ಪ್ರವಾಹ ಎದುರಿಸಲು ತಾಲೂಕು ಆಡಳಿತ ಸನ್ನದ್ಧ

KannadaprabhaNewsNetwork |  
Published : Jul 22, 2024, 01:25 AM IST
 ಕೊಡೇಕಲ್ ಸಮೀಪದ ಬಸವಸಾಗರ ಜಲಾಶಯಕ್ಕೆ ಶನಿವಾರ ಹುಣಸಗಿ ತಹಸೀಲ್ದಾರ್ ಬಸಲಿಂಗಪ್ಪ ನೈಕೋಡಿ ಭೇಟಿ ನೀಡಿ ಜಲಾಶಯದ ಒಳಹರಿವು ಹಾಗೂ ಹೊರಹರಿವು ಕುರಿತು ಮಾಹಿತಿ ಪಡೆದುಕೊಂಡರು. | Kannada Prabha

ಸಾರಾಂಶ

ಕೊಡೇಕಲ್ ಸಮೀಪದ ಬಸವಸಾಗರ ಜಲಾಶಯಕ್ಕೆ ಶನಿವಾರ ಹುಣಸಗಿ ತಹಸೀಲ್ದಾರ್ ಬಸಲಿಂಗಪ್ಪ ನೈಕೋಡಿ ಭೇಟಿ ನೀಡಿ ಜಲಾಶಯದ ಒಳಹರಿವು ಹಾಗೂ ಹೊರಹರಿವು ಕುರಿತು ಮಾಹಿತಿ ಪಡೆದುಕೊಂಡರು.

ಕನ್ನಡಪ್ರಭ ವಾರ್ತೆ ಕೊಡೇಕಲ್

ಸಮೀಪದ ಬಸವಸಾಗರ ಜಲಾಶಯ ಭರ್ತಿಯಾಗಿದ್ದು, ಶನಿವಾರ ಹುಣಸಗಿ ತಹಸೀಲ್ದಾರ್ ಬಸಲಿಂಗಪ್ಪ ನೈಕೋಡಿ ಭೇಟಿ ನೀಡಿ ಪರಿಶೀಲಿಸಿದರು.

ಜಲಾಶಯದಿಂದ ಕಳೆದ ನಾಲ್ಕು ದಿನಗಳಿಂದ ನದಿಗೆ ನೀರು ಬಿಡುತ್ತಿದ್ದು, ಈ ನಿಟ್ಟಿನಲ್ಲಿ ತಾಲೂಕಿನ ಕೆಲವೆಡೆ ಪ್ರವಾಹ ಉಂಟಾಗುವ ಸಾಧ್ಯತೆಗಳಿರುವುದರಿಂದ ಜಲಾಶಯದ ಅಧಿಕಾರಿಗಳೊಡನೆ ಈ ಕುರಿತು ಸಮಾಲೋಚಿಸಿದರು.

ಈ ವೇಳೆ ಮಾತನಾಡಿದ ಅವರು, ಜಲಾಶಯದಿಂದ ಯಾವುದೇ ಸಂದರ್ಭದಲ್ಲಿ ನೀರನ್ನು ನದಿಪಾತ್ರಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಬಿಟ್ಟಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸಲು ತಾಲೂಕಾಡಳಿತ ಸಿದ್ಧಗೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ನದಿ ತೀರದ ಹಲವು ಗ್ರಾಮಗಳಲ್ಲಿ ಡಂಗೂರ ಸಾರುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗಿದೆ ಎಂದರು.

ಈ ವೇಳೆ ಕೊಡೇಕಲ್ ಉಪತಹಸೀಲ್ದಾರ್ ಕಲ್ಲಪ್ಪ ಜಂಜಿಗಡ್ಡಿ, ವೆಂಕಟೇಶ, ಗ್ರಾಮ ಆಡಳಿತಾಧಿಕಾರಿಯಾದ ಅಪ್ಪಣ್ಣ ಗುಡಿಮನಿ ಸೇರಿದಂತೆ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!