ಒಂದು ವರ್ಷದಲ್ಲಿ 2500 ಮೆಗಾವ್ಯಾಟ್ ಸೌರ ವಿದ್ಯುತ್ ಉತ್ಪಾದನೆ ಗುರಿ: ಸಚಿವ ಕೆ.ಜೆ.ಜಾರ್ಜ್

KannadaprabhaNewsNetwork |  
Published : Jan 13, 2026, 01:15 AM IST
ಒಂದು ವರ್ಷದಲ್ಲಿ 2500 ಮೆಗಾವ್ಯಾಟ್ ಸೌರ ವಿದ್ಯುತ್ ಉತ್ಪಾದಿಸಿ, ರೈತರಿಗೆ ತೊಂದರೆಯಾಗದಂತೆ         ಸಮರ್ಪಕ ವಿದ್ಯುತ್ ಪೂರೈಸಲು ಸರ್ಕಾರ ಉದ್ದೇಶಿಸಿದೆಃ ಸಚಿವ ಕೆ.ಜೆ.ಜಾರ್ಜ್ | Kannada Prabha

ಸಾರಾಂಶ

ತರೀಕೆರೆ ಕಳೆದ ಎರಡೂವರೆ ವರ್ಷದ ಆಡಳಿತಾವಧಿಯಲ್ಲಿ ಕೇವಲ ಒಂದು ತಿಂಗಳು ಮಾತ್ರ ವಿದ್ಯುತ್ ಸಮಸ್ಯೆಯಾಗಿತ್ತು. ಮುಖ್ಯಮಂತ್ರಿಗಳ ನಿರ್ದೇಶನದ ಮೇರೆಗೆ ರೈತರಿಗೆ 7 ಗಂಟೆ ವಿದ್ಯುತ್ ನೀಡಲಾಗುತ್ತಿದೆ ಎಂದು ಇಂಧನ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು.

- ನಂದಿ ಹೊಸಹಳ್ಳಿಯಲ್ಲಿ ವಿದ್ಯುತ್ ಉಪಕೇಂದ್ರದ ಉದ್ಘಾಟನೆ, ಕುಸುಮ್‌ಸಿ ಯೋಜನೆ ಸೌರ ವಿದ್ಯುತ್ ಘಟಕ- ಯರೇಹಳ್ಳಿಯ ವಿದ್ಯುತ್ ಉಪಕೇಂದ್ರದ ಶಂಕುಸ್ಥಾಪನೆ

ಕನ್ನಡಪ್ರಭ ವಾರ್ತೆ, ತರೀಕೆರೆ

ಕಳೆದ ಎರಡೂವರೆ ವರ್ಷದ ಆಡಳಿತಾವಧಿಯಲ್ಲಿ ಕೇವಲ ಒಂದು ತಿಂಗಳು ಮಾತ್ರ ವಿದ್ಯುತ್ ಸಮಸ್ಯೆಯಾಗಿತ್ತು. ಮುಖ್ಯಮಂತ್ರಿಗಳ ನಿರ್ದೇಶನದ ಮೇರೆಗೆ ರೈತರಿಗೆ 7 ಗಂಟೆ ವಿದ್ಯುತ್ ನೀಡಲಾಗುತ್ತಿದೆ ಎಂದು ಇಂಧನ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು.ಸೋಮವಾರ ತಾಲೂಕಿನ ನಂದಿ ಹೊಸಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ 66 /11 ಕೆವಿ ವಿದ್ಯುತ್ ಉಪಕೇಂದ್ರದ ಉದ್ಘಾಟನೆ, ಕುಸುಮ್‌ಸಿ ಯೋಜನೆ ಸೌರ ವಿದ್ಯುತ್ ಘಟಕ- ಯರೇಹಳ್ಳಿಯಲ್ಲಿ ನಿರ್ಮಿಸಲಿರುವ 110 /11 ಕೆವಿ ವಿದ್ಯುತ್ ಉಪಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ ನಂತರ ನಡೆದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಕುಸುಮ್‌ಸಿ ಯೋಜನೆಯಡಿ ಒಂದು ವರ್ಷದಲ್ಲಿ 2500 ಮೆಗಾವ್ಯಾಟ್ ಸೌರ ವಿದ್ಯುತ್ ಉತ್ಪಾದಿಸಿ, ರೈತರಿಗೆ ತೊಂದರೆ ಯಾಗದಂತೆ ಸಮರ್ಪಕ ವಿದ್ಯುತ್ ಪೂರೈಸಲು ಸರಕಾರ ಉದ್ದೇಶಿಸಿದೆ. ಪಂಪ್‌ಸೆಟ್‌ಗಳಿಗೆ ರೈತರು ಅನಧಿಕೃತವಾಗಿ ವಿದ್ಯುತ್ ಬಳಕೆ ಮಾಡುತ್ತಿರುವುದರಿಂದ ಟಿಸಿಗಳು ಹೆಚ್ಚುವರಿ ಲೋಡ್‌ನಿಂದ ಸುಟ್ಟು ಹೋಗುತ್ತಿವೆ. ಬೇರೆಡೆ ಆರ್ಡರ್ ಕೊಟ್ಟು ಟಿಸಿ ಪಡೆಯಬೇಕಾಗಿದೆ ಎಂದು ಹೇಳಿದರು.ಮಾಜಿ ಪ್ರಧಾನಿ ಮನಮೋಹನ್‌ಸಿಂಗ್ ಜಾರಿಗೊಳಿಸಿದ್ದ ಮಹಾತ್ಮಾಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಬದಲಾಯಿಸಿರುವ ಕೇಂದ್ರ ಸರ್ಕಾರ ಬಡವರಿಗೆ ಕೂಲಿ ಕಾರ್ಮಿಕರಿಗೆ ಅನ್ಯಾಯ ಮಾಡಲು ಹೊರಟಿದೆ. ಕಾಲಕ್ರಮೇಣ ನರೇಗಾ ಯೋಜನೆ ರದ್ದುಪಡಿಸುವ ಷಡ್ಯಂತ್ರ ಮಾಡಲಾಗುತ್ತಿದೆ ಎಂದು ದೂರಿದರು.ಶಾಸಕ ಜಿ.ಎಚ್.ಶ್ರೀನಿವಾಸ್ ಮಾತನಾಡಿ, ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಎಂಯುಎಸ್‌ಎಸ್ ಘಟಕಗಳಿಂದ ಅಲ್ಲಿನ ರೈತರಿಗೆ, ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಬಾವಿಕೆರೆ ಗ್ರಾಮದಲ್ಲಿ ನಿರ್ಮಿಸಲಿರುವ ಘಟಕಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹುಣಸಘಟ್ಟದಲ್ಲಿ ಘಟಕ ನಿರ್ಮಿಸಲು, ದೋರನಾಳು ಗ್ರಾಮದಲ್ಲಿ ಸೌರ ವಿದ್ಯುತ್ ಸ್ಟೇಷನ್ ನಿರ್ಮಿಸಲು ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಲಿಂಗದಹಳ್ಳಿ ಮತ್ತು ಕೆಮ್ಮಣ್ಣುಗುಂಡಿ ಭಾಗದಲ್ಲಿ ಹೊಸ ವಿದ್ಯುತ್ ಲೈನ್ ಅಳವಡಿಸಲು ಸಚಿವರು ಒಪ್ಪಿಗೆ ಸೂಚಿಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ, ಟಿ.ಡಿ.ರಾಜೇಗೌಡ, ಭದ್ರಾ ಕಾಡಾ ಅಧ್ಯಕ್ಷ ಡಾ.ಅಂಶುಮಂತ್, ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್, ಪೊಲೀಸ್ ಅಧೀಕ್ಷಕ ಜಿತೇಂದ್ರಕುಮಾರ್ ದಯಾಮ, ಉಪವಿಭಾಗಾದಿಕಾರಿ ಎನ್.ವಿ.ನಟೇಶ್, ತಹಸೀಲ್ದಾರ್ ವಿಶ್ವಜಿತ ಮೆಹತಾ, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾದಿಕಾರಿ ಡಾ.ಆರ್.ದೇವೇಂದ್ರಪ್ಪ, ಮೆಸ್ಕಾಂ ಎಇಇ ಮಂಜುನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಚ್.ಯು. ಫಾರುಕ್, ದಯಾನಂದ್, ಚಿಕ್ಕಮಗಳೂರು ಜಿಲ್ಲಾ ಗ್ಯಾರಂಟಿ ಉಸ್ತುವಾರಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸಮೀವುಲ್ಲಾ ಶರೀಫ್, ಹಾದೀಕೆರೆ ಗ್ರಾಪಂ ಅಧ್ಯಕ್ಷೆ ರೇಖಾ ರವೀಶಯ್ಯ, ಮಾಜಿ ಅಧ್ಯಕ್ಷ ರಾಜು, ಇಲಾಖೆ ಅಧಿಕಾರಿಗಳು ಹಾಗೂ ಇತರರು ಭಾಗವಹಿಸಿದ್ದರು.-

12ಕೆಟಿಆರ್.ಕೆ.4ಃ

ತರೀಕೆರೆ ಸಮೀಪದ ಯರೇಹಳ್ಳಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವ ಕೆ.ಜೆ.ಜಾರ್ಜ್ ಮಾತನಾಡಿದರು. ಶಾಸಕ ಜಿ.ಎಚ್.ಶ್ರೀನಿವಾಸ್, ಶಾಸಕ, ಟಿ.ಡಿ.ರಾಜೇಗೌಡ, ಭದ್ರಾ ಕಾಡಾ ಅಧ್ಯಕ್ಷ ಡಾ.ಅಂಶುಮಂತ್‌ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೈಕೋರ್ಟ್‌ ಹೊಸ ಕಟ್ಟಡಕ್ಕೆ 30 ಎಕ್ರೆಕೋರಿಕೆ:ರಾಜ್ಯ ಸರ್ಕಾರಕ್ಕೆ ನೋಟಿಸ್‌
ಬಿಎಂಐಸಿ ಮರುಪರಿಶೀಲಿಸಿ: ರಾಜ್ಯಕ್ಕೆ ಕೋರ್ಟ್‌ ಸೂಚನೆ