ತಂಗಡಗಿ ಹೇಳಿಕೆ: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ಪ್ರತಿಭಟನೆ, ಬಂಧನ

KannadaprabhaNewsNetwork |  
Published : Mar 27, 2024, 01:07 AM IST
ಮೋದಿ ಎನ್ನುವವರಿಗೆ ಕಪಾಳಕ್ಕೆ ಹೊಡೆಯಿರಿ ಎಂದು ಸಚಿವ ಶಿವರಾಜ್‌ ತಂಗಡಗಿ ನೀಡಿರುವ ಹೇಳಿಕೆಯನ್ನು ಖಂಡಿಸಿ ಚಿಕ್ಕಮಗಳೂರಿನಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. | Kannada Prabha

ಸಾರಾಂಶ

ಮೋದಿ ಎನ್ನುವವರಿಗೆ ಕಪಾಳಕ್ಕೆ ಹೊಡೆಯಿರಿ ಎಂದು ಸಚಿವ ಶಿವರಾಜ್‌ ತಂಗಡಗಿ ನೀಡಿರುವ ಹೇಳಿಕೆಯನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಮಂಗಳವಾರ ಕಾಂಗ್ರೆಸ್‌ ಮುಖಂಡರ ಎದುರು ಪ್ರತಿಭಟನೆ ನಡೆಸಿದರು.

ಚಿಕ್ಕಮಗಳೂರು: ಮೋದಿ ಎನ್ನುವವರಿಗೆ ಕಪಾಳಕ್ಕೆ ಹೊಡೆಯಿರಿ ಎಂದು ಸಚಿವ ಶಿವರಾಜ್‌ ತಂಗಡಗಿ ನೀಡಿರುವ ಹೇಳಿಕೆಯನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಮಂಗಳವಾರ ಕಾಂಗ್ರೆಸ್‌ ಮುಖಂಡರ ಎದುರು ಪ್ರತಿಭಟನೆ ನಡೆಸಿದರು.ನಗರದ ಕುವೆಂಪು ಕಲಾಮಂದಿರದ ಎದುರಿರುವ ಆದ್ರಿಕಾ ಹೋಟೆಲ್‌ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‌, ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕೆ. ಜಯಪ್ರಕಾಶ್‌ ಹೆಗ್ಡೆ ಹಾಗೂ ಕಾಂಗ್ರೆಸ್‌ ಪಕ್ಷದ ಮುಖಂಡರು ಮಾಧ್ಯಮ ಸಂವಾದ ಮುಗಿಸಿ ಹೊರಗೆ ಬರುತ್ತಿದ್ದಂತೆ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಸಂತೋಷ್‌ ಕೋಟ್ಯಾನ್‌ ನೇತೃತ್ವದಲ್ಲಿ ಕಾರ್ಯಕರ್ತರು ಮೋದಿ ಪರ ಘೋಷಣೆ ಹಾಕಿದರು.ಏರು ಧ್ವನಿಯಲ್ಲಿ ಬಿಜೆಪಿ ಕಾರ್ಯಕರ್ತರು ಘೋಷಣೆ ಹಾಕುತ್ತಿದ್ದಂತೆ ಸ್ಥಳದಲ್ಲಿದ್ದ 14 ಮಂದಿ ಪ್ರತಿಭಟನಾಕಾರರನ್ನು ಮುಂಜಾಗ್ರತಾ ಕ್ರಮವಾಗಿ ಪೊಲೀಸರು ವಶಕ್ಕೆ ತೆಗೆದುಕೊಂಡು ನಂತರ ಬಿಡುಗಡೆಗೊಳಿಸಿದರು. ಪ್ರತಿಭಟನಾಕಾರರ ಮೇಲೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಡಿ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ. 26 ಕೆಸಿಕೆಎಂ 6ಮೋದಿ ಎನ್ನುವವರಿಗೆ ಕಪಾಳಕ್ಕೆ ಹೊಡೆಯಿರಿ ಎಂದು ಸಚಿವ ಶಿವರಾಜ್‌ ತಂಗಡಗಿ ನೀಡಿರುವ ಹೇಳಿಕೆಯನ್ನು ಖಂಡಿಸಿ ಚಿಕ್ಕಮಗಳೂರಿನಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ