ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆ ಗುರಿ :ಜಿಲ್ಲಾಧ್ಯಕ್ಷ ಚಂದ್ರಸಾಗರ್

KannadaprabhaNewsNetwork |  
Published : Feb 18, 2025, 12:33 AM IST
17ಕೆಆರ್ ಎಂಎನ್ 1.ಜೆಪಿಜಿರಾಮನಗರ ಕಾಂಗ್ರೆಸ್ ಕಚೇರಿಯಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚಂದ್ರಸಾಗರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ಸಾಮಾಜಿಕ ನ್ಯಾಯದ ಪರವಾಗಿ ಹೋರಾಟ, ಅರಣ್ಯ ಬೆಳಿಸಿ ಪರಿಸರ ಸಂರಕ್ಷಣೆ, ರಕ್ತದಾನ, ಆರೋಗ್ಯ ತಪಾಸಣೆ, ಯುಪಿಎಸ್ಸಿ. ಕೆಪಿಎಸ್ಸಿ ಕೋಚಿಂಗ್ ತರಬೇತಿ, ಗ್ರಾಮೀಣ ಭಾಗದಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ, ಗ್ಯಾರಂಟಿ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವುದು. ಧ್ವನಿ ಇಲ್ಲದ ಜನರಿಗೆ ನೆರವಾಗುವಂತಹ ಹತ್ತು ಹಲವು ಕಾರ್ಯಕ್ರಮಗಳೊಂದಿಗೆ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷ ಸಂಘಟಿಸಿ, ಪಕ್ಷ ನೀಡುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಲಾಗುವುದು ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ರಾಮನಗರ

ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಯುವ ನಾಯಕರು ಸೇರಿದಂತೆ ಪಕ್ಷದ ಅಭ್ಯರ್ಥಿಗಳು ಸುಲಭವಾಗಿ ಗೆಲುವು ಸಾಧಿಸಲು ಪೂರಕವಾಗಿ ಬೂತ್ ಮಟ್ಟದಲ್ಲಿ ಯುವ ಕಾಂಗ್ರೆಸ್ ಪಕ್ಷವನ್ನು ಸದೃಢವಾಗಿ ಸಂಘಟನೆ ಮಾಡಲಾಗುವುದು ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ವಿ.ಚಂದ್ರಸಾಗರ್ ತಿಳಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಗಳಲ್ಲಿ ಸ್ಪರ್ಧಿಸಲು ಯುವ ಕಾಂಗ್ರೆಸ್ ನಾಯಕತ್ವ ಮತ್ತು ಸಂಘಟನೆಗೆ ಸಹಕಾರಿಯಾಗುವಂತಹ ವಾತಾವರಣ ನಿರ್ಮಿಸುತ್ತೇವೆ ಎಂದು ಹೇಳಿದರು.

ಸಾಮಾಜಿಕ ನ್ಯಾಯದ ಪರವಾಗಿ ಹೋರಾಟ, ಅರಣ್ಯ ಬೆಳಿಸಿ ಪರಿಸರ ಸಂರಕ್ಷಣೆ, ರಕ್ತದಾನ, ಆರೋಗ್ಯ ತಪಾಸಣೆ, ಯುಪಿಎಸ್ಸಿ. ಕೆಪಿಎಸ್ಸಿ ಕೋಚಿಂಗ್ ತರಬೇತಿ, ಗ್ರಾಮೀಣ ಭಾಗದಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ, ಗ್ಯಾರಂಟಿ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವುದು. ಧ್ವನಿ ಇಲ್ಲದ ಜನರಿಗೆ ನೆರವಾಗುವಂತಹ ಹತ್ತು ಹಲವು ಕಾರ್ಯಕ್ರಮಗಳೊಂದಿಗೆ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷ ಸಂಘಟಿಸಿ, ಪಕ್ಷ ನೀಡುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಲಾಗುವುದು ಎಂದು ಹೇಳಿದರು.

ಯುವ ಕಾಂಗ್ರೆಸ್‌ ಜಿಲ್ಲಾ ಹಾಗೂ ತಾಲೂಕು ಘಟಕಗಳಿಗೆ ಆಯ್ಕೆಯಾಗಿರುವ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಸಿದ್ಧತೆ ನಡೆಯುತ್ತಿದ್ದು, ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ದಿನಾಂಕ ನೀಡಲಿದ್ದು ಅಂದು ಬೃಹತ್ ಸಂಖ್ಯೆಯಲ್ಲಿ ಯುವಕರ ಪದಾಧಿಕಾರಿಗಳ ಪದಗ್ರಹಗಣ ಮತ್ತು ಯುವ ಸಮಾವೇಶವನ್ನು ಆಯೋಜಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಯುವ ಕಾಂಗ್ರೆಸ್ ಪಕ್ಷದ ಆಂತರೀಕ ಚುನಾವಣೆ ಆನ್‌ಲೈನ್ ಮೂಲಕ ನಡೆಯಿತು. ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ ಎಲ್ಲರೂ ಸಹ ಪಕ್ಷದ ನಿಷ್ಟಾವಂತ ಕಾರ್ಯಕರ್ತರೇ ಆಗಿದ್ದು, ಅತೀ ಹೆಚ್ಚು ಮತ ಪಡೆದವರು ಪ್ರಮುಖ ಸ್ಥಾನಗಳಿಗೆ ಆಯ್ಕೆಯಾಗಿದ್ದಾರೆ. ನನಗೆ ಜಿಲ್ಲೆಯ ಯುವಕ, ಯುವತಿಯರು 13.970 ಮತಗಳನ್ನು ನೀಡಿ ಆಶೀರ್ವಾದ ಮಾಡಿದ್ದರಿಂದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ. ಆಯ್ಕೆಗೆ ಶ್ರಮಿಸಿದ ಎಲ್ಲರಿಗೂ ಅಭಿನಂದನೆ ತಿಳಿಸುವುದಾಗಿ ಹೇಳಿದರು.

ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಿಕಟಪೂರ್ವ ಸಂಸದರಾದ ಡಿ.ಕೆ.ಸುರೇಶ್, ಶಾಸಕರಾದ ಇಕ್ಬಾಲ್‌ ಹುಸೇನ್, ಎಚ್.ಸಿ.ಬಾಲಕೃಷ್ಣ, ಸಿ.ಪಿ.ಯೋಗೇಶ್ವರ್, ಎಂಎಲ್ಸಿ ಎಸ್.ರವಿ, ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ, ಯುವನಾಯಕ ಕೆಂಪರಾಜು ಸೇರಿದಂತೆ ಜಿಲ್ಲೆಯ ಹಿರಿಯ ಕಿರಿಯರ ಮಾರ್ಗದರ್ಶನದಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಲಾಗುವುದು. ಈಗಾಗಲೇ 31 ಸಾವಿರ ಯುವ ಕಾಂಗ್ರೆಸ್ ಸದಸ್ಯತ್ವವನ್ನು ಮಾಡಿದ್ದು, ಇದಕ್ಕೆ ಯುವ ಕಾಂಗ್ರೆಸ್ ಪ್ರಮುಖ ಕಾರಣವಾಗಿದೆ. ಎಲ್ಲಾ ಬ್ಲಾಕ್ ಅಧ್ಯಕ್ಷರು, ಪದಾಧಿಕಾರಿಗಳ ಸಹಕಾರದಲ್ಲಿ ಸಂಘಟನೆ ಮಾಡಲಾಗುವುದು ಎಂದು ಚಂದ್ರಸಾಗರ್ ತಿಳಿಸಿದರು.

ರಾಮನಗರ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಜಿ.ಭೂಷನ್ ಮಾತನಾಡಿ, ಎಲ್ಲರೂ ಒಗ್ಗೂಡಿ ಪಕ್ಷ ಸಂಘಟಿಸುವ ಮೂಲಕ ಕಾಂಗ್ರೆಸ್ ಪಕ್ಷದ ನೆಲೆಯನ್ನು ಗಟ್ಟಿಗೊಳಿಸುವ ಸಂಕಲ್ಪ ನಮ್ಮದಾಗಿದೆ. ಭದ್ರವಾಗಿ ಪಕ್ಷವನ್ನು ಸಂಘಟನೆ ಮಾಡುತ್ತೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗೇಶ್, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ವೆಂಕಟೇಶ್, ಚನ್ನಪಟ್ಟಣ ವಿಧಾನಸಭಾ ಅಧ್ಯಕ್ಷ ಸುಜಯ್ ಕುಮಾರ್, ಮಾಗಡಿ ವಿಧಾನಸಭಾ ಅಧ್ಯಕ್ಷ ವಿನಯ್ ಗೌಡ, ಕನಕಪುರ ವಿಧಾನಸಭಾ ಅಧ್ಯಕ್ಷ ಸಿದ್ದುಗೌಡ, ರಾಮನಗರ ವಿಧಾನಸಭಾ ಅಧ್ಯಕ್ಷ ಭೂಷನ್, ರಾಮನಗರ ಟೌನ್ ಬ್ಲಾಕ್ ಅಧ್ಯಕ್ಷ ಎಂ.ಮುಷೀರ್, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ರಾಮು, ಬಿಡದಿ ಬ್ಲಾಕ್ ಅಧ್ಯಕ್ಷ ಪೃಥ್ವಿರಾಜು, ಸಾತನೂರು ಬ್ಲಾಕ್ ಅಧ್ಯಕ್ಷ ರುದ್ರೇಶ್, ಕನಕಪುರ ಬ್ಲಾಕ್ ಅಧ್ಯಕ್ಷ ಶಿವಕುಮಾರ್, ಮಾಗಡಿ ಬ್ಲಾಕ್ ಅಧ್ಯಕ್ಷ ಪ್ರವೀಣ್, ಹಾರೋಹಳ್ಳಿ ಬ್ಲಾಕ್ ಅಧ್ಯಕ್ಷ ಪುನೀತ್ ಕುಮಾರ್, ಚನ್ನಪಟ್ಟಣ ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಶಿವಕುಮಾರ್, ಟೌನ್ ಬ್ಲಾಕ್ ಅಧ್ಯಕ್ಷ ಪ್ರದೀಪ್ ಕುಮಾರ್ ಮತ್ತಿತರರು ಹಾಜರಿದ್ದರು.

ಕೋಟ್‌..............

ಸ್ಥಳೀಯ ಚುನಾವಣೆಗಳಲ್ಲಿ ಯುವಕರು ಸ್ಪರ್ಧೆ ಮಾಡಲು ಹೆಚ್ಚಿನ ಅವಕಾಶ ನೀಡುವಂತೆ ನಮ್ಮ ನಾಯಕರಲ್ಲಿ ಮನವಿ ಮಾಡಲಾಗುವುದು. ಪಕ್ಷ ಸಂಘಟನೆಗೆ ನಮ್ಮ ಮೊದಲ ಆದ್ಯತೆ. ಜನಪರ ಕಾರ್ಯಗಳು, ಅಭಿವೃದ್ಧಿ ಕೆಲಸಗಳು, ಸರ್ಕಾರಿ ಯೋಜನೆಗಳು ಜನರಿಗೆ ತಲುಪಿಸುವುದು ನಮ್ಮ ಕರ್ತವ್ಯ.

-ಚಂದ್ರಸಾಗರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಸಕ್ಕೆ ಬೆಂಕಿ: ಹೊಗೆಯಿಂದ ಮನೆಯಲ್ಲಿ ಉಸಿರಾಡಲು ಆಗುತ್ತಿಲ್ಲ:ನಟಿ ಐಂದ್ರಿತಾ
ಕಟ್ಟುನಿಟ್ಟು ಮಾಡಿದರೂ ನಿಲ್ಲದ ಪರಪ್ಪನ ಅಗ್ರಹಾರ ಪವಾಡ