ಕನ್ನಡಪ್ರಭ ವಾರ್ತೆ ಕಾರ್ಕಳ
ಪ್ರಕಟಣೆ ನೀಡಿದ ಅವರು, ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಸೆಸ್, ಪಾರ್ಕಿಂಗ್ ಟ್ಯಾಕ್ಸ್, ನೀರಿನ ದರ ಹೆಚ್ಚಳ ಸೇರಿದಂತೆ ಹಲವಾರು ರೀತಿಯಲ್ಲಿ ಸಿದ್ದರಾಮಯ್ಯ ಸರ್ಕಾರ ‘ತೆರಿಗೆ ಭಯೋತ್ಪಾದನೆ’ ನಡೆಸುತ್ತಿದೆ ಎಂದು ಆರೋಪಿಸಿದರು. ಗಣೇಶ ಹಬ್ಬದ ಸಂಭ್ರಮದ ಮರುದಿನವೇ ದಸ್ತಾವೇಜುಗಳ ನೋಂದಣಿ ಹಾಗೂ ಮುದ್ರಾಂಕ ಶುಲ್ಕವನ್ನು ಶೇ.1ರಿಂದ 2ಕ್ಕೆ ಏರಿಸಲಾಗಿದ್ದು, ಸೋಮವಾರದಿಂದ ರಾಜ್ಯಾದ್ಯಂತ ಜಾರಿಗೆ ಬರಲಿದೆ ಎಂದರು.
ಮಂಗಳೂರು ವಿಶ್ವವಿದ್ಯಾಲಯದ ಪಿಜಿ ಕೋರ್ಸ್‌ಗಳ ಪ್ರವೇಶ ಶುಲ್ಕವನ್ನೂ ಹೆಚ್ಚಿಸಿರುವುದು ಕಾಂಗ್ರೆಸ್ ಸರ್ಕಾರದ ದರ ಏರಿಕೆಯ ಬರೆ ಜನರ ಮೇಲೆ ಬಿದ್ದಿರುವುದಕ್ಕೆ ಮತ್ತೊಂದು ಸಾಕ್ಷಿ ಎಂದು ಸುನಿಲ್ ಕುಮಾರ್ ಹೇಳಿದರು.ಅಭಿವೃದ್ಧಿ ವಿಚಾರ ರಾಜ್ಯದಲ್ಲಿ ಸತ್ತೇ ಹೋಗಿದ್ದು, ಕಾಂಗ್ರೆಸ್ ಸರ್ಕಾರ ಸಲ್ಲದ ವಿಚಾರಗಳಲ್ಲಿ ಜನರ ಗಮನ ಹರಿಸುವ ಕೆಲಸದಲ್ಲಿ ನಿರತರಾಗಿದೆ ಎಂದು ಟೀಕಿಸಿದರು. ಧರ್ಮಸ್ಥಳದ ವಿರುದ್ಧ ಎಡಪಂಥೀಯರು ನಡೆಸಿದ ಷಡ್ಯಂತ್ರ ಹಾಗೂ ಮೈಸೂರು ದಸರಾ ಉದ್ಘಾಟನೆಗೆ ಅನ್ಯಮತೀಯರಿಗೆ ಆಹ್ವಾನ ನೀಡಿದಂತಹ ವಿಷಯಗಳನ್ನು ಮುಂದಿಟ್ಟು ಜನಸಮಸ್ಯೆಗಳನ್ನು ಹತ್ತಿಕ್ಕುವ ಕೆಲಸವೇ ಸಿದ್ದರಾಮಯ್ಯ ಸರ್ಕಾರದ ನಿತ್ಯಕಾಯಕ ಎಂದು ಅವರು ವಾಗ್ದಾಳಿ ನಡೆಸಿದರು.