ ನಿರ್ಧಾರವನ್ನು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಕೂಗುವವರ ಮೇಲೆ ಈವರೆಗೂ ಯಾವ ಕ್ರಮಗಳನ್ನೂ ಜರುಗಿಸಲಿಲ್ಲ, ರಾಷ್ಟ್ರದ್ರೋಹಿ ಚಟುವಟಿಕೆಗಳಲ್ಲಿ ತೊಡಗಿರುವ ಪಿಎಫ್ಐ, ಕೆಡಿಎಫ್ ಹಾಗೂ ಎಸ್ ಡಿ ಪಿ ಐ ನಂತಹ ದೇಶವಿರೋಧಿ ಸಂಘಟನೆಗಳನ್ನು ನಿಷೇಧಿಸುವ ಮಾತಿರಲಿ, ಅವರ ಚಟುವಟಿಕೆಗಳ ಮೇಲೆ ಕನಿಷ್ಠ ನಿಯಂತ್ರಣ ಸಾಧಿಸುವ ಯಾವುದೇ ನಿರ್ಧಾರವನ್ನು ಕೈಗೊಳ್ಳಲಿಲ್ಲ ಎಂದರು.

ಸ್ವಾತಂತ್ರ್ಯಾ ನಂತರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಮರ್ಪಣಾಪೂರ್ವಕ ಸೇವೆ ಹಾಗೂ ರಾಷ್ಟ್ರಭಕ್ತಿ ಮೂಡಿಸುವ ಚಟುವಟಿಕೆಗಳು ನಿರಂತರವಾಗಿ ಸಾಗುತ್ತಾ ಬಂದಿವೆ, ಇದನ್ನು ಹತ್ತಿಕ್ಕಲು ಅಂದಿನಿಂದಲೂ ಇಂತಹ ಹಲವು ಪ್ರಯತ್ನಗಳು ನಡೆಯುತ್ತಲೇ ಇವೆ. ಆದರೆ ಇದ್ಯಾವುದನ್ನೂ ಲೆಕ್ಕಿಸದ ಈ ದೇಶದ ಕೋಟ್ಯಂತರ ಜನರ ಬೆಂಬಲ ಹಾಗೂ ಆಶೀರ್ವಾದ ಪಡೆದಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ ತಪಸ್ವೀ ಕಾರ್ಯಶೀಲತೆಯಿಂದ ತನ್ನ ಸಂಘಟನಾ ಸಾಮರ್ಥ್ಯವನ್ನು ವೃದ್ಧಿಸಿಕೊಂಡು, ಬರುವ ಅಡೆ-ತಡೆಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸಿ, ಬೃಹದಾಕಾರವಾಗಿ ಬೆಳೆಯುತ್ತಲೇ ಇದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಲಮರದ ತಿಮ್ಮಕ್ಕ ಹೆಸರಲ್ಲಿ ಪ್ರತಿ ವರ್ಷ ಪ್ರಶಸ್ತಿ ಪ್ರದಾನ : ಸಿಎಂ ಸಿದ್ದರಾಮಯ್ಯ
ಸಿಎಂ ರೇಸಲ್ಲಿ ಡಿಕೆ ಒಬ್ಬರೇ ಇಲ್ಲ : ರಾಜಣ್ಣ