ಬಸವನಪುರ ಸರ್ಕಾರಿ ಶಾಲೆಗೆ ತಾಪಂ ಇಒ ಎಚ್.ಜಿ.ಶ್ರೀನಿವಾಸ್ ದಿಢೀರ್ ಭೇಟಿ, ಪರಿಶೀಲನೆ

KannadaprabhaNewsNetwork | Published : Sep 1, 2024 2:04 AM

ಸಾರಾಂಶ

ಶಾಲೆಗೆ ಬೇಕಾದ ಮೂಲಭೂತ ಸೌಕರ್ಯ ಒದಗಿಸಲು ಸ್ಥಳೀಯ ಆಡಳಿತ ಮತ್ತು ಶಾಲಾ ಶಿಕ್ಷಣ ಇಲಾಖೆ ಶ್ರಮಿಸುತ್ತಿದೆ. ಶಾಲೆಯಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸಲು ಶಿಕ್ಷಕರು, ಎಸ್.ಡಿ.ಎಂ.ಸಿ ಮತ್ತು ಶಾಲಾ ಸಿಬ್ಬಂದಿ ಒಗ್ಗೂಡಿ ಕೆಲಸ ಮಾಡಬೇಕು.

ಕನ್ನಡಪ್ರಭ ವಾರ್ತೆ ಹಲಗೂರು

ಸಮೀಪದ ಬಸವನಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ತಾಪಂ ಇಒ ಎಚ್.ಜಿ.ಶ್ರೀನಿವಾಸ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಎಲ್ಲಾ ಮಕ್ಕಳಿಗೂ ಶುದ್ಧ ಕುಡಿಯುವ ನೀರು ಒದಗಿಸಬೇಕು. ಅಡುಗೆ ಮನೆಯಲ್ಲಿ ಸ್ವಚ್ಛತೆ ಕಾಪಾಡಿಕೊಂಡು, ಮಕ್ಕಳಿಗೆ ಶುದ್ಧ ಆಹಾರ ವಿತರಿಸಬೇಕು. ಶಾಲಾ ಅವರಣದಲ್ಲಿ ಶುಚಿತ್ವ ಕಾಪಾಡಿಕೊಳ್ಳುವಂತೆ ಸೂಚನೆ ನೀಡಿದರು.

ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸಲು ಹಲವು ಪೋಷಕರು ಉದಾಸೀನ ತೋರುತ್ತಾರೆ. ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎಂಬ ಅರಿವು ಮೂಡಿಸಿದಾಗ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಲು ಪೋಷಕರು ಮುಂದಾಗುತ್ತಾರೆ ಎಂದರು.

ಶಾಲೆಗೆ ಬೇಕಾದ ಮೂಲಭೂತ ಸೌಕರ್ಯ ಒದಗಿಸಲು ಸ್ಥಳೀಯ ಆಡಳಿತ ಮತ್ತು ಶಾಲಾ ಶಿಕ್ಷಣ ಇಲಾಖೆ ಶ್ರಮಿಸುತ್ತಿದೆ. ಶಾಲೆಯಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸಲು ಶಿಕ್ಷಕರು, ಎಸ್.ಡಿ.ಎಂ.ಸಿ ಮತ್ತು ಶಾಲಾ ಸಿಬ್ಬಂದಿ ಒಗ್ಗೂಡಿ ಕೆಲಸ ಮಾಡಬೇಕೆಂದು ಎಂದರು.

15 ನೇ ಹಣಕಾಸು ಅನುದಾನದ ಅಡಿಯಲ್ಲಿ ಶಾಲೆಯ ಅಡುಗೆ ಕೋಣೆಗೆ ಬಣ್ಣ ಮಾಡಿಸಬೇಕು ಮತ್ತು ಶಾಲೆ ಸುತ್ತಾಮುತ್ತ ಕಲುಷಿತ ನೀರು ನಿಲ್ಲದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ವೇಳೆ ಪ್ರಭಾರ ಮುಖ್ಯ ಶಿಕ್ಷಕಿ ಸುಕನ್ಯಾ, ಡಿ.ಹಲಸಹಳ್ಳಿ ಗ್ರಾಪಂ ಕಾರ್ಯದರ್ಶಿ ಶಿವಕುಮಾರ್, ಮಾಹಿತಿ ಶಿಕ್ಷಣ ಮತ್ತು ಸಂವಹನ ಸಂಯೋಜಕ ಸುನೀಲ್ ಕುಮಾರ್ ಸೇರಿದಂತೆ ಸಿಬ್ಬಂದಿ ವರ್ಗ ಇದ್ದರು. ಪರೀಕ್ಷಾ ಕೇಂದ್ರದ ಸುತ್ತ ನಿಷೇಧ

ಮಂಡ್ಯ:ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕಂಡಕ್ಟರ್ (RPC) ಹುದ್ದೆಗಳ ಪರೀಕೆಯು ಸೆಪ್ಟೆಂಬರ್ 1 ರಂದು ನಡೆಯಲಿದೆ.

ಸಂಸ್ಥೆಯ ಕಂಡಕ್ಟರ್ (RPC) ಹುದ್ದೆಗಳ ಪರೀಕ್ಷೆಯು ಸುಗಮವಾಗಿ ನಡೆಯಲು ತಾಲೂಕಿನ 6 ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಪರೀಕ್ಷಾ ದಿನಗಳಂದು 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿದೆ.ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಕಂಪ್ಯೂಟರ್/ಸೈಬರ್ ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಆದೇಶ ಹೊರಡಿಸಿದ್ದಾರೆ. ಪರೀಕ್ಷಾರ್ಥಿಗಳು ಮತ್ತು ಪರೀಕ್ಷಾ ಕಾರ್ಯಕ್ಕೆ ನೇಮಕಗೊಂಡ ಅಧಿಕಾರಿಗಳು/ಸಿಬ್ಬಂದಿಗಳು ಹೊರತುಪಡಿಸಿ ಇತರರು ಯಾರೂ ನಿಷೇಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Share this article