ಕನ್ನಪ್ರಭ ವಾರ್ತೆ ಚಾಮರಾಜನಗರ
ಕ್ರೀಡಾಕೂಟವನ್ನು ಉದ್ಘಾಟಿಸಬೇಕಾಗಿದ್ದ ಶಾಸಕ ಸಿ.ಪುಟ್ಟರಂಗಶೆಟ್ಟಿ, ನಗರಸಭೆ ಸದ್ಯಸರಾದ ಸಿ.ಜಿ. ಚಂದ್ರಶೇಖರ್, ತಹಸೀಲ್ದಾರ್ ಬಸವರಾಜು, ತಾ.ಪಂ ಇಒ ಪೂರ್ಣಿಮ, ಕ್ಷೇತ್ರ ಶಿಕ್ಷಣಾಧಿಕಾರಿ ಡಿ. ಸೋಮಣ್ಣೇಗೌಡ ಗೈರಾಗಿದ್ದರು. ಪ್ರಚಾರವಿದ್ದರೂ ಬೆರಳಿಣಿಕೆಯಷ್ಟು ಕ್ರೀಡಾಪಟುಗಳು ಮಾತ್ರ ಭಾಗವಹಿಸಿದ್ದರು.
ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿ ಸಮಿತಿ ಸದಸ್ಯ ವಿ ಶ್ರೀನಿವಾಸ್ ಪ್ರಸಾದ್ ಗುಂಡು ಎಸೆಯುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು, ಬಳಿಕ ಅವರು ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಕೋಟ್ಯಾಂತರ ರು. ಅನುದಾನವನ್ನು ನೀಡುತ್ತವೆ, ಕ್ರೀಡಾಪಟುಗಳು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.ಕ್ರೀಡೆ ಎಂದರೆ ಶಿಸ್ತು, ಸಂಯಮ, ಏಕಾಗ್ರತೆ ಇವುಗಳನ್ನು ಮೈಗೂಡಿಸಿಕೊಂಡು ಕಠಿಣ ಅಭ್ಯಾಸ ಮಾಡಿದರೆ ಕ್ರೀಡೆಯಲ್ಲಿ ಯಶಸ್ಸು ಸಿಗುತ್ತದೆ, ಸ್ಪರ್ಧೆಯಲಿ ಸೋಲು ಗೆಲುವು ಮುಖ್ಯವಲ್ಲ ಸ್ಪರ್ಧೆ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದರು.
ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಬಸವರಾಜು ಸಮಾರಂಭ ಉದ್ಘಾಟಿಸಿ ಮಾತನಾಡಿ, ಸರ್ಧೆಯಲ್ಲಿ ಭಾಗವಹಿಸುವ ಅಭಿರುಚಿ ಬೆಳೆಸಿಕೊಳ್ಳಬೇಕು ಎಂದರು. ಗ್ರಾಮೀಣ ಕ್ರೀಡಾಪಟುಗಳುನಿರೀಕ್ಷಿತ ಮಟ್ಟದಲ್ಲಿ ಭಾಗವಹಿಸಿಲ್ಲ, ಜಿಲ್ಲಾ ಕ್ರೀಡಾಂಗಣದಲ್ಲಿ ಮೂಲಭೂತ ಸೌಕರ್ಯಕ್ಕೆ ಚುನಾಯಿತ ಪ್ರತಿನಿಧಿಗಳು ಗಮನಹರಿಸಬೇಕು ಎಂದು ಮನವಿ ಮಾಡಿದರು.