ಕನ್ನಡಪ್ರಭ ವಾರ್ತೆ ಶನಿವಾರಸಂತೆ
ಅವರು ಶನಿವಾರಸಂತೆ ಭಾರತಿ ಪ್ರಥಮ ದರ್ಜೆ ಕಾಲೇಜು ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ನೆಹರು ಯುವ ಕೇಂದ್ರ ವತಿಯಿಂದ ಭಾರತಿ ವಿದ್ಯಾಸಂಸ್ಥೆ ಆಟದ ಮೈದಾನದಲ್ಲಿ ಹಮ್ಮಿಕೊಂಡಿದ್ದ ಪದವಿ ಪೂರ್ವ ವಿದ್ಯಾರ್ಥಿಗಳ ತಾಲೂಕು ಮಟ್ಟದ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳು ಸದಾ ಪಠ್ಯ ಚಟುವಟಿಕೆಯ ಒತ್ತಡದಲ್ಲಿರುತ್ತಾರೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಕ್ರೀಡೆ ಮುಂತಾದ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ವೃದ್ದಿಸಿಕೊಳ್ಳುವಂತೆ ಸಲಹೆ ನೀಡಿದರು.ರಾಷ್ಟ್ರೀಯ ಸೇವಾ ಯೋಜನೆ ಘಟಕದ ಯೋಜನಾಧಿಕಾರಿ ಎಂ.ಎನ್.ಹರೀಶ್ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯ ಸಮಿಪಿಸುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಓದಿಗೆ ಸಮಸ್ಯೆಯಾಗದಂತೆ ಒಂದು ದಿನದ ಕ್ರೀಡಾಕೂಟವನ್ನು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಹಮ್ಮಿಕೊಂಡಿದ್ದ ಕ್ರೀಡೆ:- ಬಾಲಕರಿಗೆ ವಾಲಿಬಾಲ್, ಬಾಲಕಿಯರಿಗೆ ಹಗ್ಗ ಜಗ್ಗಾಟ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ವೈಯುಕ್ತಿಕ ಕ್ರೀಡೆಯಲ್ಲಿ ಬಾಲಕರಿಗೆ ಷಟಲ್ ಕಾಕ್ ಮತ್ತು ನಿಂಬೆಹಣ್ಣು ಚಮಚ ನಡಿಗೆ ಸ್ಪರ್ಧೆ ಹಾಗೂ ಬಾಲಕಿಯರಿಗೆ 100 ಮೀಟರ್ ಓಟ ಮತ್ತು ಸ್ಲೋ ಸೈಕ್ಲಿಂಗ್ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು.