ನಾಡಿಗೆ ಬೆಳಕಾಗಿರುವ ತರಳಬಾಳು ಶ್ರೀ: ಸಚಿವ ಈಶ್ವರ್ ಖಂಡ್ರೆ ಬಣ್ಣನೆ

KannadaprabhaNewsNetwork |  
Published : Jan 29, 2026, 01:30 AM IST
ಭದ್ರಾವತಿ ನಗರದ ವಿಐಎಸ್‌ಎಲ್ ಹೆಲಿಪ್ಯಾಡ್‌ನಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ ಅಂಗವಾಗಿ ೫ನೇ ದಿನ ತರಳಬಾಳು ಮಹಾಮಂಟಪದ ರಾಷ್ಟ್ರಕವಿ ಕುವೆಂಪು ಮಹಾ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕೃಷಿ ಮತ್ತು ಸಮಾಜ ವಿಷಯ ಕುರಿತ ಕಾರ್ಯಕ್ರಮದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರು, ಅರಣ್ಯ ಖಾತೆ ಸಚಿವರಾದ ಈಶ್ವರ್ ಖಂಡ್ರೆ ಪಾಲ್ಗೊಂಡು ಮಾತನಾಡಿದರು. | Kannada Prabha

ಸಾರಾಂಶ

ತರಳಬಾಳು ಜಗದ್ಗುರು ರೈತರ ನೆರವಿಗೆ ಮುಂದಾಗಿ ನೀರಾವರಿ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಮೂಲಕ ಭಗಿರಥರಾಗಿದ್ದು, ಹಲವಾರು ಸಮಾಜಮುಖಿ ಕಾರ್ಯಗಳ ಮೂಲಕ ನಾಡಿಗೆ ಬೆಳಕಾಗಿದ್ದಾರೆಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರು, ಅರಣ್ಯ ಸಚಿವ ಈಶ್ವರ್ ಖಂಡ್ರೆ ಬಣ್ಣಿಸಿದರು.

ಭದ್ರಾವತಿ: ತರಳಬಾಳು ಜಗದ್ಗುರು ರೈತರ ನೆರವಿಗೆ ಮುಂದಾಗಿ ನೀರಾವರಿ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಮೂಲಕ ಭಗಿರಥರಾಗಿದ್ದು, ಹಲವಾರು ಸಮಾಜಮುಖಿ ಕಾರ್ಯಗಳ ಮೂಲಕ ನಾಡಿಗೆ ಬೆಳಕಾಗಿದ್ದಾರೆಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರು, ಅರಣ್ಯ ಸಚಿವ ಈಶ್ವರ್ ಖಂಡ್ರೆ ಬಣ್ಣಿಸಿದರು.

ಬುಧವಾರ ನಗರದ ವಿಐಎಸ್‌ಎಲ್ ಹೆಲಿಪ್ಯಾಡ್‌ನಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ ಅಂಗವಾಗಿ ೫ನೇ ದಿನ ತರಳಬಾಳು ಮಹಾಮಂಟಪದ ರಾಷ್ಟ್ರಕವಿ ಕುವೆಂಪು ಮಹಾ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕೃಷಿ ಮತ್ತು ಸಮಾಜ ವಿಷಯ ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯೆ, ದಾಸೋಹ, ಧರ್ಮಪಾಲನೆಯ ನ್ಯಾಯದಾನ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಶ್ರೀಗಳ ಕೊಡುಗೆ ಅನನ್ಯವಾಗಿದೆ. ತರಳಬಾಳು ಹುಣ್ಣಿಮೆ ಮಹೋತ್ಸವ ಈ ನಿಟ್ಟಿನಲ್ಲಿ ಇಂದಿನ ಯುವ ಪೀಳಿಗೆಗೆ ಸಹಕಾರಿಯಾಗಿದೆ ಎಂದರು. ವೇದಿಕೆಯಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ರಾಷ್ಟ್ರೀಯ ಸ್ವಾಭಿಮಾನಿ ಅಂದೋಲನ, ನವದೆಹಲಿ ಅಧ್ಯಕ್ಷ ಬಸವರಾಜ್ ವೀರಾಪುರ, ಶ್ರೀಮತ್ ಸಾಧು ಸದ್ಧರ್ಮ ವೀರಶೈವ ಸಂಘ, ಸಿರಿಗೆರೆ ಹಾಗೂ ರಾಜ್ಯ ರೈತ ಸಂಘದ ಅಧ್ಯಕ್ಷ ಎಚ್.ಆರ್.ಬಸವರಾಜಪ್ಪ, ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ.ಜಗದೀಶ್, ಬೆಂಗಳೂರಿನ ಐಸಿಎಆರ್ ವಿಜ್ಞಾನಿ ಡಾ.ಎಂ.ವಿ.ಧನಂಜಯ, ಕಾಸರಗೋಡು ವಿಜ್ಞಾನಿ ಡಾ.ಎಚ್.ಪಿ.ಮಹೇಶ್ವರಪ್ಪ, ಶಾಸಕ ಬಿ.ಕೆ.ಸಂಗಮೇಶ್ವರ್ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೈಲಲ್ಲೂ ದರ್ಶನ್‌ಗೆ ‘ಅಭಿಮಾನಿಗಳು’ ಕಾಟ!
ನಾಳೆ ಹಲವು ಸಾಧಕರಿಗೆ ಗಾಂಧಿ ಪುರಸ್ಕಾರ ಪ್ರದಾನ