2 ಲಕ್ಷ ಲೀಟರ್‌ ಹಾಲು ಉತ್ಪಾದನೆ ಗುರಿ: ಶಾಸಕ

KannadaprabhaNewsNetwork |  
Published : Nov 15, 2025, 01:30 AM IST
ಮಂಜುನಾಥ್‌ | Kannada Prabha

ಸಾರಾಂಶ

ದಿನಕ್ಕೆ 96 ಸಾವಿರ ಲೀಟರ್‌ ಹಾಲು ಉತ್ಪಾದನೆಯಾಗುತ್ತಿದ್ದು, 2 ಲಕ್ಷ ಲೀಟರ್‌ಗೆ ಹೆಚ್ಚಿಸಬೇಕು ಎಂಬ ಗುರಿ ಹೊಂದಲಾಗಿದ್ದು, ಇದಕ್ಕೆ ಬೇಕಾದ ಸಹಕಾರವನ್ನು ನೀಡಲಾಗುವುದು.

ಕನ್ನಡಪ್ರಭ ವಾರ್ತೆ ಹನೂರು

ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಕೃಷಿ ಮತ್ತು ಹೈನುಗಾರಿಕೆ ಬಿಟ್ಟು ಬೇರೆ ಏನು ಮಾಡಲು ಅವಕಾಶ ಕಡಿಮೆ. ಹೈನುಗಾರಿಕೆ ಸಹ ಮಾಡಲು ಆಗದೆ ಬೇರೆ ಬೇರೆ ಕಡೆ ಗುಳೆ ಹೋಗುತ್ತಿದ್ದಾರೆ ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.ಪಟ್ಟಣದ ಚಾಮುಲ್ ಉಪ ಕಚೇರಿ ಆವರಣದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ - 2025 ಸಮಾರೋಪ ಸಮಾರಂಭದ ಪ್ರಯುಕ್ತ ಹನೂರು ಕ್ಷೇತ್ರ ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಾಹಕರ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು..ದಿನಕ್ಕೆ 96 ಸಾವಿರ ಲೀಟರ್‌ ಹಾಲು ಉತ್ಪಾದನೆಯಾಗುತ್ತಿದ್ದು, 2 ಲಕ್ಷ ಲೀಟರ್‌ಗೆ ಹೆಚ್ಚಿಸಬೇಕು ಎಂಬ ಗುರಿ ಹೊಂದಲಾಗಿದ್ದು, ಇದಕ್ಕೆ ಬೇಕಾದ ಸಹಕಾರವನ್ನು ನೀಡಲಾಗುವುದು. ಈ ಉಪ ಕಚೇರಿಯಲ್ಲಿ ಪ್ರತಿ ಎರಡು ತಿಂಗಳಿಗೊಮ್ಮೆ ಸಭೆ ಕರೆಯಬೇಕು. ಸರ್ಕಾರದಿಂದ ಬರುವ ಪ್ರತಿಯೊಂದು ಸೌಲಭ್ಯಗಳ ಮಾಹಿತಿಯನ್ನು ಎಲ್ಲಾ ಹಾಲು ಉತ್ಪಾದಕರ ಸಂಘಗಳು ತಿಳಿಸುವ ಕಾರ್ಯವನ್ನು ಮಾಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ಈ ಕ್ಷೇತ್ರದಲ್ಲಿ ನನಗೆ ಅವಕಾಶ ಕೊಟ್ಟಿದ್ದೀರಾ ಅದರ ಪ್ರತಿ ಫಲವಾಗಿ ನಿಮ್ಮ ಋಣ ತೀರಿಸಲು ಶ್ರಮಿಸುತ್ತೇನೆ ಎಂದರು.

ಜಿಲ್ಲೆಯಲ್ಲಿ ನಾವು ಹಾಲು ಉತ್ಪಾದನೆಯಲ್ಲಿ ಪ್ರಥಮ ಸ್ಥಾನದಲ್ಲಿದ್ದೇವೆ, ಇನ್ನೂ ಹೆಚ್ಚಿನ ಉತ್ಪಾದನೆಗೆ ತಮ್ಮ ಸಂಘಗಳಿಗೆ ಬೇಕಾದ ಮೂಲಭೂತ ಸೌಕರ್ಯಗಳ ಕಲ್ಪಿಸಲು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.

ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ ಮಾತನಾಡಿ, ರಾಜಕೀಯ ಬಿಟ್ಟು ಎಲ್ಲಾ ಒಗ್ಗಟಾಗಿ ಕೂಡಿ ಸಂಘಗಳ ಅಭಿವೃದ್ಧಿ ಸಹಕಾರ ನೀಡಬೇಕು. ಹನೂರು ತಾಲೂಕಿನಲ್ಲಿ 90 ಸಾವಿರ ಹಾಲು ಪೂರೈಕೆಯಾಗುತ್ತಿದೆ. ಚಿಕ್ಕ ಜಿಲ್ಲೆಗೆ ಒಕ್ಕೂಟ ಬರಲು ಶ್ರಮಿಸಿದ ಮಹದೇವಪ್ರಸಾದ್ ಅವರನ್ನು ನೆನೆಪು ಮಾಡಿಕೊಳ್ಳಬೇಕು. ಹಾಗಾಗಿ ಎಲ್ಲಾ ಹೈನುಗಾರಿಕೆ ಮಾಡುವ ಮಾಡುವ ಮೂಲಕ ಶೈಕ್ಷಣಿಕವಾಗಿ ಆರ್ಥಿಕವಾಗಿ ಮುಂದೆ ಬರಬೇಕು ಎಂದು ತಿಳಿಸಿದರು.ಇದೇ ಸಂದರ್ಭದಲ್ಲಿ ಚಾಮುಲ್ ನಿರ್ದೇಶಕರಾದ ಮಹಾದೇವಸ್ವಾಮಿ (ಉದ್ದನೂರು ಪ್ರಸಾದ್), ಶಾಹುಲ್ ಅಹಮದ್ (ತಾರೀಖ್), ಮಾಜಿ ಅಧ್ಯಕ್ಷ ಗುರುಮಲ್ಲಪ್ಪ, ವ್ಯವಸ್ಥಾಪಕ ನಿರ್ದೇಶಕ ಕೆ. ರಾಜಕುಮಾರ್, ಪ್ರಭಾರ ವ್ಯವಸ್ಥಾಪಕ ಶರತ್ ಕುಮಾರ್, ವಿಸ್ತರಣಾಧಿಕಾರಿಗಳಾದ ವೆಂಕಟೇಶ್, ರಘು, ಸೋಮಶೇಖರ್, ಶ್ರೀನಿವಾಸ್ ಪ್ರಸಾದ್, ಚಾಮರಾಜನಗರ ಜಿಲ್ಲಾ ಸಹಕಾರ ಒಕ್ಕೂಟದ ಉಪಾಧ್ಯಕ್ಷ ರಾಯಪ್ಪ, ವಿವಿಧ ಗ್ರಾಮಗಳ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯಕಾರ್ಯನಿರ್ವಹಕರು ಹಾಜರಿದ್ದರು.----------

14ಸಿಎಚ್ಎನ್‌23

ಹನೂರು ಪಟ್ಟಣದ ಚಾಮುಲ್ ಉಪ ಕಚೇರಿಯಲ್ಲಿ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ - 2025 ಸಮಾರೋಪ ಸಮಾರಂಭದ ಪ್ರಯುಕ್ತ ಹನೂರು ಕ್ಷೇತ್ರ ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಾಹಕರ ಪೂರ್ವಭಾವಿಯಲ್ಲಿ ಶಾಸಕ ಎಂ.ಆರ್‌. ಮಂಜುನಾಥ್‌ ಅವರು ಮಾತನಾಡಿದರು.

PREV

Recommended Stories

ಪೊನ್ನಾಚಿಯಲ್ಲಿ ಚಿರತೆ ದಾಳಿ ಮೇಕೆ ಬಲಿ
ಮೇಕೆದಾಟು ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪು