ತಪೋವನ ಕ್ಷೇತ್ರ ಜಾತ್ರೋತ್ಸವ: ಗುರುವಂದನ ಸಮಾರಂಭ, ಸನ್ಮಾನ

KannadaprabhaNewsNetwork | Published : Apr 18, 2025 12:43 AM

ಸಾರಾಂಶ

ಅಂಕನಹಳ್ಳಿ ತಪೋವನ ಕ್ಷೇತ್ರದ ಶ್ರೀ ಗುರುಸಿದ್ಧ ವೀರೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಧಾರ್ಮಿಕ ಹಾಗೂ ಗುರುವಂದನ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.

ಕನ್ನಡಪ್ರಭ ವಾರ್ತೆ ಕುಶಾಲನಗರಇಲ್ಲಿಗೆ ಸಮೀಪದ ಅಂಕನಹಳ್ಳಿ ತಪೋವನ ಕ್ಷೇತ್ರದ ಶ್ರೀ ಗುರುಸಿದ್ಧ ವೀರೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಧಾರ್ಮಿಕ ಹಾಗೂ ಗುರುವಂದನ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.ವಿಶ್ರಾಂತ ನ್ಯಾಯಾಧೀಶ ಎಂ.ಆರ್. ದೇವಪ್ಪ, ರಾಜ್ಯ ಮಾಹಿತಿ ಹಕ್ಕು ಆಯೋಗದ ನಿವೃತ್ತ ಆಯುಕ್ತ ವಿರೂಪಾಕ್ಷಯ್ಯ, ಖೋ ಖೋ ತಂಡದ ಆಟಗಾರ್ತಿ, ವಿಶ್ವಕಪ್ ವಿಜೇತೆ ಚೈತ್ರ, ಏಕಲವ್ಯ ಪ್ರಶಸ್ತಿ ಪುರಸ್ಕೃತ ಹಾಕಿ ಆಟಗಾರ ವಿಕ್ರಂ ಖಾತ, ಭಾರತ ಕಿರಿಯರ ಹಾಕಿ ತಂಡದ ತರಬೇತುದಾರ ಸಿ.ಬಿ. ಜನಾರ್ದನ್, ಭರತನಾಟ್ಯ ಕಲಾವಿದೆ ಮಿಲನ ಭರತ್, ಪ್ರಗತಿಪರ ಕೃಷಿಕ ಡಿ.ಬಿ. ಧರ್ಮಪ್ಪ, ನಿವೃತ್ತ ಸೈನಿಕ ಲೋಕೇಶ್ ಸುವರ್ಣ, ಸಾಹಿತಿ ಉಳುವಂಗಡ ಕಾವೇರಿ ಉದಯ್, ಗೋರಕ್ಷಕರಾದ ಡಾ. ರಾಜಾರಾಮ್, ಡಿವೈಎಸ್‌ಪಿ ಪರಶಿವಮೂರ್ತಿ, ಹಿರಿಯ ಪತ್ರಕರ್ತರಾದ ಕೆ.ವಿ.ಪರಮೇಶ್, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ರಾಜ್ಯ ಸಂಚಾಲಕ ಚಂದ್ರಮೋಹನ್, ಪತ್ರಕರ್ತೆ ಶ್ರೇಯಾ, ಶಿಲ್ಪಿಗಳಾದ ರವಿ ಸುಂದರ್, ಹಾರನಹಳ್ಳಿ ಮಾದಣ್ಣ, ಉದ್ಯಮಿ ಯೋಗಣ್ಣ, ಜಿ.ಪಂ. ಮಾಜಿ ಅಧ್ಯಕ್ಷೆ ಜಯಮ್ಮ ಅವರನ್ನು ಸನ್ಮಾನಿಸಲಾಯಿತು.ಸಿದ್ದಗಂಗಾ ಮಠಾಧೀಶರಾದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮನೆಹಳ್ಳಿ ಮಠಾಧೀಶ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ, ಅರಮೇರಿ ಮಠಾಧೀಶ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಕಿರಿ ಕೊಡ್ಲಿ ಮಠಾಧೀಶ ಶ್ರೀ ಸದಾಶಿವ ಸ್ವಾಮೀಜಿ, ಕಲ್ಲು ಮಠದ ಶ್ರೀ ಮಹಾಂತ ಸ್ವಾಮೀಜಿ, ಮುದ್ದಿನ ಕಟ್ಟೆ ಮಠಾಧೀಶ ಅಭಿನವ ಶಿವಾಚಾರ್ಯ ಸ್ವಾಮೀಜಿ, ಮಠದ ಶ್ರೀ ರುದ್ರಮುನಿ ಸ್ವಾಮೀಜಿ, ಕೊಡಗು ಸಂಸದ ಯದುವೀರ್ ಕೃಷ್ಣ ದತ್ತ ಒಡೆಯರ್, ಶಾಸಕ ಡಾ.ಮಂತರ್ ಗೌಡ, ವಿಧಾನಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಸಕಲೇಶಪುರ ಶಾಸಕ ಮಂಜುನಾಥ್, ಬೇಲೂರು ಶಾಸಕ ಸುರೇಶ್, ಹಿರಿಯ ವಕೀಲರಾದ ಚಂದ್ರಮೌಳಿ, ಪ್ರಮುಖರಾದ ಜಿ.ಎಂ. ಕಾಂತರಾಜ್, ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಎಚ್.ವಿ. ಶಿವಪ್ಪ, ಕಾರ್ಯಕ್ರಮ ಆಯೋಜಕ ಎಸ್.ಮಹೇಶ್ ಮತ್ತಿತರರು ಇದ್ದರು.

Share this article