ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ತಾಲೂಕು ಆಡಳಿತ ನಿರ್ಧಾರ

KannadaprabhaNewsNetwork |  
Published : Jan 17, 2025, 12:47 AM IST
16ಕೆೆೆೆೆಕೆಿಯು3. | Kannada Prabha

ಸಾರಾಂಶ

ಕಡೂರು 76ನೇ ಗಣರಾಜ್ಯೋತ್ಸವವನ್ನು ಅದ್ಧೂರಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ತಾಲೂಕು ಆಡಳಿತದಿಂದ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.

ತಾಪಂ ಸಭಾಂಗಣದಲ್ಲಿ ಗ್ರೇಡ್ 2 ತಹಸೀಲ್ದಾರ್ ಮಂಜುನಾಥ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಕನ್ನಡಪ್ರಭ ವಾರ್ತೆ, ಕಡೂರು

76ನೇ ಗಣರಾಜ್ಯೋತ್ಸವವನ್ನು ಅದ್ಧೂರಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ತಾಲೂಕು ಆಡಳಿತದಿಂದ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.

ಗುರುವಾರ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ರೇಡ್ 2 ತಹಸೀಲ್ದಾರ್ ಮಂಜುನಾಥ್ ಅಧ್ಯಕ್ಷತೆಯಲ್ಲಿ ನಡೆದ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಸಭೆಯಲ್ಲಿ ತಾಪಂ ಕಾರ್ಯ ನಿರ್ವಹಣಾಧಿಕಾರಿ ಸಿ.ಆರ್. ಪ್ರವೀಣ್ ಅಧಿಕಾರಿಗಳಿಗೆ ಸೂಚನೆ ನೀಡಿ ಶಾಸಕ ಕೆ.ಎಸ್. ಆನಂದ್ ಅವರ ಸಲಹೆ, ಮಾರ್ಗದರ್ಶನದ ಮೇರೆಗೆ ಈ ಭಾರಿ ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ 76 ನೇ ಗಣರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಲು ನಿರ್ಧರಿಸಲಾಗಿದೆ.

ಜ. 26ರ ಬೆಳಿಗ್ಗೆ ಗಣಪತಿ ಪೆಂಡಾಲ್ ನಿಂದ ಸ್ಥಬ್ದ ಚಿತ್ರಗಳು, ಡೊಳ್ಳು, ವೀರಗಾಸೆ, ಕಲಾ ತಂಡಗಳೊಂದಿಗೆ ಜನ ಪ್ರತಿನಿಧಿಗಳು, ಅಧಿಕಾರಿಗಳು, ಪೊಲೀಸರು, ಶಾಲಾ ಮಕ್ಕಳೊಂದಿಗೆ ಮೆರವಣಿಗೆ ಮೂಲಕ ತಾಲೂಕು ಕ್ರೀಡಾಂಗಣದ ವೇದಿಕೆಗೆ ಕರೆತರಲಾಗುವುದು ಕಡ್ಡಾಯವಾಗಿ ಎಲ್ಲ ಅಧಿಕಾರಿಗಳು, ನೌಕರರು, ಶಾಲಾ ಮಕ್ಕಳು ಭಾಗವಹಿಸಬೇಕು ಎಂದು ಸೂಚಿಸಲಾಯಿತು.

ತಾಲೂಕು ಕಚೇರಿ, ತಾಪಂ ಸೇರಿ ವಿವಿಧ ಇಲಾಖೆ ಕಟ್ಟಡಗಳು, ಶಿವಮೊಗ್ಗ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಾಗುವ ಪಟ್ಟಣದ ರಸ್ತೆಗಳ ಎರಡೂ ಬದಿ ವಿದ್ಯುತ್ ದೀಪದ ಅಲಂಕಾರ ಮಾಡಲು ಕ್ರಮ ಕೈಗೊಳ್ಳಬೇಕು. ವಿಶೇಷವಾಗಿ ನಡೆಯುವ ಗಣರಾಜ್ಯೋತ್ಸವದಲ್ಲಿ ಆಯಾ ಇಲಾಖೆಗಳ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿ ನಿರ್ವಹಿಸಿ ಬೆಳಿಗ್ಗೆ ಮತ್ತು ಸಂಜೆ ನಡೆವ ರಾಷ್ಟ್ರೀಯ ಹಬ್ಬದ ಆಚರಣೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.

ಅಲ್ಲದೆ ಮಕ್ಕಳಲ್ಲಿ ದೇಶ ಪ್ರೇಮ ಬೆಳೆಸುವ ನಿಟ್ಟಲ್ಲಿ ವೇದಿಕೆಯಲ್ಲಿ ವಿವಿಧ ಶಾಲೆಗಳ ಪ್ರತಿಭಾನ್ವಿತ ಮಕ್ಕಳಿಗೆ ಭಾಷಣಕ್ಕಾಗಿ ಅವಕಾಶ ನೀಡಲಾಗುವುದು. ಸಾಂಸ್ಕೃತಿಕ ಚಟುವಟಿಕೆಗಳ ಸಿದ್ಧತೆಗಾಗಿ ಶಿಕ್ಷಣ ಇಲಾಖೆ ಅಧಿಕಾರಿ ನಾಗರಾಜ್ ಇತರ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು. ಕ್ರೀಡಾಂಗಣಕ್ಕೆ ಬರುವ ಮಕ್ಕಳಿಗೆ ತೊಂದರೆ ಆಗದಂತೆ ಪುರಸಭೆಯಿಂದ ನಾಲ್ಕಾರು ಕಡೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಮಕ್ಕಳ ಪೋಷಕರು ಬಂದು ಕೂರಲು ವ್ಯವಸ್ಥೆ. ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳು ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುವಂತೆ ತಿಳಿಸಬೇಕು ಎಂದು ಪ್ರವೀಣ್ ಸೂಚನೆ ನೀಡಿದರು.

ವಿವಿಧ ಇಲಾಖೆ ಅಧಿಕಾರಿಗಳಾದ ಡಾ. ಉಮೇಶ್, ಡಾ. ರವಿಕುಮಾರ್, ನಾಗರತ್ನ, ರವಿಕುಮಾರ್, ಶಾಸಕರ ಆಪ್ತ ಕಾರ್ಯದರ್ಶಿ ಮಂಜುನಾಥ್, ಲಿಂಗರಾಜ್, ರೊ.ರಾಘವೇಂದ್ರ ಮತ್ತಿತರರು ಹಾಜರಿದ್ದರು.

16ಕೆಕೆಡಿಯ3. ಕಡೂರು ಪಟ್ಟಣ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ರೇಡ್ 2 ತಹಸೀಲ್ದಾರ್ ಮಂಜುನಾಥ್ ಅಧ್ಯಕ್ಷತೆಯಲ್ಲಿ ಗಣರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆ ನಡೆಯಿತು. ತಾಪಂ ಇಒ ಸಿ.ಆರ್. ಪ್ರವೀಣ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

500 ನಾಯಿಗಳಿಗೆ ಚಿಕನ್‌ ರೈಸ್ ನೀಡಲು ವರ್ಷಕ್ಕೆ 1.83 ಕೋಟಿ
ಯಲಹಂಕದಲ್ಲಿ ‘ಚೀನಾದ ಹ್ಯಾಂಗ್‌ಝೌ’ ಮಾದರಿ ರೈಲು ನಿಲ್ದಾಣ