ಎರಡುವರೆ ಕೋಟಿ ರು.ವೆಚ್ಚದಲ್ಲಿ ತರಾಸು ರಂಗಮಂದಿರ ನವೀಕರಣ

KannadaprabhaNewsNetwork |  
Published : May 21, 2026, 01:15 AM IST
ಚಿತ್ರದುರ್ಗ ಮೂರನೇ ಪುಟದ ಲೀಡ್       | Kannada Prabha

ಸಾರಾಂಶ

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಬುಧವಾರ ತರಾಸು ರಂಗಮಂದಿರದ ನವೀಕರಣ ಕಾಮಗಾರಿ ಪರಿಶೀಲಿಸಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ನವೀಕರಣದ ಹಿನ್ನಲೆ ಕಳೆದ ಒಂದು ವರ್ಷದಿಂದ ಬಂದ್ ಆಗಿದ್ದ ತರಾಸು ರಂಗಮಂದಿರ ಅಂತೂ ಬಳಕೆಗೆ ಸಿದ್ಧವಾಗುತ್ತದೆ. 2.5 ಕೋಟಿ ರೂಪಾಯಿ ವೆಚ್ಚದಲ್ಲಿ ರಂಗಮಂದಿರಕ್ಕೆ ಆಧುನಿಕ ಸ್ಪರ್ಶ ನೀಡಲಾಗಿದ್ದು ನವೀಕರಣ ಕಾಮಗಾರಿ ಅಂತಿಮ ಹಂತಕ್ಕೆ ಬಂದಿದೆ. ಇನ್ನೆರೆಡು ತಿಂಗಳಲ್ಲಿ ಸಾರ್ವಜನಿಕ ಬಳಕ್ಗೆ ಮುಕ್ತವಾಗಲಿದೆ.

ಬುಧವಾರ ರಂಗಮಂದಿರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಟಿ.ವೆಂಕಟೇಶ್, 2016ರಲ್ಲೂ ಒಮ್ಮೆ ರಂಗಮಂದಿರದ ನವೀಕರಣ ಮಾಡಲಾಗಿತ್ತು. ಆದರೆ ಈ ಬಾರಿ ಇದನ್ನು ಒಂದು ಸವಾಲಾಗಿ ಸ್ವೀಕರಿಸಿ, ಪಿವಿಆರ್ ಮಾದರಿಯಲ್ಲಿ ಅತ್ಯಾಧುನಿಕ ಸೌಂಡ್ ಮತ್ತು ಲೈಟಿಂಗ್ಸ್ ಹೊಂದಿರುವ ‘ಅಕಾಸ್ಟಿಕ್ ಥಿಯೇಟರ್’ ಆಗಿ ಪರಿವರ್ತಿಸಲಾಗಿದೆ. ಬೆಂಗಳೂರಿನ ‘ಬ್ರಿಕ್ಸ್ ವಾಲ್'''''''' ಎಂಬ ಹೆಸರಾಂತ ಸಂಸ್ಥೆಯ ತಾಂತ್ರಿಕ ನೆರವಿನೊಂದಿಗೆ ಈ ಸುಸಜ್ಜಿತ ಒಳಾಂಗಣ ವಿನ್ಯಾಸ ಮಾಡಲಾಗಿದ್ದು, ಇನ್ನು ಹೊರಗಡೆ ಕೇವಲ ನಾಮಫಲಕ ಹಾಗೂ ಪ್ಲಾಂಟೇಶನ್ ಕೆಲಸಗಳು ಮಾತ್ರ ಬಾಕಿ ಉಳಿದಿವೆ ಎಂದು ತಿಳಿಸಿದರು.

ಜಿಲ್ಲಾ ಖನಿಜ ಪ್ರತಿಷ್ಠಾನ (ಡಿಎಂಎಫ್) ನಿಧಿಯಿಂದ 2.5 ಕೋಟಿ ರು. ವೆಚ್ಚದಲ್ಲಿ ರಂಗಮಂದಿರದ ಒಳಾಂಗಣ ಹಾಗೂ ಹೊರಾಂಗಣದ ಸಿವಿಲ್ ಸ್ಟ್ರಕ್ಚರ್, ಪೇವರ್ಸ್ ಮತ್ತು ಮೇಲ್ಛಾವಣಿ ಸೇರಿದಂತೆ ಸಂಪೂರ್ಣ ದುರಸ್ತಿ ಕಾರ್ಯ ಮಾಡಲಾಗಿದ್ದು, ಆಧುನೀಕರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹರ್ಷ ವ್ಯಕ್ತಪಡಿಸಿದರು.

ಜಿಲ್ಲೆಯ ಹೆಮ್ಮೆಯ ಬರಹಗಾರರಾದ ತರಾಸು ಅವರ ಹೆಸರನ್ನು ರಂಗಮಂದಿರಕ್ಕೆ ನಾಮಕರಣ ಮಾಡಲಾಗಿದೆ. ಇಂದಿನ ಪೀಳಿಗೆಗೆ ತರಾಸು ಅವರ ಕೊಡುಗೆ ಹಾಗೂ ಕಾದಂಬರಿಗಳ ಪರಿಚಯ ಇರಲಿ ಎಂಬ ಉದ್ದೇಶದಿಂದ, ಅವರ ಪ್ರಸಿದ್ಧ ಕಾದಂಬರಿಗಳಾದ ದುರ್ಗಾಸ್ತಮಾನ, ಕಂಬನಿಯ ಕುಯಿಲು, ರಕ್ತರಾತ್ರಿ ಸೇರಿದಂತೆ ಹಲವು ಕೃತಿಗಳ ಹೆಸರುಗಳನ್ನು ಒಳಾಂಗಣದಲ್ಲಿ ಪ್ರದರ್ಶಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪ್ರಸ್ತುತ ಜಿಲ್ಲಾ ಉಸ್ತುವಾರಿ ಸಚಿವರು ನಿಧನದ ಹೊಂದಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ಶಾಸಕರೊಂದಿಗೆ ಚರ್ಚಿಸಿ, ಸೂಕ್ತ ಸಮಯ ನಿಗದಿಪಡಿಸಿ ಸಾರ್ವಜನಿಕರ ಬಳಕೆಗೆ ರಂಗಮಂದಿರ ಉದ್ಘಾಟಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕ ಎಂ.ಜೆ.ಮಹೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಬಿ.ಎಸ್.ಹರೀಶ್ ಕುಮಾರ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತುಮಕೂರು ವಿವಿ ಕಲಾ ಕಾಲೇಜು ಚಾಂಪಿಯನ್
ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಒಂದು ವಾರದಲ್ಲಿ ಮುಕ್ತಾಯ