ಇಂದು, ನಾಳೆ ತಾಲೂಕು ಮಟ್ಟದ ಪಪೂ ಕಾಲೇಜುಗಳ ಕ್ರೀಡಾಕೂಟ

KannadaprabhaNewsNetwork |  
Published : Sep 17, 2026, 02:30 AM IST
ಮುಂಡರಗಿಯ ಜಗದ್ಗುರು ಅನ್ನದಾನೀಶ್ವರ ಕಾಲೇಜು ಮೈದಾನದಲ್ಲಿ ಜರುಗಲಿರುವ ತಾಲೂಕಾ ಮಟ್ಟದ ಪಪೂ ಕಾಲೇಜುಗಳ ಕ್ರೀಡಾಕೂಟದ ಆಮಂತ್ರಣ ಪತ್ರಿಕೆಯನ್ನು ಕಾಲೇಜು ಮೇಲ್ವಿಚಾರಣಾ ಕಮಿಟಿ ಅಧ್ಯಕ್ಷ ಕರಬಸಪ್ಪ ಹಂಚಿನಾಳ ಬಿಡುಗಡೆಗೊಳಿಸಿದರು. | Kannada Prabha

ಸಾರಾಂಶ

ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಸೆ. 17 ಮತ್ತು 18ರಂದು ಮುಂಡರಗಿ ಜಗದ್ಗುರು ಅನ್ನದಾನೀಶ್ವರ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ.

ಕನ್ನಡಪ್ರಭ ವಾರ್ತೆ ಮುಂಡರಗಿ

ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಸೆ. 17 ಮತ್ತು 18ರಂದು ಮುಂಡರಗಿ ಜಗದ್ಗುರು ಅನ್ನದಾನೀಶ್ವರ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಪ್ರಾಚಾರ್ಯ ಪಿ.ಎಂ.ಕಲ್ಲನಗೌಡರ ತಿಳಿಸಿದರು.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಸೆ.17 ಮೊದಲ ದಿನ ಒಟ್ಟು 21 ಗುಂಪು ಆಟಗಳು ನಡೆಯಲಿದ್ದು, ಸುಮಾರು 700 ಬಾಲಕರು ಹಾಗೂ 600 ಬಾಲಕಿಯರು ಭಾಗವಹಿಸಲಿದ್ದಾರೆ. ಸೆ.18 ಎರಡನೇ ದಿನ 21 ವೈಯಕ್ತಿಕ ಕ್ರೀಡಾ ಸ್ಪರ್ಧೆಗಳು ನಡೆಯಲಿದ್ದು, 300 ಬಾಲಕರು ಹಾಗೂ 250 ಬಾಲಕಿಯರು ಭಾಗವಹಿಸಲಿದ್ದಾರೆ. ತಾಲೂಕಿನ ಕಾಲೇಜುಗಳಿಂದ ಒಟ್ಟು 1,800ಕ್ಕೂ ಹೆಚ್ಚು ಕ್ರೀಡಾಪಟುಗಳು ಉತ್ಸಾಹದಿಂದ ಭಾಗವಹಿಸುವ ನಿರೀಕ್ಷೆಯಿದೆ ಎಂದರು.

ಕಾಲೇಜು ಮೇಲ್ವಿಚಾರಣಾ ಕಮೀಟಿ ಅಧ್ಯಕ್ಷ ಕರಬಸಪ್ಪ ಹಂಚಿನಾಳ ಮಾತನಾಡಿ, ಸೆ.17 ರಂದು ಬೆಳಗ್ಗೆ 9.30ಕ್ಕೆ ಉದ್ಘಾಟನೆ ಜರುಗಲಿದ್ದು, ಜ.ನಾಡೋಜ ಡಾ.ಅನ್ನದಾನೀಶ್ವರ ಮಹಾಶಿವಯೋಗಿಗಳವರು ಸಾನಿಧ್ಯ ವಹಿಸಲಿದ್ದಾರೆ. ಉತ್ತರಾಧಿಕಾರಿ ಡಾ.ಮಲ್ಲಿಕಾರ್ಜುನ ಸ್ವಾಮಿಜಿ ನೇತೃತ್ವ ವಹಿಸಲಿದ್ದಾರೆ. ವಿಧಾನಪರಿಷತ್ ಸಭಾಪತಿ ಸಲೀಂ ಅಹ್ಮದ, ವಿಧಾನಸಭಾಧ್ಯಕ್ಷ ಜಿ.ಎಸ್. ಪಾಟೀಲ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಘನ ಉಪಸ್ಥಿತಿ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಉದ್ಘಾಟನೆ ಮಾಡಲಿದ್ದಾರೆ. ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ವಿವರಿಸಿದರು. ಸುದ್ದಿಗೋಷ್ಠಿಯಲ್ಲಿ ಪ್ರಾ. ವಿ.ಎಂ. ಪಾಟೀಲ, ಆಡಳಿತಾಧಿಕಾರಿ ಡಾ. ಬಿ.ಜಿ. ಜವಳಿ, ಎಸ್.ಬಿ. ಹಿರೇಮಠ, ಆರ್.ಆರ್. ಇನಾಮದಾರ, ಅಂಗಡಿ ಸೇರಿದಂತೆ ಅನೇಕರಿದ್ದರು.ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಆರಂಭ

2026-27ನೇ ಸಾಲಿನ ಗದಗ ಜಿಲ್ಲೆಯ ವಿವಿಧ ತಾಲೂಕು ಹಾಗೂ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಆಸಕ್ತ ಪುರುಷ ಹಾಗೂ ಮಹಿಳಾ ಕ್ರೀಡಾಪಟುಗಳು ಕಡ್ಡಾಯವಾಗಿ https://dasaracmcup.in ಲಿಂಕ್ ಮುಖಾಂತರ ಕೀ ಕೋಡ್ ಬಳಸಿ ಹೆಸರನ್ನು ನೋಂದಾಯಿಸಿ ಭಾಗವಹಿಸುವುದು ಕಡ್ಡಾಯವಾಗಿದೆ.ಗಜೇಂದ್ರಗಡ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ.17 ಮತ್ತು ಸೆ.18 ರಂದು ಎಸ್.ಎ.ವಿ ಪ್ರೌಢಶಾಲೆ ಆವರಣ ನರೇಗಲ್‌ದಲ್ಲಿ, ಗದಗ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ.18 ಮತ್ತು ಸೆ.19 ರಂದು ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣ ಗದಗ, ನರಗುಂದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ.18 ಮತ್ತು ಸೆ.19 ರಂದು ತಾಲೂಕು ಕ್ರೀಡಾಂಗಣ ನರಗುಂದದಲ್ಲಿ, ಮುಂಡರಗಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ.19 ಮತ್ತು ಸೆ.20 ರಂದು ಅನ್ನದಾನೇಶ್ವರ ತಾಲೂಕು ಕ್ರೀಡಾಂಗಣ ಮುಂಡರಗಿಯಲ್ಲಿ, ರೋಣ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ.18 ಮತ್ತು ಸೆ.19 ರಂದು ದ್ರೋಣಾಚಾರ್ಯ ತಾಲೂಕು ಕ್ರೀಡಾಂಗಣ ರೋಣದಲ್ಲಿ ಹಾಗೂ ಲಕ್ಷ್ಮೇಶ್ವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ.19 ಮತ್ತು ಸೆ.20 ರಂದು ಎಸ್.ಜೆ.ಎಫ್.ಸಿ ಪ್ರೌಢಶಾಲೆ ಯಳವತ್ತಿಯಲ್ಲಿ ಸಂಘಟಿಸಲಾಗುವುದು. ಎಲ್ಲಾ ಕ್ರೀಡಾಪಟುಗಳು ಬೆಳಗ್ಗೆ 9ಕ್ಕೆ ಸ್ಥಳದಲ್ಲಿ ಹಾಜರಿರಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಶರಣು ಗೋಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೋಲ್ಡ್ ಕ್ಲೇ ಮೂಲಕ ೧೦೦೮ ಗಣಪತಿ ಪ್ರತಿಮೆ ರಚನೆ: ಪ್ರವೀಣ್‌ ದಾಖಲೆ
ನಿಟ್ಟೆ ಜವಳಿ ಪಾರ್ಕ್ ಕಾಮಗಾರಿ ಕೂಡಲೇ ಆರಂಭಿಸಿ: ನೇಮಿರಾಜ ರೈ