ತರೀಕೆರೆ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ

KannadaprabhaNewsNetwork | Published : Mar 19, 2025 12:34 AM

ಸಾರಾಂಶ

ತರೀಕೆರೆತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ತರೀಕೆರೆ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಗೋವಿಂದೇಗೌಡ ಅವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನ ಸಭೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ, ತರೀಕೆರೆ

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ತರೀಕೆರೆ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಗೋವಿಂದೇಗೌಡ ಅವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನ ಸಭೆ ನಡೆಸಲಾಯಿತು.

ಗ್ಯಾರಂಟಿ ಯೋಜನೆಗಳ 5 ಇಲಾಖೆ ಅಧಿಕಾರಿಗಳಿಗೆ ತರೀಕೆರೆ ತಾಲೂಕಿನ ಎಲ್ಲಾ ಸೂಕ್ತ ಫಲಾನುಭವಿಗಳು ಈ ಯೋಜನೆ ಲಾಭ ಪಡೆಯಲು ಸಂಪೂರ್ಣವಾಗಿ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ರಮೇಶ್ ಗೋವಿಂದೇಗೌಡ ಸೂಚಿಸಿದರು. ಪ್ರತಿ ತಿಂಗಳು ತಮ್ಮ ಇಲಾಖೆಯಲ್ಲಿ ನಡೆಯುವ ಮಾಸಿಕ ಸಭೆಗಳಲ್ಲಿ ಭಾಗವಹಿಸಲು ತಮ್ಮ ಕಮಿಟಿಗೆ ತಿಳಿಸಬೇಕು ಹೇಳಿದರು. ಈ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಪಟ್ಟ ಎಲ್ಲಾ ಐದು ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ತರೀಕೆರೆ ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಅಧಿಕಾರಿ ಚರಣ್ ರಾಜ್ ಸಂಪೂರ್ಣ ಮಾಹಿತಿ ನೀಡಿದರು. ಮೆಸ್ಕಾಂ ಇಲಾಖೆ ಎ.ಇ.ಇ. ಮಂಜುನಾಥ್ ಗೃಹಜೋತಿ ಯೋಜನೆಗೆ ಸಂಬಂಧಿಸಿದ ಎಲ್ಲಾ ಫಲಾನುಭವಿಗಳಿಗೂ ನಮ್ಮ ಇಲಾಖೆಯಿಂದ ಸಂಪೂರ್ಣ ಸಹಕಾರ ನೀಡುತ್ತಿದ್ದೇವೆ ಎಂದು ತಿಳಿಸಿದರು. ಆಹಾರ ಇಲಾಖೆ ಅಧಿಕಾರಿಗಳಾದ ಜಗದೀಶ್ ಫೆಬ್ರವರಿ ತಿಂಗಳ ಹೆಚ್ಚುವರಿ ಐದು ಕೆಜಿ ಅಕ್ಕಿಗಳನ್ನು ಸೇರಿಸಿ ಈ ತಿಂಗಳು 15 ಕೆಜಿ ಅಕ್ಕಿ ವಿತರಿಸಲಾಗುವುದು ಎಂದು ತಿಳಿಸಿದರು.

ತರಿಕೆರೆ ತಾಲೂಕಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಅಧಿಕಾರಿಗಳು ಈ ತಿಂಗಳು ಸರ್ಕಾರದಿಂದ ಮಹಿಳಾ ಪ್ರಯಾಣಿಕರಿಗೆ ಸಿಕ್ಕಿರುವ ಅನುದಾನದ ಬಗ್ಗೆ ವಿವರಿಸಿದರು.ಯುವ ನಿಧಿ ಯೋಜನೆಗೆ ಸಂಬಂಧಿಸಿದಂತೆ ಯೋಜನಾಧಿಕಾರಿ ಕಾಲೇಜುಗಳಲ್ಲಿ ಕಾರ್ಯಕ್ರಮ ಏರ್ಪಡಿಸಿ ಅಧ್ಯಕ್ಷರು ,ಸಮಿತಿ ಸದಸ್ಯರು, ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿ ಈ ಯೋಜನೆ ಲಾಭವನ್ನು ಪಡೆಯುವಂತೆ ಚರ್ಚಿಸಲಾಗುವುದು ಎಂದು ತಿಳಿಸಿದರು. ತರೀಕೆರೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ದೇವೇಂದ್ರಪ್ಪ ಸರ್ಕಾರದ ಈ ಕಾರ್ಯಕ್ರಮದಲ್ಲಿ ಎಲ್ಲ ಐದು ಇಲಾಖೆಯ ಅಧಿಕಾರಿಗಳು ಪ್ರತಿ ತಿಂಗಳಲ್ಲಿ ಎರಡು ಬಾರಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೊಂಡು ಸರಿಯಾದ ವಿವರ ನೀಡಬೇಕೆಂದು ತಿಳಿಸಿದರು.ಇಂದಿನ ಸಭೆಯಲ್ಲಿ ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರಾದ ಲಕ್ಷ್ಮಿಬಾಯಿ. ಭಾಗ್ಯಲಕ್ಷ್ಮಿ. ಮಣಿಕಂಠ. ಶ್ರೀಧರ್. ದೇವರಾಜ್. ಮಾಲತೇಶ್. ಸಂತೋಷ್ ಕುಮಾರ್. ಸಂತೋಷ್ ನಾಯಕ್. ಹರೀಶ್ ಕುಮಾರ್. ಭಾಗವಹಿಸಿದ್ದರು-

18ಕೆಟಿಆರ್.ಕೆ.8ಃ ತರೀಕೆರೆಯಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಗೋವಿಂದೇಗೌಡರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನ ಸಭೆ ನಡೆಸಲಾಯಿತು. ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ದೇವೇಂದ್ರಪ್ಪ ಮತ್ತಿತರರು ಇದ್ದರು.

Share this article