₹30 ಕೋಟಿ ಮಧ್ಯಮಾವಧಿ ಸಾಲ ನೀಡುವ ಗುರಿ: ಸುರೇಶ್

KannadaprabhaNewsNetwork |  
Published : Aug 16, 2025, 02:01 AM IST
ಚಿಕ್ಕಮಗಳೂರಿನ ಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಬ್ಯಾಂಕಿನ ಸರ್ವ ಸದಸ್ಯರ ಸಭೆಯನ್ನು ಅಧ್ಯಕ್ಷ ಡಿ.ಎಸ್. ಸುರೇಶ್‌ ಅವರು ಉದ್ಘಾಟಿಸಿದರು. ರಾಜ್ಯ ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷ ಬೆಳ್ಳಿ ಪ್ರಕಾಶ್‌ ಹಾಗೂ ಡಿಸಿಸಿ ಬ್ಯಾಂಕಿನ ನಿರ್ದೇಶಕರು ಉಪಸ್ಥಿತರಿದ್ದರು. | Kannada Prabha

ಸಾರಾಂಶ

ಚಿಕ್ಕಮಗಳೂರು, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನಿಂದ ಪ್ರಸಕ್ತ ಸಾಲಿನಲ್ಲಿ ಶೇ.3 ರ ಬಡ್ಡಿ ದರದಲ್ಲಿ ₹30 ಕೋಟಿ ಮಧ್ಯಮಾವಧಿ ಸಾಲ ನೀಡುವ ಯೋಜನೆ ಜೊತೆಗೆ ಪ್ರಸ್ತುತ ಇರುವ ನಿವ್ವಳ ಲಾಭವನ್ನು ₹8 ಕೋಟಿಗಳಿಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ ಡಿ.ಎಸ್. ಸುರೇಶ್ ಹೇಳಿದರು.

ಬ್ಯಾಂಕಿನ ಸಭಾಂಗಣದಲ್ಲಿ ನಡೆದ ಸರ್ವ ಸದಸ್ಯರ ಸಭೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನಿಂದ ಪ್ರಸಕ್ತ ಸಾಲಿನಲ್ಲಿ ಶೇ.3 ರ ಬಡ್ಡಿ ದರದಲ್ಲಿ ₹30 ಕೋಟಿ ಮಧ್ಯಮಾವಧಿ ಸಾಲ ನೀಡುವ ಯೋಜನೆ ಜೊತೆಗೆ ಪ್ರಸ್ತುತ ಇರುವ ನಿವ್ವಳ ಲಾಭವನ್ನು ₹8 ಕೋಟಿಗಳಿಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ ಡಿ.ಎಸ್. ಸುರೇಶ್ ಹೇಳಿದರು.ಬ್ಯಾಂಕಿನ ಸಭಾಂಗಣದಲ್ಲಿ ನಡೆದ ಸರ್ವ ಸದಸ್ಯರ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯ ಬಜೆಟ್‌ನಲ್ಲಿ ತಿಳಿಸಿರುವಂತೆ ಜಿಲ್ಲೆಗೆ ಹಾಲು ಉತ್ಪಾದಕ ಘಟಕ ಸ್ಥಾಪಿತವಾದಲ್ಲಿ ರೈತಾಪಿ ವರ್ಗದವರಿಗೆ ಹೆಚ್ಚು ಹಾಲು ಸಂಗ್ರಹಣೆ ಮಾಡಲು ದುಡಿಯುವ ಬಂಡವಾಳ ರೂಪದಲ್ಲಿ ₹35 ಕೋಟಿ ಸಾಲ ಸೌಲಭ್ಯ ನೀಡಲು ಉದ್ದೇಶಿಸಲಾಗಿದೆ ಎಂದರು.ರಾಜ್ಯ ಹಾಗೂ ಕೇಂದ್ರ ಸರ್ಕಾರ ಜಾರಿಗೊಳಿಸಿದ ಪ್ಯಾಕ್ಸ್ ಎಮ್.ಎಸ್.ಸಿ ಯೋಜನೆಯಡಿ ₹32 ಕೋಟಿ ಸಾಲ ಮಂಜೂರು ಮಾಡಲಾಗಿದೆ. ಇನ್ನೂ ಹೊಸ ಸಂಘಗಳಿಗೆ ಸ್ವಂತ ಗೋದಾಮು ನಿರ್ಮಿಸಿಕೊಳ್ಳಲು ರಿಯಾಯಿತಿ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಕ್ಕೆ ಕ್ರಮ ವಹಿಸಲಾಗಿದೆ ಎಂದು ಭರವಸೆ ನೀಡಿದರು.

ಡಿಸಿಸಿ ಬ್ಯಾಂಕ್‌ ತನ್ನದೇ ಆದ ಸುಸಜ್ಜಿತ ಕಟ್ಟಡದಲ್ಲಿ ಬ್ಯಾಂಕಿನ ವಹಿವಾಟು ನಡೆಸುತ್ತಿದೆ. ಗ್ರಾಹಕರಿಗೆ ಬ್ಯಾಂಕಿನಿಂದ ಸಿಗುವ ಸೌಲಭ್ಯಗಳ ಕುರಿತು ಅರಿವು ಮೂಡಿಸಲು ಎಲ್ಲಾ ಶಾಖೆಗಳಲ್ಲೂ ದೂರದರ್ಶನ ಅಳವಡಿಸಿ ಗ್ರಾಹಕರನ್ನು ಜಾಗೃತ ಗೊಳಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಕೆಸಿಸಿ ಸಾಲಗಾರರನ್ನು ₹5 ಲಕ್ಷಗಳಿಗೆ ಮಿತಿಗೊಳಿಸಿ ಅಪಘಾತ ವಿಮಾ ಸೌಲಭ್ಯ ಒದಗಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದರು.ಪ್ರಸಕ್ತ ವರ್ಷದ ಮಾ.31 ಕ್ಕೆ ₹65.10 ಕೋಟಿ ಷೇರು ಬಂಡವಾಳವನ್ನು ಸಂಗ್ರಹಿಸಲಾಗಿದೆ. ಈ ನಿಟ್ಟಿನಲ್ಲಿ ಡಿಸಿಸಿ ಬ್ಯಾಂಕ್‌ ಅಭಿವೃದ್ಧಿ ಪಥದಲ್ಲಿ ಸಾಗಲು ಕಾರಣರಾದ, ಸಂಪೂರ್ಣ ಸಹಕಾರ ನೀಡಿದ ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳ ಸದಸ್ಯರಿಗೆ, ಆಡಳಿತ ಮಂಡಳಿ ಸದಸ್ಯರಿಗೆ ಎಲ್ಲಾ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ, ಕಾರ್ಯನಿರ್ವಹಣಾಧಿ ಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.ಕಾರ್ಯಕ್ರಮದಲ್ಲಿ ಅಪೆಕ್ಸ್ ಬ್ಯಾಂಕ್‌ ಅಧ್ಯಕ್ಷ ಬೆಳ್ಳಿ ಪ್ರಕಾಶ್, ಡಿಸಿಸಿ ಬ್ಯಾಂಕ್‌ನ ಉಪಾಧ್ಯಕ್ಷ ಎಚ್.ಬಿ.ಸತೀಶ್, ನಿರ್ದೇಶಕರಾದ ಕೆ.ಆರ್. ಆನಂದಪ್ಪ, ಟಿ.ಎಲ್. ರಮೇಶ್, ಡಿ.ಸಿ. ಶಂಕ್ರಪ್ಪ, ಎಚ್.ಬಿ. ಶಿವಣ್ಣ, ಎಸ್.ಜಿ. ರಾಮಪ್ಪ, ಎಚ್.ವಿ. ಸಂದೀಪ್‌ಕುಮಾರ್, ಎಸ್.ಎನ್‌.ರಾಮಸ್ವಾಮಿ, ಎಂ.ಎಸ್. ನಿರಂಜನ್, ಎಂ. ಪರಮೇಶ್ವರಪ್ಪ, ಸಹಕಾರ ಸಂಘಗಳ ಉಪ ನಿಬಂಧಕ ಡಿ.ಎಸ್. ತೇಜಸ್ವಿನಿ, ಅಪೆಕ್ಸ್ ಬ್ಯಾಂಕ್ ನಾಮಿನಿ ಸದಸ್ಯ ಎಲ್.ಜಗದೀಶ್ ಹಾಗೂ ಸಹಕಾರ ಸಂಘಗಳ ಜಂಟಿ ನಿಬಂಧಕ ಪ್ರವೀಣ್ ಬಿ. ನಾಯಕ್ ಉಪಸ್ಥಿತರಿದ್ದರು.

14 ಕೆಸಿಕೆಎಂ 7ಚಿಕ್ಕಮಗಳೂರಿನ ಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ಗುರುವಾರ ನಡೆದ ಬ್ಯಾಂಕಿನ ಸರ್ವ ಸದಸ್ಯರ ಸಭೆಯನ್ನು ಅಧ್ಯಕ್ಷ ಡಿ.ಎಸ್. ಸುರೇಶ್‌ ಉದ್ಘಾಟಿಸಿದರು. ರಾಜ್ಯ ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷ ಬೆಳ್ಳಿ ಪ್ರಕಾಶ್‌ ಹಾಗೂ ಡಿಸಿಸಿ ಬ್ಯಾಂಕಿನ ನಿರ್ದೇಶಕರು ಉಪಸ್ಥಿತರಿದ್ದರು.

PREV

Recommended Stories

ಮಹರ್ಷಿ ವಾಲ್ಮೀಕಿ ಕವಿಕುಲದ ಸಾರ್ವಭೌಮ: ಸಾಲವಾಡಗಿ
ಅಪಘಾತದಲ್ಲಿ ಪತ್ರಕರ್ತ ಕಾನಗೊಂಡ ಸಾವು