10 ಸಾವಿರ ಅಸಂಘಟಿತ ಕಾರ್ಮಿಕ ಫಲಾನುಭವಿಗಳ ನೋಂದಣಿಗೆ ಗುರಿ: ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ

KannadaprabhaNewsNetwork |  
Published : Feb 19, 2026, 02:45 AM IST
ಫೋಟೋವಿವರ- (18ಎಚ್‌ಪಿಟಿ7) ಹೊಸಪೇಟೆ ನಗರದಲ್ಲಿ ನಡೆದ ಅಸಂಘಟಿತ ವಲಯ ಕಾರ್ಮಿಕರಿಗೆ ಪಿಂಚಣಿ ಯೋಜನೆ ಜಿಲ್ಲಾ ಮಟ್ಟದ ಸಭೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ಸಾಂಕೇತಿಕವಾಗಿ ಅಸಂಘಟಿತ ಕಾರ್ಮಿಕರಿಗೆ ನೊಂದಣಿ ಪತ್ರ ನೀಡಿದರು | Kannada Prabha

ಸಾರಾಂಶ

ಚಮ್ಮಾರರು, ಚಿಂದಿ ಆಯುವವರು, ಮನೆ ಕೆಲಸದವರು ಮುಂತಾದ ಅಸಂಘಟಿತ ಕಾರ್ಮಿಕರು ಈ ಯೋಜನೆಯಡಿ ನೋಂದಾಯಿಸಿಕೊಳ್ಳಬಹುದು

ಹೊಸಪೇಟೆ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನಮಂತ್ರಿ ಶ್ರಮಯೋಗಿ ಮಾನ್​ಧನ್ ಯೋಜನೆಯಡಿ ಜಿಲ್ಲೆಯ ಹತ್ತು ಸಾವಿರ ಅಸಂಘಟಿತ ಕಾರ್ಮಿಕ ಫಲಾನುಭವಿಗಳ ನೋಂದಣಿಗೆ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದರು.ನಗರದ ಜಿಲ್ಲಾಡಳಿತ ಸಭಾಂಗಣದಲ್ಲಿ ಬುಧವಾರ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕಾರ್ಮಿಕ ಇಲಾಖೆ ವತಿಯಿಂದ ಅಸಂಘಟಿತ ವಲಯ ಕಾರ್ಮಿಕರಿಗೆ ಪಿಂಚಣಿ ಯೋಜನೆ ಜಿಲ್ಲಾ ಮಟ್ಟದ ಸಭೆಯಲ್ಲಿ ಅವರು ಮಾತನಾಡಿದರು.

ಪ್ರಧಾನಮಂತ್ರಿ ಶ್ರಮಯೋಗಿ ಮಾನ್​ಧನ್ ಪಿಂಚಣಿ ಯೋಜನೆಯಡಿ ರಿಕ್ಷಾ ಚಾಲಕರು, ಹಮಾಲುಗಳು, ಇಟ್ಟಿಗೆ ಭಟ್ಟಿ ಕಾರ್ಮಿಕರು, ಗೃಹ ಆಧಾರಿತ ಕಾರ್ಮಿಕರು, ಬೀದಿ ಬದಿ ವ್ಯಾಪಾರಿ, ಬಿಸಿಯೂಟ ಸಿದ್ಧಪಡಿಸುವವರು, ಚಮ್ಮಾರರು, ಚಿಂದಿ ಆಯುವವರು, ಮನೆ ಕೆಲಸದವರು ಮುಂತಾದ ಅಸಂಘಟಿತ ಕಾರ್ಮಿಕರು ಈ ಯೋಜನೆಯಡಿ ನೋಂದಾಯಿಸಿಕೊಳ್ಳಬಹುದು ಎಂದರು.

ಕೇಂದ್ರ ಸರ್ಕಾರವು 18 ವರ್ಷ ಮೇಲ್ಪಟ್ಟ ಕಾರ್ಮಿಕರು, ಫಲಾನುಭವಿಗಳು ಪಾವತಿಸುವ ವಂತಿಕೆಗೆ ಸಮಾನಾಂತರ ವಂತಿಕೆಯನ್ನು ಪಿಂಚಣಿ ಖಾತೆಗೆ ಪಾವತಿಸುತ್ತದೆ. 60 ವರ್ಷ ಪೂರ್ಣಗೊಂಡ ನಚಿತರ ತಿಂಗಳಿಗೆ ₹3000 ಖಚಿತ ಕನಿಷ್ಠ ಮಾಸಿಕ ಪಿಂಚಣಿ ಪಡೆಯಲು ಅರ್ಹರಾಗುತ್ತಾರೆ. ಫಲಾನುಭವಿಗಳ 10 ವರ್ಷದೊಳಗಾಗಿ ಯೋಜನೆಯಿಂದ ನಿರ್ಗಮಸಿದಲ್ಲಿ ಈ ಅವಧಿಗೆ ಉಳಿತಾಯ ಖಾತೆಗೆ ಪಾವತಿಸಲಾದ ಮೊತ್ತಕ್ಕೆ ಬಡ್ಡಿಯೊಂದಿಗೆ ಹಿಂದಿರುಗಿಸಲಾಗುತ್ತದೆ ಎಂದರು.

60 ವರ್ಷದ ಒಳಗಾಗಿ ಮೃತಪಟ್ಟಲ್ಲಿ ಅವರ ನಾಮಿನಿಗೆ ಮುಂದುವರೆಸಲು ಅವಕಾಶವಿದೆ. ಪಿಂಚಣಿ ಆರಂಭಗೊಂಡ ನಚಿತರ ಫಲಾನುಭವಿ ಆಕಸ್ಮಿಕವಾಗಿ ಮೃತಪಟ್ಟಲ್ಲಿ, ಅವರ ಪತ್ನಿ ಅಥವಾ ಪತಿಗೆ ಪಿಂಚಣಿಯ ಶೇ.50 ರಷ್ಟು ಪಿಂಚಣಿ ಪಡೆಯಬಹುದು ಎಂದರು.

ಕಾರ್ಮಿಕರಿಗೆ ಜೀವನ ಸಂಧ್ಯಾಕಾಲದಲ್ಲಿ ದುಡಿದು ತಮ್ಮನ್ನು ತಾವು ಪೋಷಿಸಲು ದೈಹಿಕವಾಗಿ, ಆರ್ಥಿಕ ಸದೃಢರಾಗಿರುವುದಿಲ್ಲ. ಹಿರಿಯ ನಾಗರಿಕರ ಭದ್ರತೆ ಕಲ್ಪಿಸುವ ಸಲುವಾಗಿ ಮಹತ್ವಾಕಾಂಕ್ಷಿ ನಿಶ್ಚಿತ ಪಿಂಚಣಿ ಯೋಜನೆ ಜಾರಿಗೆ ತಂದಿದೆ. ಪ್ರತಿಯೊಬ್ಬರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಡಿಸಿ ಕವಿತಾ ಎಸ್. ಮನ್ನಿಕೇರಿ ಸಲಹೆ ನೀಡಿದರು.

ಯೋಜನೆಯ ಫಲಾನುಭವಿಗಳಾಗಬೇಕಾದರೆ ಅಸಂಘಟಿತ ವಲಯದ ಕಾರ್ಮಿಕರಾಗಿರಬೇಕು. 18ರಿಂದ 40 ವರ್ಷದೊಳಗಿರಬೇಕು. ಮಾಸಿಕ ಆದಾಯ ₹15,000 ಅಥವಾ ಅದಕ್ಕಿಂತ ಕಡಿಮೆ ಇರಬೇಕು. ಎನ್.ಪಿ.ಎಸ್ ಹಾಗೂ ಆದಾಯ ತೆರಿಗೆ, ಇ.ಎಸ್.ಐ. ಮತ್ತು ಪಿ.ಎಫ್ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರಬಾರದು. ಅಂತಹ ಅಸಂಘಟಿತ ಕಾರ್ಮಿಕರು ಅಗತ್ಯ ದಾಖಲಾತಿಗಳೊಂದಿಗೆ ಹತ್ತಿರದ ಕಾಮನ್ ಸರ್ವಿಸ್ ಸೆಂಟರ್ ಮೂಲಕ ನೋಂದಾಯಿಸಿಕೊಳ್ಳಬಹುದು ಎಂದು ಅವರು ವಿವರಿಸಿದರು.

ನೊಂದಣಿಗೆ ಯಾವುದೇ ಶುಲ್ಕ ಭರಿಸುವಂತಿಲ್ಲ. ಒಂದು ವೇಳೆ ಶುಲ್ಕ ಪಡೆಯುವುದು ಗಮನಕ್ಕೆ ಬಂದಲ್ಲಿ ಸಂಬಂಧಪಟ್ಟವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಇದೇ ಸಂದರ್ಭದಲ್ಲಿ ಸಾಂಕೇತಿಕವಾಗಿ ಅಸಂಘಟಿತ ಕಾರ್ಮಿಕರಿಗೆ ನೋಂದಣಿ ಪತ್ರ ನೀಡಲಾಯಿತು.

ಜಿಪಂ ಸಿಇಒ ನೋಂಗ್ಜಾಯ್ ಮೋಹಮ್ಮದ್ ಅಲಿ ಅಕ್ರಮ್ ಷಾ ಮತ್ತು ಜಿಲ್ಲಾ ಕಾರ್ಮಿಕ ಅಧಿಕಾರಿ ಸೂರಪ್ಪ ಡೊಂಬರ ಮತ್ತೂರ್ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಂಡೋಸಲ್ಫಾನ್ ಬಾಧಿತರ ಪುನಶ್ಚೇತನ ಪುಣ್ಯದ ಕೆಲಸ: ಡಾ. ಶಂಕರ ರಾವ್
ಮುಂಡರಗಿ ಬಸ್ ತಂಗುದಾಣದಲ್ಲಿ ವಾಮಾಚಾರ!